Homeಮುಖಪುಟಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

ಸಂಸತ್ತಿನಲ್ಲಿ ಕ್ಷೇತ್ರ ಪುನರ್‌ವಿಂಗಡನೆ ಗದ್ದಲ: ಉಭಯ ಸದನಗಳ ಕಲಾಪ ಮುಂದೂಡಿಕೆ

- Advertisement -
- Advertisement -

ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಹೊಂದಿರುವ ಟಿ-ಶರ್ಟ್‌ಗಳನ್ನು ಧರಿಸಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಸಂಸತ್ತಿನ ಉಭಯ ಸದನಗಳ ಕಲಾಪಗಳನ್ನು ಗುರುವಾರ (ಮಾ.20) ಒಂದು ಮಟ್ಟಿಗೆ ಮುಂದೂಡಲಾಯಿತು.

ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರುದ್ದ ವಿಪಕ್ಷಗಳ ಸದಸ್ಯರು ಪ್ರತಿಭಟನೆ ಆರಂಭಿಸಿದಾಗ ಸ್ಪೀಕರ್‌ ಪೀಠದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ಸದಸ್ಯರು ತಮ್ಮ ಆಸನಗಳಲ್ಲಿ ಹೋಗಿ ಕೂರುವಂತೆ ವಿನಂತಿಸಿದರು.

“ಕೃಷಿಯ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ದೇಶದ ಇಂತಹ ಪ್ರಮುಖ ವಿಷಯ ಕುರಿತು ನೀವು ಚರ್ಚೆ ನಡೆಯಲು ಬಿಡುತ್ತಿಲ್ಲ. ನೀವು ಸಹಕರಿಸಿ ಕಲಾಪ ಮುಂದುವರಿಸಲು ಬಿಡಿ ಎಂದು ನಾನು ವಿನಂತಿಸುತ್ತೇನೆ” ಎಂದು ಸ್ಪೀಕರ್ ಪ್ರತಿಪಕ್ಷ ಸದಸ್ಯರಿಗೆ ಮನವಿ ಮಾಡಿದರು.

ಇದಕ್ಕೆ ಒಪ್ಪದೆ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ಮುಂದುವರಿಸಿದಾಗ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಿದರು. ಪ್ರತಿಪಕ್ಷ ಸದಸ್ಯರ ಪ್ರತಿಭಟನೆ ಹಿನ್ನೆಲೆ, ಗುರುವಾರ ಲೋಕಸಭಾ ಕಲಾಪ ಪದೇ ಪದೇ ಮುಂದೂಡಿಕೆಯಾಯಿತು.

ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡುವ ಮುನ್ನ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕೆ ಸ್ಪೀಕರ್ ಓಂ ಬಿರ್ಲಾ ಆಕ್ಷೇಪಿಸಿದರು. ಇಂತಹ ನಡವಳಿಕೆಗಳು ಸದನದ ಕಾರ್ಯವಿಧಾನದ ನಿಯಮಗಳಿಗೆ ವಿರುದ್ಧವಾಗಿವೆ ಎಂದು ಹೇಳಿದರು. ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನದವರೆಗೆ ಮುಂದೂಡಿದ್ದರು.

ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗಲೂ ವಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿಯಿತು. ಈ ವೇಳೆ ಸ್ಪೀಕರ್‌ ಪೀಠದಲ್ಲಿದ್ದ ಟಿಡಿಪಿ ಸಂಸದ ಟೆನ್ನೇಟಿ ಅವರು ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು.

ಡಿಎಂಕೆ ಸದಸ್ಯರು ಪ್ರತಿಭಟನೆಯ ಭಾಗವಾಗಿ ಲೋಕಸಭೆಯಲ್ಲಿ ಬಿಳಿ ಟಿ-ಶರ್ಟ್‌ಗಳನ್ನು ಧರಿಸಿದ್ದರು, ಅವುಗಳ ಮೇಲೆ ‘#fairdelimitation ತಮಿಳುನಾಡು ಹೋರಾಡುತ್ತದೆ, ತಮಿಳುನಾಡು ಗೆಲ್ಲುತ್ತದೆ’ ಎಂಬ ಘೋಷಣೆಗಳನ್ನು ಬರೆಯಲಾಗಿತ್ತು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಪೀಕರ್ ಓಂ ಬಿರ್ಲಾ ಅವರು “ಸದನವು ನಿಯಮಗಳು ಮತ್ತು ಕಾರ್ಯವಿಧಾನಗಳೊಂದಿಗೆ ಕಾರ್ಯನಿರ್ವಹಿಸುತ್ತದೆ. ಸದಸ್ಯರು ಸದನದ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕು. ಆದರೆ ಕೆಲವು ಸಂಸದರು ನಿಯಮಗಳನ್ನು ಪಾಲಿಸುತ್ತಿಲ್ಲ ಮತ್ತು ಘನತೆಯನ್ನು ಉಲ್ಲಂಘಿಸುತ್ತಿದ್ದಾರೆ. ಇದು ಸ್ವೀಕಾರಾರ್ಹವಲ್ಲ ಎಂದು ಬೆಳಿಗ್ಗೆ 11 ಗಂಟೆಗೆ ಹೇಳಿದ್ದರು.

ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿ ಬಂದಿದ್ದ ಸದಸ್ಯರಿಗೆ ಸ್ಪೀಕರ್ ಸದನದಿಂದ ಹೊರಗೆ ಹೋಗಿ ಘನತೆಯನ್ನು ಕಾಪಾಡಿಕೊಳ್ಳುವ ಸರಿಯಾದ ಉಡುಪಿನೊಂದಿಗೆ ಹಿಂತಿರುಗಲು ನಿರ್ದೇಶಿಸಿದ್ದರು.

