Homeಕರ್ನಾಟಕಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

ಬಿಪಿಎಲ್ ಕಾರ್ಡ್ ಪರಿಷ್ಕರಣೆ | ಮಾನದಂಡಗಳ ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ : ಸಚಿವ ಮುನಿಯಪ್ಪ

- Advertisement -
- Advertisement -

ಕೇಂದ್ರ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಪತ್ತೆ ಹಚ್ಚಿ, ಪರಿಷ್ಕರಿಸಲು ಮಾನದಂಡಗಳ ಪ್ರಕಾರ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್‌ ಮುನಿಯಪ್ಪ ತಿಳಿಸಿದ್ದಾರೆ.

ರಾಜ್ಯದಲ್ಲಿ ಉಂಟಾಗಿರುವ ಬಿಪಿಎಲ್‌ ಕಾರ್ಡ್ ರದ್ದತಿ ಗೊಂದಲದ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು (ನ.21) ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿರುವ ಅವರು, “ಯಾವುದೇ ಅರ್ಹ ಬಿಪಿಎಲ್ ಅಥವಾ ಎಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿಲ್ಲ. ಮಾನದಂಡಗಳ ಅನ್ವಯ ಪರಿಷ್ಕರಣೆ ಮಾಡಿದ್ದೇವೆ. ಅನರ್ಹ ಕಾರ್ಡ್‌ಗಳನ್ನು ಪತ್ತೆ ಹಚ್ಚಲು ಕ್ರಮವಹಿಸಲಾಗಿದೆ. ಬಿಪಿಎಲ್‌ಗೆ ಅರ್ಹರಲ್ಲದವರನ್ನು ಎಪಿಎಲ್‌ಗೆ ಸೇರಿಸಲಾಗಿದೆ” ಎಂದಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಕಾರ್ಡ್‌ಗಳ ವಿತರಣೆ ಪ್ರಮಾಣ 2011ರ ಜನಸಂಖ್ಯೆ ಅನ್ವಯ ನಗರ ಮತ್ತು ಗ್ರಾಮೀಣ ಸೇರಿ ಶೇಖಡ 66ರಷ್ಟಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯ ಸರ್ಕಾರ ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಪತ್ತೆ ಹಚ್ಚಲು ಕ್ರಮವಹಿಸಿದೆ. ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸದಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ನೀಡಿರುವ ಮಾಹಿತಿ ಅನುಸರಿಸಿ, ಬಿಎಪಿಎಲ್‌ಗೆ ಅರ್ಹರಲ್ಲದವರನ್ನು ಅನರ್ಹ ಎಂದು ಪರಿಗಣಿಸಿ ಎಪಿಎಲ್‌ಗೆ ಸೇರಿಸಲಾಗಿದೆ. ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಮಾಹಿತಿ ಪಡೆದು, ಪರಿಶೀಲಿಸಿ ಬಿಪಿಎಲ್‌ಗೆ ಅನರ್ಹರೆಂದು ಕಂಡು ಬಂದವರನ್ನು ಎಪಿಎಲ್‌ಗೆ ಸೇರಿಸಲಾಗಿದೆ. ಬಿಪಿಎಲ್‌ಗೆ ಅರ್ಹರಿದ್ದೂ, ಅನರ್ಹಗೊಂಡಿದ್ದರೆ, ಅಂತವರ ಬಿಪಿಎಲ್‌ ಕಾರ್ಡ್ ಪುನಃ ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.

ರಾಜ್ಯದಲ್ಲಿ ಆದಾಯ ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರದ್ದು ಸೇರಿ 1,2,509 ಬಿಪಿಎಲ್ ಪಡಿತರ ಕಾರ್ಡ್‌ಗಳಿವೆ. ಈ ಪೈಕಿ ಆದಾಯ ತೆರಿಗೆ ಪಾವತಿದಾರರದ್ದು 98,473 ಇದ್ದು, ಸರ್ಕಾರಿ ನೌಕರರದ್ದು 4,036 ಇದೆ. ಇವುಗಳು ಅನರ್ಹ ಎಂದು ಪರಿಗಣಿಸಲಾಗುತ್ತದೆ. ಈಗಾಗಲೇ 59,370 ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತನೆ ಮಾಡಲಾಗಿದೆ. ಅರ್ಹ ಎಂದು ಕಂಡು ಬಂದಿರುವ 16,806 ಕಾರ್ಡ್‌ಗಳನ್ನು ಬಿಪಿಎಲ್‌ನಲ್ಲೇ ಉಳಿಸಲು ತೀರ್ಮಾನಿಸಲಾಗಿದೆ. ಒಟ್ಟಾರೆ, ಅಮಾನತುಗೊಂಡಿರುವುದು 8,647 ಕಾರ್ಡ್‌ಗಳು ಮಾತ್ರ ಎಂದು ಸಚಿವ ಮುನಿಯಪ್ಪ ಮಾಹಿತಿ ನೀಡಿದ್ದಾರೆ.

ಅನರ್ಹ ಬಿಪಿಎಲ್ ಕಾರ್ಡ್‌ಗಳ ರದ್ದತಿ ವೇಳೆ ಉಂಟಾಗಿರುವ ಗೊಂದಲಗಳ ಹೊಣೆಯನ್ನು ನಾನೇ ಸಂಪೂರ್ಣವಾಗಿ ಹೊತ್ತುಕೊಳ್ಳುತ್ತೇನೆ. ಇನ್ನು ಒಂದು ವಾರದಲ್ಲಿ ಸಮಸ್ಯೆ ಸರಿಪಡಿಸಲಾಗುವುದು. ಸದ್ಯಕ್ಕೆ ಯಥಾಸ್ಥಿತಿ ಕಾಪಾಡಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾದರೂ ಗೃಹಲಕ್ಷ್ಮಿ ಹಣ ಸಿಗಲಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...