Homeಅಂತರಾಷ್ಟ್ರೀಯತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ...

- Advertisement -
- Advertisement -

ಅಕ್ಟೋಬರ್ 7 ರಂದು ನಡೆಯುವ ಜರ್ಮನ್-ಭಾರತೀಯ ಸ್ಟಾರ್ಟಪ್ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಅತಿಥಿ ಭಾಷಣಕಾರರಾಗಿದ್ದು, ಇದನ್ನು ವಿರೋಧಿಸಿ ಜರ್ಮನಿಯಲ್ಲಿರುವ ಭಾರತೀಯರು ಹ್ಯಾಂಬರ್ಗ್‌ನಲ್ಲಿರುವ ಭಾರತದ ರಾಯಭಾರಿಗೆ ಪತ್ರಬರೆದಿದ್ದಾರೆ.

ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಮತ್ತು ಹ್ಯಾಂಬರ್ಗ್-ಭಾರತದ ನಡುವೆ ಆರ್ಥಿಕ ಸಂಬಂಧಗಳನ್ನು ಬೆಂಬಲಿಸುವ ಸಲುವಾಗಿ, ಅಕ್ಟೋಬರ್ 7 ರಂದು ಗ್ಲೋಮನ್ ಕನ್ಸಲ್ಟಿಂಗ್ GmbH ಸಹಭಾಗಿತ್ವದಲ್ಲಿ ಭಾರತದ ರಾಯಭಾರ ಕಛೇರಿ, “ಇಂಡಿಯಾ ಸ್ಟಾರ್ಟಪ್ ಕಾನ್ಫರೆನ್ಸ್- 2020” ಕಾರ್ಯಕ್ರಮವನ್ನು ನಡೆಸುತ್ತಿದೆ. ಈ ಕಾರ್ಯಕ್ರಮದ ಸಂಘಟಕರಿಗೆ ಪತ್ರ ಬರೆದಿರುವ ಜರ್ಮನ್ ಭಾರತೀಯರು, ಭಾಷಣಕಾರರ ಪಟ್ಟಿಯಲ್ಲಿರುವ ಹೆಸರಿನ ಪೈಕಿ, ಆರ್‌ಎಸ್ಎಸ್‌ನಿಂದ ಪ್ರೇರೇಪಿತವಾಗಿ ಪ್ರಚೋದನಕಾರಿ ಮತ್ತು ಕೋಮುವಾದಿ ಭಾಷಣಗಳನ್ನು ಮಾಡುವ ಬೆಂಗಳೂರಿನ ಸಂಸದ ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ಆಕ್ಷೇಪಿಸಿದ್ದಾರೆ ಎಂದು “ಟು ಸರ್ಕಲ್ಸ್‌.ನೆಟ್” ವರದಿ ಮಾಡಿದೆ.

ಇದನ್ನೂ ಓದಿ: ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಪತ್ರದಲ್ಲಿ ತಮ್ಮ ಜಾತ್ಯಾತೀತತೆಯ ಅಭಿಪ್ರಾಯಗಳನ್ನು ಉಲ್ಲೇಖಿಸಿ, “ಇದು ನಾವು ರಚಿಸುತ್ತಿರುವ ಭಾರತ. ಇಲ್ಲಿಯವರೆಗೆ ನೀವು ಬಿಂಬಿಸಿರುವ ಟೊಳ್ಳು ಜಾತ್ಯಾತೀತತೆ ಇನ್ನುಮುಂದೆ ಕೆಲಸ ಮಾಡುವುದಿಲ್ಲ” ಎಂದು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ತಿರುಪತಿ ವರ್ಸಸ್‌ ತಬ್ಲಿಘಿ: ಸಾಂಕ್ರಾಮಿಕದ ಕೋಮುವಾದೀಕರಣಕ್ಕೆ ಸ್ಪಷ್ಟ ಉದಾಹರಣೆ

ವಾಸ್ತವಿಕವಾಗಿ ಉಭಯ ದೇಶಗಳ ವ್ಯಾಪಾರ ಮತ್ತು ಹೂಡಿಕೆಗಳಲ್ಲಿ ಅಂತರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸಲು ಸೃಷ್ಟಿಸಿರುವ ಈ ವೇದಿಕೆಯು ಪ್ಯಾನಲಿಸ್ಟ್‌ಗಳ ಅಧಿಕೃತ ರಿಜಿಸ್ಟರ್‌ ಸಂಸದರ ಹೆಸರನ್ನು ಹೊಂದಿದೆ. ಹಾಗಾಗಿ ಈ ಪತ್ರದಲ್ಲಿ ಭಾರತದ ರಾಯಭಾರಿಯ ನಿರ್ಧಾರವನ್ನು ಪ್ರಶ್ನಿಸಿರುವ ಜರ್ಮನ್ ಭಾರತೀಯರು, “ಭಾರತಿಯ ರಾಜಕಾರಣದ ಅತ್ಯಂತ ದೃವೀಕರಣ ಮನಸ್ಥತಿಯ ವ್ಯಕ್ತಿ, ಸರ್ವಧರ್ಮ ಸಮನ್ವಯ ಅಂತರ್ಗತವಾಗಿರುವ ಭಾರತದಿಂದ ಅತಿಥಿಯಾಗಲು ಸಾಧ್ಯವಿಲ್ಲ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಕೋಮುವಾದಿ ಪುಂಡರ ರಕ್ಷಿಸಲು ದ.ಕ.ಜಿಲ್ಲಾಧಿಕಾರಿಗಳ ವರ್ಗಾವಣೆ: ಸಿದ್ದರಾಮಯ್ಯ

