Homeಮುಖಪುಟಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ದ್ವೇಷ ಭಾಷಣಗಳಿಂದ ಕುಖ್ಯಾತಿ ಪಡೆದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

- Advertisement -
- Advertisement -

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರ ಆರಂಭಿಸಿರುವ “ಹರ್ ಘರ್ ತಿರಂಗ” ಅಭಿಯಾನವನ್ನು ಬಹಿಷ್ಕರಿಸುವಂತೆ ಹಿಂದುತ್ವವಾದಿ ಯತಿ ನರಸಿಂಗಾನಂದ ಹಿಂದೂಗಳಿಗೆ ತಿಳಿಸಿದ್ದಾರೆ.

ದ್ವೇಷ ಭಾಷಣಗಳಿಗೆ ಕುಖ್ಯಾತಿ ಪಡೆದಿರುವ, ಭಾರತದ ಸಂವಿಧಾನದ ಬಗ್ಗೆ ಅಗೌರವವನ್ನು ಹೊಂದಿರುವ ಯತಿ ನರಸಿಂಗಾನಂದ ಮತ್ತೊಮ್ಮೆ ತಮ್ಮ ಪ್ರವೃತ್ತಿಯನ್ನು ಮುಂದುವರಿಸಿದ್ದು, “ಹರ್‌ ಘರ್‌ ತಿರಂಗ ಅಭಿಯಾನದಿಂದ ಮುಸ್ಲಿಂ ಒಡೆತನದ ಸಂಸ್ಥೆಗೆ ಲಾಭವಾಗುತ್ತಿದೆ. ತಿರಂಗ ಧ್ವಜ ಹಾರಿಸುವ ಬದಲು ಹಿಂದೂಗಳು ತಮ್ಮ ಮನೆಯ ಮೇಲೆ ಭಗವಾ ಧ್ವಜ (ಕೇಸರಿ ಧ್ವಜ) ಹಾರಿಸಬೇಕು” ಎಂದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಅಭಿಯಾನಕ್ಕಾಗಿ [ಧ್ವಜಗಳನ್ನು ಸಂಗ್ರಹಿಸುವ] ಅತಿದೊಡ್ಡ ಆದೇಶವನ್ನು ಪಶ್ಚಿಮ ಬಂಗಾಳದ ಸಲಾವುದ್ದೀನ್ ಒಡೆತನದ ಕಂಪನಿಗೆ ನೀಡಲಾಗಿದೆ. ಇದು ಹಿಂದೂಗಳ ವಿರುದ್ಧದ ಒಂದು ದೊಡ್ಡ ಪಿತೂರಿ. ನೀವು [ಹಿಂದೂಗಳು] ಜೀವಂತವಾಗಿರಲು ಬಯಸಿದರೆ, ಈ ಅಭಿಯಾನದ ಹೆಸರಿನಲ್ಲಿ ನಿಮ್ಮ ಹಣವನ್ನು ಮುಸ್ಲಿಮರಿಗೆ ನೀಡುವುದನ್ನು ನಿಲ್ಲಿಸಿ” ಎಂದು ನರಸಿಂಗಾನಂದ ನಾಲಿಗೆ ಹರಿಬಿಟ್ಟಿದ್ದಾರೆ.

ಆಗಸ್ಟ್ 13 ರಿಂದ ಆಗಸ್ಟ್ 15ರವರೆಗೆ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗ” ಅಭಿಯಾನದಲ್ಲಿ ಪಾಲ್ಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

“ಹಿಂದೂ ರಾಜಕಾರಣಿಗಳು ಮುಸ್ಲಿಮರ ಆರ್ಥಿಕ ಬಹಿಷ್ಕಾರಕ್ಕಾಗಿ ಪ್ರಚಾರ ಮಾಡುತ್ತಾರೆ. ಆದರೆ ಅಧಿಕಾರಕ್ಕೆ ಬಂದ ನಂತರ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳನ್ನು ನೀಡುತ್ತಾರೆ” ಎಂದು ನರಸಿಂಹಾನಂದ ಆರೋಪಿಸಿರುವ ವಿಡಿಯೊ ವೈರಲ್ ಆಗುತ್ತಿದೆ.

ಈ ರಾಜಕಾರಣಿಗಳಿಗೆ ತಕ್ಕ ಪಾಠ ಕಲಿಸಿ ಎಂದಿರುವ ನರಸಿಂಗಾನಂದ, “ರಾಜಕಾರಣಿಗಳು ನಿಮ್ಮ [ಹಿಂದೂಗಳ] ಹಣವನ್ನು ಮುಸ್ಲಿಮರನ್ನು ಶ್ರೀಮಂತರನ್ನಾಗಿ ಮಾಡಲು ಬಳಸಬಾರದು. ನಿಮ್ಮ ಮಕ್ಕಳನ್ನು ಕೊಲ್ಲಲು ವ್ಯವಸ್ಥೆ ಮಾಡಬಾರು. ಇವರ ಬಲೆಗೆ ಬೀಳಬೇಡಿ” ಎಂದಿದ್ದಾರೆ.

