Homeಮುಖಪುಟ‘ರೈತರ ತಲೆ ಬುರುಡೆ ಒಡೆಯಿರಿ’ - ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

‘ರೈತರ ತಲೆ ಬುರುಡೆ ಒಡೆಯಿರಿ’ – ಪೊಲೀಸರಿಗೆ ಆದೇಶ ನೀಡುತ್ತಿರುವ ಅಧಿಕಾರಿಯ ವಿಡಿಯೊ ವೈರಲ್!

- Advertisement -
- Advertisement -

ಶನಿವಾರದಂದು ಹರಿಯಾಣದ ಕರ್ನಲ್‌ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ನಡೆಸಿದ್ದಾರೆ. ಲಾಠಿ ಚಾರ್ಜ್‌ ಆದ ನಂತರ ವಿಡಿಯೊವೊಂದು ವೈರಲ್‌ ಆಗಿದ್ದು, ಅದರಲ್ಲಿ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ “ಪ್ರತಿಭಟನಾಕಾರರ ತಲೆಬುರುಡೆ ಒಡೆಯಲು” ಪೊಲೀಸ್‌ ಸಿಬ್ಬಂದಿಗಳಿಗೆ ಆದೇಶ ನೀಡುತ್ತಿವುದುನ್ನು ಕಾಣಬಹುದಾಗಿದೆ. ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಅಷ್ಟೇ ಅಲ್ಲದೆ, ರೈತರ ವಿರುದ್ದ ಬಲ ಪ್ರಯೋಗ ಮಾಡುವುದಕ್ಕೆ ಲಿಖಿತ ಆದೇಶ ಹೊರಡಿಸುವುದಾಗಿ ಅವರು ಪೊಲೀಸರಿಗೆ ಹೇಳುತ್ತಿರುವುದು ವಿಡಿಯೊದಲ್ಲಿ ಕಂಡುಬಂದಿದೆ.

ಇದನ್ನೂಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ಹಲವು ಪೊಲೀಸ್‌ ಸಿಬ್ಬಂದಿಗಳ ಮುಂದೆ ನಿಂತು, ಯಾವುದೆ ರೈತ ಬ್ಯಾರಿಕೇಡ್ ದಾಟಬಾರದೆಂದು ಆಯುಷ್‌ ಸಿನ್ಹಾ ಸೂಚನೆ ನೀಡುತ್ತಾರೆ. “ಒಂದು ವೇಳೆ ಯಾರಾದರೂ ಬ್ಯಾರಿಕೇಡ್ ದಾಟಿದರೆ, ಅವರ ತಲೆಗಳನ್ನು ಒಡೆದು ಹಾಕಿ” ಎಂದು ಅವರು ಆದೇಶಿಸುತ್ತಾರೆ. ಈ ಮಾತುಗಳು ವೈರಲ್ ಆಗಿರುವ ವಿಡಿಯೊದಲ್ಲಿ ಸ್ಪಷ್ಟವಾಗಿ ದಾಖಲಾಗಿದೆ.

“ಇದು ತುಂಬಾ ಸರಳ ಮತ್ತು ಸ್ಪಷ್ಟವಾಗಿದೆ. ಯಾರು ಎಲ್ಲಿಂದ ಬಂದರೂ, ಯಾರೊಬ್ಬರೂ ಬ್ಯಾರಿಕೇಡ್‌ನಿಂದ ಮುಂದೆ ಹೋಗಬಾರದು. ಒಂದು ವೇಳೆ ಬಂದರೆ ಅವರ ಬುರುಡೆಯನ್ನು ಒಡೆಯಿರಿ. ಯಾವುದೇ ಸೂಚನೆ ಅಥವಾ ನಿರ್ದೇಶನದ ಅಗತ್ಯವಿಲ್ಲ. ನಮ್ಮಲ್ಲಿ ಸಾಕಷ್ಟು ಪೊಲೀಸ್ ಪಡೆಯಿದೆ” ಎಂದು ಕರ್ನಾಲ್‌ನಲ್ಲಿ ಪ್ರತಿಭಟನಾ ನಿರತ ರೈತರನ್ನು ನಿಭಾಯಿಸಲು ನಿಯೋಜಿಸಲಾದ ಪೊಲೀಸರಿಗೆ ಆಯುಷ್ ಸಿನ್ಹಾ ಹೇಳಿದ್ದಾರೆ.

ಇದನ್ನೂಓದಿ: ಹರಿಯಾಣ: 100ಕ್ಕೂ ಹೆಚ್ಚು ರೈತರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿದ ಪೊಲೀಸರು

ವಿಡಿಯೊ ವೈರಲ್‌ ಆಗುತ್ತಿದ್ದಂತೆ, ಘಟನೆಯ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಎಸ್‌ಡಿಎಂ ಆಯುಷ್ ಸಿನ್ಹಾ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸಿದೆ.

ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಹೊರತಾಗಿಯೂ ಲಾಠಿ ಚಾರ್ಜ್‌ನಲ್ಲಿ ಹತ್ತಾರು ರೈತರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರೈತ ಸಂಘಟನೆ ಹೇಳಿಕೊಂಡಿದೆ.

ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಭಾಗವಹಿಸಿದ್ದ ಸಭೆಯನ್ನು ವಿರೋಧಿಸಿ ರೈತರು ಕರ್ನಾಲ್ ಬಳಿಯ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಜಮಾಯಿಸಿದ್ದರು. ಈ ವೇಳೆ ಪೊಲೀಸರು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ.

ಘಟನೆಯಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಶನಿವಾರ ವರದಿಯಾಗಿದೆ. ರಕ್ತಸಿಕ್ತವಾಗಿರುವ ದೇಹಗಳೊಂದಿಗೆ, ಗಂಭೀರ ಗಾಯಗೊಂಡಿರುವ ಹಲವಾರು ರೈತರ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದನ್ನೂಓದಿ: ಹರಿಯಾಣದಲ್ಲಿ ಬಿಜೆಪಿ ನಾಯಕರಿಗೆ ಮತ್ತೆ ಮುಖಭಂಗ: ಮುಂದುವರೆದ ರೈತರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...