Homeಮುಖಪುಟಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ; ಮನನೊಂದು ಕೀಟನಾಶಕ ಕುಡಿದು ಸಾವನ್ನಪ್ಪಿದ ಬಾಲಕ

ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ; ಮನನೊಂದು ಕೀಟನಾಶಕ ಕುಡಿದು ಸಾವನ್ನಪ್ಪಿದ ಬಾಲಕ

- Advertisement -
- Advertisement -

ಅಂಗಡಿಯವನಿಂದ ಚಿಪ್ಸ್ ಪ್ಯಾಕೆಟ್ ಕದ್ದ ಆರೋಪ ಎದುರಿಸುತ್ತಿದ್ದ 12 ವರ್ಷದ ಬಾಲಕ ಕೀಟನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದು, ಕೋಲ್ಕತ್ತಾ ಬಳಿಯ ಪಶ್ಚಿಮ ಮೇದಿನಿಪುರ ಜಿಲ್ಲೆಯ ಪನ್ಸ್ಕುರಾದಲ್ಲಿ ದುರ್ಘನೆ ನಡೆದಿದೆ.

ಗುರುವಾರ ಸಂಜೆ ಪನ್ಸ್ಕುರಾ ಪ್ರದೇಶದ ಗೋಸೈಬರ್ ಬಜಾರ್‌ನಲ್ಲಿರುವ ಅಂಗಡಿಯಿಂದ 7 ನೇ ತರಗತಿಯ ವಿದ್ಯಾರ್ಥಿ ಕೃಷೇಂದು ದಾಸ್ ಅಂಗಡಿ ಮಾಲೀಕ ಶುಭಂಕರ್ ದೀಕ್ಷಿತ್ ಸಿಗದ ಕಾರಣ ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ತೆಗೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಯಾವುದೇ ಪ್ರತಿಕ್ರಿಯೆಯಿಲ್ಲದೆ ಅವನು “ಚಿಕ್ಕಪ್ಪ ನಾನು ಚಿಪ್ಸ್ ಖರೀದಿಸುತ್ತೇನೆ” ಎಂದು ಪದೇಪದೆ ಕರೆದಿದ್ದನು, ಅಂತಿಮವಾಗಿ ಒಂದು ಪ್ಯಾಕೆಟ್ ಚಿಪ್ಸ್‌ನೊಂದಿಗೆ ಅಂಗಡಿಯಿಂದ ಹೊರಟುಹೋದನು ಎಂದು ಅಧಿಕಾರಿ ಬಾಲಕನ ತಾಯಿ ಹೇಳಿಕೆ ಉಲ್ಲೇಖಿಸಿ ಹೇಳಿದರು.

ದೀಕ್ಷಿತ್ ಬಾಲಕನ ಬೆನ್ನಟ್ಟಿದ್ದಾನೆ ಎಂದು ಆರೋಪಿಸಲಾಗಿದೆ, ಅವರು ಶೀಘ್ರದಲ್ಲೇ ಅಂಗಡಿಗೆ ಹಿಂತಿರುಗಿ, ಕಪಾಳಮೋಕ್ಷ ಮಾಡಿ ಸಾರ್ವಜನಿಕರ ಮುಂದೆ ಬಸ್ಕಿ ಹೊಡೆಯಲು ಹೇಳಿದರು ಎಂದು ಅಧಿಕಾರಿಯು ಕುಟುಂಬದ ದೂರನ್ನು ಉಲ್ಲೇಖಿಸಿ ಹೇಳಿದರು.

ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು, ದಾಸ್ ಅವರ ತಾಯಿಯನ್ನು ಸ್ಥಳಕ್ಕೆ ಕರೆಸಲಾಯಿತು. ಅವರು ಸಹ ಬಾಲಕನನ್ನು ಗದರಿಸಿ ಕಪಾಳಮೋಕ್ಷ ಮಾಡಿದರು. ಆದರೆ, ಹುಡುಗ ಅಂಗಡಿಯ ಚಿಪ್ಸ್‌ ಪ್ಯಾಕೆಟ್ ಅನ್ನು ಎತ್ತಿಕೊಂಡು, ನಂತರ ಬಂದು ಹಣ ನೀಡಲು ಯೋಚಿಸಿದ್ದೆ ಎಂದು ಹೇಳಿಕೊಂಡಿದ್ದಾನೆ.

