Homeಮುಖಪುಟಬಾಟಲ್ ನೀರು ʼಅಧಿಕ ಅಪಾಯಕಾರಿ ಆಹಾರ' - FSSAI ಘೋಷಣೆ

ಬಾಟಲ್ ನೀರು ʼಅಧಿಕ ಅಪಾಯಕಾರಿ ಆಹಾರ’ – FSSAI ಘೋಷಣೆ

- Advertisement -
- Advertisement -

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್ ಮಾಡಲಾದ ಕುಡಿಯುವ ಮಿನರಲ್ ವಾಟರ್ ಮತ್ತು ಖನಿಜಯುಕ್ತ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಪರಿಗಣಿಸಿದ್ದು, ವಾರ್ಷಿಕ ತಪಾಸಣೆಗಳನ್ನು ಕಡ್ಡಾಯಗೊಳಿಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ನವೆಂಬರ್ 29 ರಂದು ಹೊರಡಿಸಿದ ಆದೇಶದಲ್ಲಿ, ಬಾಟಲ್ ಕುಡಿಯುವ ಮತ್ತು ಖನಿಜಯುಕ್ತ ನೀರನ್ನು ಹೆಚ್ಚಿನ ಅಪಾಯಕಾರಿ ಆಹಾರ ವಿಭಾಗದಲ್ಲಿ ಸೇರಿಸಲು ತಿದ್ದುಪಡಿ ಮಾಡುತ್ತಿದೆ ಎಂದು ಹೇಳಿತ್ತು. ಬಾಟಲ್ ನೀರು

ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣೀಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿತ್ತು. ಇದರಿಂದ ಕೆಲವು ಉತ್ಪನ್ನಗಳಿಗೆ ಕಡ್ಡಾಯ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಪ್ರಮಾಣೀಕರಣ ಅಗತ್ಯವಾಗಿಲ್ಲದ ಕಾರಣ, ‘ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಮತ್ತು ಮಿನರಲ್ ವಾಟರ್’ ಅನ್ನು ‘ಅಧಿಕ ಅಪಾಯದ ಆಹಾರ ವರ್ಗಗಳ’ ಅಡಿಯಲ್ಲಿ ಪರಿಗಣಿಸಲಾಗುತ್ತದೆ’ ಎಂದು FSSAI ಆದೇಶದಲ್ಲಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ಯಾಕೇಜ್ ಮಾಡಲಾದ ಕುಡಿಯುವ ನೀರನ್ನು ʼಹೆಚ್ಚಿನ ಅಪಾಯದ ಆಹಾರ ವರ್ಗʼ ಎಂದು ಘೋಷಿಸಿದ FSSAI ಗ್ರಾಹಕರ ರಕ್ಷಣೆ ಮತ್ತು ಪ್ಯಾಕೇಜ್ ಮಾಡಿದ ನೀರಿನ ಉದ್ಯಮದಲ್ಲಿ ಗುಣಮಟ್ಟ ಕಾಪಾಡಲು ಈ ಆದೇಶ ನೀಡಲಾಗಿದೆ ಎನ್ನಲಾಗಿದೆ. ಬಾಟಲ್ ನೀರು

ʼʼಹೆಚ್ಚಿನ ಅಪಾಯದ ಆಹಾರ ವರ್ಗʼದ ಅಡಿಯಲ್ಲಿ ಬರುವ ಆಹಾರ ಉತ್ಪನ್ನಗಳನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುತ್ತದೆ. ಪ್ಯಾಕೇಜ್ಡ್ ಕುಡಿಯುವ ನೀರು ಮತ್ತು ಖನಿಜಯುಕ್ತ ನೀರಿನ ತಯಾರಕರು ಪ್ರತಿ ವರ್ಷಕ್ಕೊಮ್ಮೆ ಅಪಾಯ ಆಧಾರಿತ ತಪಾಸಣೆಗೆ ಒಳಗಾಗುತ್ತಾರೆ. ಪರವಾನಗಿ ಅಥವಾ ನೋಂದಣಿಯನ್ನು ನೀಡುವ ಮೊದಲು ಕೂಡ ತಪಾಸಣೆ ನಡೆಸಲಾಗುತ್ತದೆ”

ಅಕ್ಟೋಬರ್‌ನಲ್ಲಿ ಪ್ಯಾಕೇಜ್ಡ್ ಕುಡಿಯುವ ನೀರು ಸೇರಿದಂತೆ ಕೆಲವು ಉತ್ಪನ್ನಗಳಿಗೆ ಕಡ್ಡಾಯವಾದ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಪ್ರಮಾಣೀಕರಣವನ್ನು ತೆಗೆದುಹಾಕಲಾಗಿತ್ತು. 2023 ರಲ್ಲಿ ಸುಮಾರು $3,790 ಮಿಲಿಯನ್ ಮೌಲ್ಯದ ಮಾರುಕಟ್ಟೆಯಿದ್ದ ಭಾರತೀಯ ಬಾಟಲ್ ನೀರಿನ ವ್ಯವಹಾರವು 2030 ರ ವೇಳೆಗೆ $8,922 ಮಿಲಿಯನ್ ತಲುಪುತ್ತದೆ ಎಂದು ಟ್ರೇಡ್ ಪ್ರಮೋಷನ್ ಕೌನ್ಸಿಲ್ ಆಫ್ ಇಂಡಿಯಾ ಅಂದಾಜಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...