Homeಅಂತರಾಷ್ಟ್ರೀಯಬ್ರೆಜಿಲ್: ಸಂಸತ್‌‌ ಕಟ್ಟಡ, ಸುಪ್ರೀಂ ಕೋರ್ಟ್ & ಅಧ್ಯಕ್ಷೀಯ ಅರಮನೆಗೆ ನುಗ್ಗಿ ಧ್ವಂಸಗೊಳಿಸಿದ ಬಲಪಂಥೀಯ ಪ್ರತಿಭಟನಾಕಾರರು

ಬ್ರೆಜಿಲ್: ಸಂಸತ್‌‌ ಕಟ್ಟಡ, ಸುಪ್ರೀಂ ಕೋರ್ಟ್ & ಅಧ್ಯಕ್ಷೀಯ ಅರಮನೆಗೆ ನುಗ್ಗಿ ಧ್ವಂಸಗೊಳಿಸಿದ ಬಲಪಂಥೀಯ ಪ್ರತಿಭಟನಾಕಾರರು

- Advertisement -
- Advertisement -

ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಬೆಂಬಲಿಗರು ಭಾನುವಾರ ನಡೆಸಿದ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆಸಿದ್ದು ದೇಶದ ಉನ್ನತ ಸರ್ಕಾರಿ ಕಟ್ಟಡಗಳನ್ನು ಆಕ್ರಮಿಸಿ ಧ್ವಂಸಗೊಳಿಸಿದ್ದಾರೆ. ಹಾಲಿ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರು ಒಂದು ವಾರದ ಹಿಂದೆ ಅಧಿಕಾರ ಕೈಗಿತ್ತಿಕೊಂಡಿದ್ದರು.

ಅವರು ಅಕ್ಟೋಬರ್ 30 ರಂದು ನಡೆದ ಚುನಾವಣೆಯಲ್ಲಿ ಬೋಲ್ಸನಾರೊ ಅವರನ್ನು ಸೋಲಿಸಿ ಎರಡನೇ ಭಾರಿಗೆ ದೇಶದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೊಲ್ಸನಾರೊ ಬೆಂಬಲಿಗರು ಭಾನುವಾರ ನಡೆಸಿದ ಪ್ರತಿಭಟನೆಯಲ್ಲಿ ದೇಶದ ಸಂಸತ್‌‌ ಕಟ್ಟಡ, ಸುಪ್ರೀಂ ಕೋರ್ಟ್ ಮತ್ತು ಅಧ್ಯಕ್ಷೀಯ ಅರಮನೆಗೆ ನುಗ್ಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊಗಳಲ್ಲಿ ಬೋಲ್ಸನಾರೊ ಬೆಂಬಲಿಗರು ಸರ್ಕಾರಿ ಕಟ್ಟಡಗಳ ಕಿಟಕಿಗಳು ಮತ್ತು ಪೀಠೋಪಕರಣಗಳನ್ನು ಒಡೆದುಹಾಕುವುದನ್ನು ಕಾಣುತ್ತದೆ.

ಬೆಂಬಲಿಗರು ದೇಶದ ಉನ್ನತ ಮಟ್ಟದ ಮೂರು ಸರ್ಕಾರಿ ಕಟ್ಟಡಗಳನ್ನು ಆಕ್ರಮಿಸಿ ಛಾವಣಿಯ ಮೇಲೆ ಏರಿರುವುದು ವಿಡಿಯೊಗಳಲ್ಲಿ ದಾಖಲಾಗಿವೆ. ಕೆಲವು ಪ್ರತಿಭಟನಾಕಾರರು ಬಲಪಂಥೀಯ ನಾಯಕ ಬೋಲ್ಸನಾರೊ ಅವರಿಗೆ ಪುನಃ ಅಧಿಕಾರ ನೀಡಿ ಲುಲಾ ಅವರನ್ನು ಅಧ್ಯಕ್ಷ ಸ್ಥಾನದಿಂದ ಹೊರಹಾಕಲು ಕರೆ ನೀಡಿದ್ದು ಅಥವಾ ಮಿಲಿಟರಿ ಹಸ್ತಕ್ಷೇಪ ಮಾಡುವಂತೆ ಒತ್ತಾಯಿಸಿದ್ದಾರೆ.

ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದು,“ಬ್ರೆಸಿಲ್‌ನಲ್ಲಿ ಸರ್ಕಾರಿ ಸಂಸ್ಥೆಗಳ ವಿರುದ್ಧ ನಡೆದ ಗಲಭೆ ಮತ್ತು ವಿಧ್ವಂಸಕ ಸುದ್ದಿಗಳು ತೀವ್ರ ಕಳವಳವನ್ನು ಉಂಟುಮಾಡಿದೆ. ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ಎಲ್ಲರೂ ಗೌರವಿಸಬೇಕು. ನಾವು ಬ್ರೆಜಿಲ್ ಅಧಿಕಾರಿಗಳಿಗೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಅಮೇರಿಕಾ ಅಧ್ಯಕ್ಷ ಜೋ ಬಿಡನ್ ಘಟನೆಯನ್ನು “ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ” ಎಂದು ಹೇಳಿದ್ದಾರೆ. “ಬ್ರೆಜಿಲ್‌ನಲ್ಲಿ ನಡೆದ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣವನ್ನು ನಾನು ಖಂಡಿಸುತ್ತೇನೆ. ಬ್ರೆಜಿಲ್‌ನ ಪ್ರಜಾಪ್ರಭುತ್ವ ಸಂಸ್ಥೆಗಳು ನಮ್ಮ ಸಂಪೂರ್ಣ ಬೆಂಬಲವನ್ನು ಹೊಂದಿವೆ. ಬ್ರೆಜಿಲಿಯನ್ ಜನರ ಇಚ್ಛೆಯನ್ನು ದುರ್ಬಲಗೊಳಿಸಬಾರದು. ಲೂಲಾ ಅವರ ಜೊತೆ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬ್ರೆಜಿಲಿಯನ್ ಜನರು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಇಚ್ಛೆಯನ್ನು ಗೌರವಿಸಬೇಕು ಎಂದು ಒತ್ತಿ ಹೇಳಿದ್ದಾರೆ.

“ಇಂದು ನಡೆದ ಬ್ರೆಜಿಲ್‌ನ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ದಾಳಿಯನ್ನು ನಾನು ಖಂಡಿಸುತ್ತೇನೆ. ಬ್ರೆಜಿಲ್‌ ಜನರು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಇಚ್ಛೆಯನ್ನು ಗೌರವಿಸಬೇಕಾಗಿದ್ದು, ಅದು ಆಗುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ. ಬ್ರೆಜಿಲ್ ಒಂದು ಶ್ರೇಷ್ಠ ಪ್ರಜಾಪ್ರಭುತ್ವ ದೇಶ” ಎಂದು ಗುಟೆರಸ್ ಟ್ವೀಟ್ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೇರ ನಡೆ-ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು: ಸಿಎಂ ಸಿದ್ದರಾಮಯ್ಯ

0
ನಿಷ್ಠುರ, ನೇರ ನಡೆ ನುಡಿಯ ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ...