Homeಕರ್ನಾಟಕBIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video

BIG BREAKING: ಧರ್ಮಸ್ಥಳ ಪ್ರಕರಣ: ಹೊಸ ತಿರುವು; ಎಸ್‌ಐಟಿ ಎದುರು ಪ್ರತ್ಯಕ್ಷನಾದ ಮತ್ತೋರ್ವ ದೂರುದಾರ-video

- Advertisement -
- Advertisement -

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ವ್ಯಕ್ತಿಯೊಬ್ಬ ನೀಡಿದ ದೂರಿನ ಬೆನ್ನಲ್ಲೇ ಈ ಪ್ರಕರಣ ಇದೀಗ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ. ಪ್ರಕರಣದ ತನಿಖೆಗಾಗಿ ರಚಿಸಲಾಗಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಮುಂದೆ ಮತ್ತೊಬ್ಬ ದೂರುದಾರರಾದ ಜಯಂತ ಶೆಟ್ಟಿ ಹಾಜರಾಗಿದ್ದು, ಕೆಲವು ಪ್ರಮುಖ ಸಾಕ್ಷ್ಯಗಳನ್ನು ನೀಡಲು ಸಿದ್ಧರಾಗಿದ್ದಾರೆ.

ಸುಮಾರು ಇಪ್ಪತ್ತು ವರ್ಷಗಳ ಹಿಂದೆ ನಡೆದಿದೆ ಎನ್ನಲಾದ ಘಟನೆಗಳಿಗೆ ಸಂಬಂಧಿಸಿದಂತೆ, ಜಯಂತ ಶೆಟ್ಟಿ ಅವರು ಬೆಳ್ತಂಗಡಿಯಲ್ಲಿರುವ ಎಸ್‌ಐಟಿ ಕಚೇರಿಗೆ ತಡರಾತ್ರಿ ಆಗಮಿಸಿದ್ದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಂತ ಶೆಟ್ಟಿ, ಹಲವು ವರ್ಷಗಳ ಹಿಂದೆಯೇ ಧರ್ಮಸ್ಥಳದಲ್ಲಿ ಹಲವು ಕೊಲೆಗಳಾಗಿವೆ ಎಂದು ಸಾರ್ವಜನಿಕವಾಗಿ ಹೇಳಿದ್ದೆ ಎಂದರು. ಅಲ್ಲದೇ, ಈ ವಿಚಾರಗಳ ಬಗ್ಗೆ ಅನೇಕ ವೇದಿಕೆಗಳಲ್ಲಿ ಮಾತನಾಡಿದ್ದಾಗಿ ತಿಳಿಸಿದರು.

ಈ ವಿಷಯದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚಿಸಿದ್ದು ಉತ್ತಮ ಬೆಳವಣಿಗೆ ಎಂದು ಜಯಂತ ಶೆಟ್ಟಿ ಶ್ಲಾಘಿಸಿದರು. ತನಿಖಾ ತಂಡದ ಅಧಿಕಾರಿಗಳು ಭಾನುವಾರ ರಜೆ ಇರುವ ಕಾರಣ, ಸೋಮವಾರ ಬರುವಂತೆ ಸೂಚಿಸಿದ್ದು, ಆ ದಿನ ಎಲ್ಲ ಮಾಹಿತಿಯನ್ನು ಅವರಿಗೆ ನೀಡುತ್ತೇನೆ ಎಂದು ಶೆಟ್ಟಿ ಹೇಳಿದರು.

‘ಕೊಲೆಗಳ ಬಗ್ಗೆ ಎಲ್ಲರಿಗೂ ತಿಳಿದಿತ್ತು’

ಜಯಂತ ಶೆಟ್ಟಿ ಅವರ ