Homeಕರ್ನಾಟಕರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಅಂತಿಮ; ಘೋಷಣೆಯೊಂದೇ ಬಾಕಿ

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರು ಅಂತಿಮ; ಘೋಷಣೆಯೊಂದೇ ಬಾಕಿ

- Advertisement -
- Advertisement -

ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಆದರೆ ಸಿಎಂ ಯಾರು ಆಗುತ್ತಾರೆ ಎನ್ನುವ ಎನ್ನುವ ಗೊಂದಲ ಏರ್ಪಟ್ಟಿತ್ತು. ಆದರೆ ಈ ಎಲ್ಲ ಗೊಂದಲಗಳಿಗೆ ಇದೀಗ ತೆರೆ ಬಿದ್ದಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಹೈಕಮಾಂಡ್ ನಿರ್ಧರಿಸಿದ್ದು, ಇಂದು ಸಂಜೆ ವೇಳೆಗೆ ಘೋಷಣೆ ಮಾಡಲಿದ್ದಾರೆ.

ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ಸಿಎಂ ಸ್ಥಾನಕ್ಕಾಗಿ ಪೈಪೋಟಿ ನಡೆಸಿದ್ದರು. ಇಂದು ಉನ್ನತ ಮಟ್ಟದ ನಾಯಕರೊಂದಿಗೆ ನಡೆದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ನಿರ್ಧಾರ ಕೈಗೊಳ್ಳಲಾಗಿದೆ. ನಾಳೆಯೇ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಆ ಬಳಿಕ  ಮಂತ್ರಿಮಂಡಲ ರಚನೆ ಮಾಡಲಿದ್ದಾರೆ ಎನ್ನುವ ಮಾಹಿತಿ ಹೊರ ಬಂದಿದೆ.

ಈಗಾಗಲೇ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭಾರೀ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಬರುವ ಸಾಧ್ಯತೆ ಇರುವುದರಿಂದ, ಸಂಭ್ರಮಿಸಲು ಸೇರುವ ಸಾಧ್ಯತೆ ಇರುವುದರಿಂದ ಖಾಕಿ ಭದ್ರತೆ ಹೆಚ್ಚಿಸಲಾಗಿದೆ.

ನಾಳೆಯೇ ಸಿಎಂ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗುತ್ತಿದ್ದು ಘೋಷಣೆಯೊಂದೇ ಬಾಕಿ ಇದೆ. ನಾಳೆ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದು, ಕ್ರೀಡಾಂಗಣದಲ್ಲಿ ಸಕಲಸಿದ್ಧತೆ ನಡೆಯುತ್ತಿದೆ.

ಡಿಕೆ ಶಿವಕುಮಾರ್ ಅವರು ಕೂಡ ಸಿಎಂ ಸ್ಥಾನಕ್ಕಾಗಿ ಪ್ರಬಲ ಪೈಪೋಟಿ ನಡೆಸಿದ್ದರು. ಆದರೆ ಅವರಿಗೆ ಇದೀಗ  ಉಪಮುಖ್ಯಮಂತ್ರಿ ಸ್ಥಾನ ನೀಡುವ ಸಾಧ್ಯತೆ ಇದೆ. ಇಂಧನ ಹಾಗೂ ನೀರಾವರಿ ಖಾತೆ ಮೇಲೆ ಡಿಕೆ ಶಿವಕುಮಾರ್ ಇಚ್ಚೆ ಇದೆ ಎನ್ನುವ ಮಾಹಿತಿ ಸಿಗುತ್ತಿದೆ. ಡಿಕೆ ಶಿವಕುಮಾರ್ ಕೂಡ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಭಾರಿ ಜಯಭೇರಿ ಬಾರಿಸಿದರೂ ಮುಖ್ಯಮಂತ್ರಿ ಹೆಸರನ್ನು ಘೋಷಿಸಲು ಕಾಂಗ್ರೆಸ್ ಪಕ್ಷಕ್ಕೆ ಕಷ್ಟವಾಗಿತ್ತು. ಕಳೆದ ಮೂರು ದಿನಗಳಿಂದ ಪಕ್ಷದಲ್ಲಿ ಮುಖ್ಯಮಂತ್ರಿ ಹೆಸರು ಚರ್ಚೆಯಾಗುತ್ತಿದ್ದು, ಇನ್ನೂ ನಿರ್ಧಾರವಾಗಿರಲಿಲ್ಲ, ಸದ್ಯ ಫೈನಲ್ ಆಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಹೆಸರು ಕೇಳಿಬರುತ್ತಿತ್ತು. ಕಳೆದ ಕೆಲವು ತಿಂಗಳುಗಳಲ್ಲಿ, ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಸ್ಪಷ್ಟವಾಗಿ ಸೂಚಿಸಿದ್ದರು. ಆದರೆ ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮಣೆ ಹಾಕಿದೆ.

ಡಿಕೆ ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ. ಆದ್ದರಿಂದ ಇವು ಅವರ ಸಿಎಂ ಆಗುವ ಅವಕಾಶಗಳನ್ನು ಕಸಿದುಕೊಂಡಿವೆ. ಡಿಕೆ ಶಿವಕುಮಾರ್ ವಿರುದ್ಧ ಒಟ್ಟು 19 ಪ್ರಕರಣಗಳು ದಾಖಲಾಗಿದ್ದು, ಇವುಗಳಲ್ಲಿ ಕೆಲವು ಪ್ರಕರಣಗಳನ್ನು ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆ ತನಿಖೆ ನಡೆಸುತ್ತಿದೆ. ಹಾಗಾಗಿ ಡಿಕೆಶಿಗೆ ಸಿಎಂ ಕೊಡುವುದು ಬೇಡ ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

4 COMMENTS

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...