“ಒಬ್ಬ ನಾಯಕ ಎಷ್ಟೇ ದೊಡ್ಡವನಾಗಿದ್ದರೂ, ಸದನದೊಳಗೆ ಇಂತಹ ಅಗೌರವದ ಉಡುಪು ಸ್ವೀಕಾರಾರ್ಹವಲ್ಲ” ಎಂದಿದ್ದರು.

“ಹೊರಗೆ ಹೋಗಿ, ಬಟ್ಟೆ ಬದಲಾಯಿಸಿ ಸರಿಯಾದ ಉಡುಪಿನೊಂದಿಗೆ ಬನ್ನಿ” ಎಂದು ಸಂಸದೀಯ ನಿಯಮಗಳನ್ನು ಉಲ್ಲೇಖಿಸಿ ಸದಸ್ಯರಿಗೆ ಹೇಳಿ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದ್ದರು.

ಡಿಎಂಕೆ ಸದಸ್ಯರು ಲೋಕಸಭೆಯಲ್ಲಿ ಕ್ಷೇತ್ರ ಪುನರ್ವಿಂಗಡಣೆಯ ವಿಷಯವನ್ನು ಎತ್ತಲು ಪ್ರಯತ್ನಿಸುತ್ತಿದ್ದಾರೆ. ಆದರೆ, ಜನಗಣತಿ ಇನ್ನೂ ನಡೆಯದ ಕಾರಣ ಈ ವಿಷಯವು ಸರ್ಕಾರದ ಗಮನದಲ್ಲಿಲ್ಲ ಎಂದು ಹೇಳಿ ಸ್ಪೀಕರ್ ಅವರ ಡಿಎಂಕೆ ಸಂಸದರ ಮನವಿಯನ್ನು ತಿರಸ್ಕರಿಸಿದ್ದಾರೆ.

ರಾಜ್ಯಸಭೆ ಕಲಾಪ ಮುಂದೂಡಿಕೆ

ಗುರುವಾರ ಮಧ್ಯಾಹ್ನ 2 ಗಂಟೆಗೆ ರಾಜ್ಯಸಭೆ ಮತ್ತೆ ಸೇರಿದ ತಕ್ಷಣ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದರ ಬಗ್ಗೆ ಗದ್ದಲ ಉಂಟಾದ ಕಾರಣ, ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು.

ಡಿಎಂಕೆ ಸಂಸದರ ಪ್ರತಿಭಟನೆಯ ಕಾರಣಕ್ಕೆ ಊಟದ ವಿರಾಮದ ಮೊದಲ ಅವಧಿಯಲ್ಲಿ ಮೇಲ್ಮನೆಯ ಕಲಾಪವನ್ನು ಮೂರು ಬಾರಿ ಮುಂದೂಡಲ್ಪಟ್ಟವು.

“ಮಾರ್ಚ್ 21 ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸದನವನ್ನು ಮುಂದೂಡಲಾಗಿದೆ” ಎಂದು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ದಾಖಲೆಗಳನ್ನು ಮಂಡಿಸಿದ ಕೂಡಲೇ, ಅಧ್ಯಕ್ಷ ಜಗದೀಪ್ ಧನ್ಕರ್‌ ಅವರು ಮಧ್ಯಾಹ್ನ 12 ಗಂಟೆಯವರೆಗೆ ಕಲಾಪವನ್ನು ಒಂದು ಗಂಟೆ ಮುಂದೂಡಿದ್ದರು ಮತ್ತು ವಿವಿಧ ಪಕ್ಷಗಳ ಸದನ ನಾಯಕರ ಸಭೆ ಕರೆದಿದ್ದರು.

ಆದಾಗ್ಯೂ, ಈ ವಿಷಯದ ಬಗ್ಗೆ ಬಿಕ್ಕಟ್ಟು ಮುಂದುವರೆಯಿತು ಮತ್ತು ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ಉಪಾಧ್ಯಕ್ಷ ಹರಿವಂಶ್ ಅವರು ಕಲಾಪವನ್ನು ಮತ್ತೆ 15 ನಿಮಿಷಗಳ ಕಾಲ ಮುಂದೂಡಲಾಗಿದೆ ಎಂದು ಘೋಷಿಸಿದರು.

12.15 ಕ್ಕೆ, ಅವರು ಮತ್ತೆ ಬಂದು, ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ ಎಂದು ಘೋಷಿಸಿದರು, ಆದರೆ ಬಿಕ್ಕಟ್ಟು ಇನ್ನೂ ಮುಂದುವರೆದಿತ್ತು.

ಕಲಾಪ ಮುಂದೂಡಿಕೆಗೆ ಸಭಾಧ್ಯಕ್ಷರು ಯಾವುದೇ ಕಾರಣವನ್ನು ಉಲ್ಲೇಖಿಸದಿದ್ದರೂ, ಡಿಎಂಕೆ ಸದಸ್ಯರು ಘೋಷಣೆಗಳನ್ನು ಬರೆದ ಟಿ-ಶರ್ಟ್‌ಗಳನ್ನು ಧರಿಸಿದ್ದಕ್ಕೆ ಸಭಾಧ್ಯಕ್ಷರು ಆಕ್ಷೇಪ ವ್ಯಕ್ತಪಡಿಸಿದರು.

40 ವರ್ಷದ ಬಳಿಕ ಸುಪ್ರೀಂಕೋರ್ಟ್‌ನಿಂದ ನ್ಯಾಯ ಪಡೆದ ಅತ್ಯಾಚಾರ ಸಂತ್ರಸ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...