Homeಚಳವಳಿ12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

- Advertisement -
- Advertisement -

ಅತ್ಯಧಿಕವಾಗಿ ನವೀಕೃತಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ (Mercedes-Maybach S 650 Guard) ಕಾರನ್ನು ಪ್ರಧಾನಿ ನರೇಂದ್ರ ಮೋದಿ ಈಗ ಬಳಸುತ್ತಿದ್ದಾರೆ. ಇದು ರೇಂಜ್ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ಗಿಂತ ಉತ್ತಮವಾಗಿ ನವೀಕರಣಗೊಂಡಿದೆ.

ಈ ಕಾರಿನ ಬೆಲೆ 12 ಕೋಟಿ ರೂಪಾಯಿಯಾಗಿದ್ದು, ವಿಪಕ್ಷಗಳು ಸೇರಿದಂತೆ ನೆಟ್ಟಿಗರು ಕೊರೊನಾ ಲಾಕ್‌ಡೌನ್‌‌ನಿಂದ ಜನ ಪರದಾಡಿ, ಈಗಲೂ ಜೀವನ ಕಟಟಿಕೊಳ್ಳು ಒದ್ದಾಡುತ್ತಿದ್ದಾರೆ. ಹೊಸ ಸೋಂಕು ದೇಶವನ್ನು ಆವರಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿಯವರು ಇಷ್ಟು ದುಂದುವೆಚ್ಚ ಮಾಡಬಹುದೇ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೇಕ್ ಇನ್ ಇಂಡಿಯಾ, ವೊಕಲ್ ಸೇ ಲೋಕಲ್ ಎಂಬ ಘೋಷಣೆಗಳು ಜನಸಾಮಾನ್ಯರಿಗೆ ಮಾತ್ರವೇ…? ದೇಶದ ಪ್ರಧಾನಿಗೆ ಅವುಗಳು ಅನ್ವಯವಾಗುವುದಿಲ್ಲವೇ ಎಂದು ನೆಟ್ಟಿಗರು ಟೀಕಿಸಿದ್ದು, #BrandedFakeer ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ನಾಗಾಲ್ಯಾಂಡ್: ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ ಸೈನಿಕರ ತನಿಖೆ ನಡೆಸಲು ಅವಕಾಶ ನೀಡಿದ ಸೇನೆ

“ಅರ್ಧಕ್ಕಿಂತ ಹೆಚ್ಚು ಜನರು ದಿನಕ್ಕೆ 2 ಯೋಗ್ಯವಾದ ಊಟವನ್ನು ಮಾಡಲು ಸಾಧ್ಯವಾಗದ ರಾಷ್ಟ್ರದಲ್ಲಿ ಮತ್ತು ಕಡಿಮೆಯಾಗುತ್ತಿರುವ ಉದ್ಯೋಗಗಳು, ಗಗನಕ್ಕೇರುತ್ತಿರುವ ಇಂಧನ, ಎಲ್‌ಪಿಜಿ ಮತ್ತು ಆಹಾರ ಪದಾರ್ಥಗಳ ಬೆಲೆಯಿಂದ ಬಹುಪಾಲು ಜನರು ಜೀವನವನ್ನು ನಡೆಸಲು ಸಾಧ್ಯವಾಗದ ರಾಷ್ಟ್ರದಲ್ಲಿ #BrandedFakeer ತನ್ನ ವೈಯಕ್ತಿಕ ಐಷಾರಾಮಿ ಜೀವನಕ್ಕಾಗಿ ಕೋಟಿಗಳನ್ನು ಚೆಲ್ಲುತ್ತಿದ್ದಾರೆ” ಎಂದು ಶ್ರೀ ಎನ್ನುವವರು ಕಿಡಿ ಕಾರಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರು ಹೊಚ್ಚ ಹೊಸ ಮರ್ಸಿಡಿಸ್ ಪಡೆದಿದ್ದಾರೆ. ಇದು ಭಾರತದಲ್ಲಿನ ಅತ್ಯಂತ ದುಬಾರಿ ವಾಹನವಾಗಿದೆ. ಸರ್ಕಾರ ಈ ಕಾರನ್ನು ಕೇವಲ 12 ಕೋಟಿ ರೂಪಾಯಿಗೆ ಖರೀದಿಸಿದೆ. ಇತ್ತ, ಒಬ್ಬ ಸಾಮಾನ್ಯ ವ್ಯಕ್ತಿ ಇನ್ನೂ ಒಂದು ಲೀಟರ್ ಪೆಟ್ರೋಲ್, ಕೆಜಿ ಟೊಮೆಟೊ, ಈರುಳ್ಳಿ ಬ್ರೆಡ್, ಬೆಣ್ಣೆ, ಎಣ್ಣೆ ಮತ್ತು 1 ಎಲ್ಪಿಜಿ ಸಿಲಿಂಡರ್ ಖರೀದಿಸಲು ಹೆಣಗಾಡುತ್ತಿದ್ದಾರೆ” ಎಂದು ಪವನ್ ನಾಯ್ಕ್ ಎನ್ನುವವರು ಟ್ವೀಟ್ ಮಾಡಿದ್ದಾರೆ.

ಮತ್ತೊಬ್ಬ ನೆಟ್ಟಿಗರು, ಮೋದಿ ವಿಶ್ವದ ಅತ್ಯಂತ ಶ್ರೀಮಂತ ಫಕೀರ!! ಸಾಮಾನ್ಯ ಜನರು ಇನ್ನೂ ಲೀಟರ್ ಪೆಟ್ರೋಲ್, ಕೆಜಿ ಟೊಮೆಟೊ, ಈರುಳ್ಳಿ, ಬ್ರೆಡ್, ಬೆಣ್ಣೆ, ಎಣ್ಣೆ ಮತ್ತು 1 ಎಲ್ಪಿಜಿ ಸಿಲಿಂಡರ್ ಖರೀದಿಸಲು ಹೆಣಗಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ಮತ್ತೊಬ್ಬ ನೆಟ್ಟಿಗರು, “ಮರ್ಸಿಡೆಸ್ ಅನ್ನು ಹೊಂದಿರುವ ಸನ್ಯಾಸಿ, ಎಲ್ಲಾ ಫಕೀರರಿಗೆ ಉತ್ತಮ ಸ್ಫೂರ್ತಿ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...