ಮುಂದುವರಿದು, ” ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಲ್ಪಸಂಖ್ಯಾತರನ್ನು ಅನಕ್ಷರಸ್ಥರು, ಪಂಕ್ಚರ್ ಹಾಕುವವರು ಎಂದು ಹೀಯಾಳಿಸಿ ಮಾತನಾಡಿದ್ದರು. ಈ ಬಿಜೆಪಿ ನಾಯಕ ಅಸಹ್ಯಕರ ಮತ್ತು ಅಮಾನವೀಯ ದೃಷ್ಟಿಕೋನಗಳನ್ನು ಹೊಂದಿದ್ದು, ಇಂತಹ ವಿವಾದಾತ್ಮಕ ವ್ಯಕ್ತಿಗೆ ಅಧಿಕೃತವಾಗಿ ವೇದಿಕೆಯೊಂದನ್ನು ನೀಡುತ್ತಿರುವುದು ಸರಿಯಲ್ಲ. ಇವರಿಗೆ ಅವಕಾಶ ನಿಡುವುದರಿಂದ ಜರ್ಮನ್ ನೆಲೆದಲ್ಲಿ ಮತ್ತಷ್ಟು ವಿಭಜನೆಯಾಗಿ ಬಲಪಂಥೀಯವಾದ ಹೆಚ್ಚಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಹಾಗಾಗಿ ಇದನ್ನು ವಿರೋಧಿಸಿ ಆನ್‌ಲೈನ್ ಅಭಿಯಾನವನ್ನು ಕೈಗೊಂಡಿರುವ ಇವರು ಸಮಾನಮನಸ್ಕರ ಬೆಂಬಲವನ್ನು ಕೊರಿದ್ದಾರೆ. ತೇಜಸ್ವಿ ಸೂರ್ಯ ಅವರ ಉಪಸ್ಥತಿಯನ್ನು ವಿರೋಧಿಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಂದಾತಯಿಸಿಕೊಳ್ಳಬಹುದು.

ಇದನ್ನೂ ಓದಿ: ಸಂಘರ್ಷವಿರುವುದು 99% ಭಾರತೀಯರು v/s 1% ಕೋಮುವಾದಿ ಗ್ಯಾಂಗ್ ನಡುವೆ – ದೇವನೂರ ಮಹಾದೇವ

ತೇಜಸ್ವಿ ಸೂರ್ಯ ಅವರನ್ನು ಪ್ಯಾನಲ್ ಸ್ಪೀಕರ್ ಆಗಿ ಬಹಿಷ್ಕರಿಸುವ ಈ ಅಭಿಯಾನಕ್ಕೆ ನೋಂದಾಯಿಸಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ.

https://bit.ly/36v6nFz

“ಯುರೋಪಿನಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡುವ ಸಲುವಾಗಿ ಇಂತಹ ಧೃವೀಕರಣದ ಘಟನೆಗಳನ್ನು ಅನುಮತಿಸಲು ಸಾಧ್ಯವಿಲ್ಲ. ಈ ಸಂದರ್ಭದಲ್ಲಿ ಸಂಸದರನ್ನು ಅತಿಥಿ ಭಾಷಣಕಾರರಾಗಿ ಆಯ್ಕೆ ಮಾಡಿದ್ದಕ್ಕಾಗಿ ಭಾರತೀಯ ಸಂಜಾತ ಯುರೋಪಿಯನ್ ವಲಸೆಗಾರರು ಭಾರತದ ರಾಯಭಾರ ಕಛೇರಿಯೊಂದಿಗೆ ಅಕ್ಷೇಪಣೆ ವ್ಯಕ್ತಪಡಿಸುವ ಮೂಲಕ ಪ್ರತಿಕ್ರಿಯಿಸಬೇಕೆಂದು ನಾವು ಕೋರುತ್ತೇವೆ. ನಾವು ಈ ಪತ್ರವನ್ನು ಹ್ಯಾಂಬರ್ಗ್‌ನ ಭಾರತೀಯ ರಾಯಭಾರ ಕಛೇರಿ ಮತ್ತು ಮಾನವ ಹಕ್ಕುಗಳ ಗುಂಪುಗಳಿಗೆ ಕಳುಹಿಸುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇಸೇ ಹಾಕಲು ಬರದ ವಕೀಲ ತೇಜಸ್ವಿ ಸೂರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...