“ಹಿಂದೂಗಳು ರಾಷ್ಟ್ರಧ್ವಜವನ್ನು ಹಾರಿಸಬಾರದು. ಅದು ಹಿಂದೂಗಳಿಗೆ ಹಾನಿಯುಂಟುಮಾಡುತ್ತದೆ. ಪ್ರತಿಯೊಬ್ಬ ಹಿಂದೂ ತನ್ನ ಮನೆಯ ಮೇಲೆ ಕೇಸರಿ ಬಣ್ಣದ ಧ್ವಜವನ್ನು ಹಾರಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಹರಿದ್ವಾರದಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮುಸ್ಲಿಮರ ನರಮೇಧಕ್ಕೆ ಕರೆ ನೀಡಿದ ನಂತರ ಜನವರಿ 15ರಂದು ನರಸಿಂಗಾನಂದ ಬಂಧನಕ್ಕೊಳಗಾಗಿದ್ದರು. “ಸಮುದಾಯಗಳ ನಡುವೆ ಭಿನ್ನಾಭಿಪ್ರಾಯಗಳನ್ನು ಸೃಷ್ಟಿಸುವ ಉದ್ದೇಶದಿಂದ” ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂಬ ಷರತ್ತಿನ ಮೇಲೆ ಫೆಬ್ರವರಿ 7ರಂದು ಅವರಿಗೆ ಜಾಮೀನು ನೀಡಲಾಗಿದೆ.

ಆದಾಗ್ಯೂ, ಏಪ್ರಿಲ್ 17 ರಂದು, ಅವರು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಸಮಾವೇಶದಲ್ಲಿ ಮತ್ತೊಂದು ಪ್ರಚೋದನಾತ್ಮಕ ಭಾಷಣವನ್ನು ನರಸಿಂಗಾನಂದ ಮಾಡಿದ್ದರು. ಭಾರತವು ಇಸ್ಲಾಮಿಕ್ ರಾಷ್ಟ್ರವಾಗದಂತೆ ತಡೆಯಲು ಹಿಂದೂಗಳು ಹೆಚ್ಚು ಮಕ್ಕಳನ್ನು ಹುಟ್ಟಿಸಬೇಕು ಎಂದು ಹೇಳಿಕೆ ನೀಡಿದ್ದರು.

ಕಳೆದ ಜೂನ್‌ನಲ್ಲಿ ಮತ್ತೆ ನಾಲಿಗೆ ಹರಿಬಿಟ್ಟಿದ್ದ ಯತಿ ನರಸಿಂಗಾನಂದ, “ಮಹಾತ್ಮ ಗಾಂಧಿ ಭಾರತೀಯ ಮುಸ್ಲಿಮರಿಗೆ ಹಕ್ಕುಗಳನ್ನು ನೀಡಿದರು. ಗಾಂಧಿ ಕಾರಣದಿಂದಾಗಿ 100 ಕೋಟಿ ಹಿಂದೂ ಸಮುದಾಯಕ್ಕೆ ತಮ್ಮದೇ ಆದ ಒಂದು ಇಂಚು ಭೂಮಿ ಇಲ್ಲ” ಎಂದು ಆರೋಪಿಸಿದ್ದರು. ಉತ್ತರ ಪ್ರದೇಶದ ಗಾಜಿಯಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿರಿ: ಹಿಂದೂ ಮಹಾಪಂಚಾಯತ್‌ ಆಯೋಜಕನ ವಿಕೃತಿ ಅನಾವರಣ; ಸರಣಿ ಅತ್ಯಾಚಾರದಿಂದ ನೊಂದ ಪತ್ನಿಯಿಂದ ಪ್ರಕರಣ ದಾಖಲು

ಮುಸ್ಸೂರಿ ಪೊಲೀಸ್ ಠಾಣೆಯಲ್ಲಿ ನರಸಿಂಗಾನಂದ ಸರಸ್ವತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) (ವರ್ಗಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆಗಳು), 153ಬಿ (ರಾಷ್ಟ್ರೀಯ ಏಕೀಕರಣಕ್ಕೆ ಹಾನಿಯುಂಟುಮಾಡುವ ಆರೋಪ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ದ್ವೇಷ ಭಾಷಣ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುತ್ತಾ ನರಸಿಂಗಾನಂದ, “ನಮಗೆ ಭಾರತದ ಸುಪ್ರೀಂ ಕೋರ್ಟ್ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ದೇಶದ 100 ಕೋಟಿ ಹಿಂದೂಗಳನ್ನು ಸಂವಿಧಾನ ಕೊಲ್ಲುತ್ತಿದೆ. ಈ ಸಂವಿಧಾನವನ್ನು ನಂಬಿದವರನ್ನು ಕೊಲ್ಲಲಾಗುತ್ತದೆ. ಈ ವ್ಯವಸ್ಥೆಯನ್ನು ನಂಬುವವರು, ಈ ರಾಜಕಾರಣಿಗಳು, ಸುಪ್ರೀಂ ಕೋರ್ಟ್ ಮತ್ತು ಸೈನ್ಯದಲ್ಲಿರುವವರು ಎಲ್ಲರೂ ನಾಯಿಯಂತೆ ಸಾಯುತ್ತಾರೆ” ಎಂದು ಮತ್ತೊಮ್ಮೆ ಪ್ರಚೋದನೆ ನೀಡಿದ್ದರು.

ಹೀಗೆ ದ್ವೇಷ ಭಾಷಣಗಳ ಬಹುದೊಡ್ಡ ಇತಿಹಾಸ ಹೊಂದಿರುವ ಯತಿ ನರಸಿಂಗಾನಂದ ಮತ್ತೆ ಮತ್ತೆ ಜಾಮೀನು ಪಡೆದು ಹೊರಬಂದು ದ್ವೇಷ ಭಾಷಣಗಳನ್ನು ಮಾಡುತ್ತಾ ಸಮಾಜದಲ್ಲಿ ಕ್ಷೋಭೆಯನ್ನು ಉಂಟು ಮಾಡುತ್ತಲೇ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ನರಸಿಂಗಾನಂದನ ವಿರುದ್ಧ ಈ ಕೂಡಲೇ ಕಾನೂನು ಕ್ರಮವನ್ನು ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...