ಅಂಗಡಿಯ ಮಾಲೀಕರ ಒಪ್ಪಿಗೆಯಿಲ್ಲದೆ ಪ್ಯಾಕೆಟ್ ಎತ್ತಿದ್ದಕ್ಕಾಗಿ ಕ್ಷಮೆಯಾಚಿಸಿ ತಕ್ಷಣ ಹಣ ನೀಡಲು ಸಹ ಅವನು ಮುಂದಾದನು. ಆದರೆ, ಅಂಗಡಿಯ ಮಾಲೀಕರು ಅವನು ಸುಳ್ಳು ಹೇಳುತ್ತಿದ್ದಾನೆ ಎಂದು ಆರೋಪಿಸಿದರು.

ನಂತರ ದುಃಖಿತನಾದ ಕೃಷ್ಣೇಂದು ತನ್ನ ತಾಯಿಯೊಂದಿಗೆ ತನ್ನ ಮನೆಗೆ ಹಿಂತಿರುಗಿ, ಒಳಗಿನಿಂದ ತನ್ನ ಕೋಣೆಯ ಬಾಗಿಲನ್ನು ಚಿಲಕ ಹಾಕಿದ್ದಾರೆ. ಬಳಿಕ ಆತ ಬಾಗಿಲು ತೆರೆಯಲಿಲ್ಲ.

ಸ್ವಲ್ಪ ಸಮಯದ ನಂತರ ಅವನ ತಾಯಿ ನೆರೆಹೊರೆಯವರೊಂದಿಗೆ ಬಾಗಿಲು ಒಡೆದು ನೋಡಿದಾಗ ಅವನ ಬಾಯಿಯಿಂದ ನೊರೆ ಬರುತ್ತಿರುವುದು, ಅವನ ಪಕ್ಕದಲ್ಲಿ ಅರ್ಧ ಖಾಲಿ ಕೀಟನಾಶಕ ಬಾಟಲಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿ ಹೇಳಿದರು. ಬಂಗಾಳಿ ಭಾಷೆಯಲ್ಲಿ ಅವನು ಬರೆದಿದ್ದಾನೆಂದು ಹೇಳಲಾದ ಡೆತ್‌fನೋಟ್ ಪಕ್ಕದಲ್ಲಿ ಬಿದ್ದಿರುವುದು ಕಂಡುಬಂದಿದೆ.

“ಅಮ್ಮಾ, ನಾನು ಕಳ್ಳನಲ್ಲ. ನಾನು ಕದ್ದಿಲ್ಲ. ನಾನು ಕಾಯುತ್ತಿದ್ದಾಗ ಚಿಕ್ಕಪ್ಪ (ಅಂಗಡಿಗಾರ) ಸುತ್ತಮುತ್ತ ಇರಲಿಲ್ಲ. ಹಿಂತಿರುಗುವಾಗ ರಸ್ತೆಯಲ್ಲಿ ಬಿದ್ದಿದ್ದ ಕುರ್ಕುರೆ ಪ್ಯಾಕೆಟ್ ಅನ್ನು ಗಮನಿಸಿ ಅದನ್ನು ಎತ್ತಿಕೊಂಡೆ. ನನಗೆ ಕುರ್ಕುರೆ ತುಂಬಾ ಇಷ್ಟ” ಎಂದು ಟಿಪ್ಪಣಿಯಲ್ಲಿ ಹೇಳಲಾಗಿದೆ.

“ಹೊರಡುವ ಮೊದಲು ನಾನು ಹೇಳಿದ ಕೊನೆಯ ಮಾತುಗಳು ಇವು. ದಯವಿಟ್ಟು ಈ ಕೃತ್ಯಕ್ಕೆ (ಕೀಟನಾಶಕ ಸೇವಿಸುವ) ನನ್ನನ್ನು ಕ್ಷಮಿಸಿ”.

ಅವರನ್ನು ತಮ್ಲುಕ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಐಸಿಯುಗೆ ದಾಖಲಿಸಲಾಯಿತು ಆದರೆ ಶೀಘ್ರದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಬೆಟ್ಟಿಂಗ್ ಅಪ್ಲಿಕೇಶನ್‌ ನಿಷೇಧಿಸುವಂತೆ ಅರ್ಜಿ; ಕೇಂದ್ರಕ್ಕೆ ನೋಟಿಸ್ ಕೊಟ್ಟ ಸುಪ್ರೀಂ ಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...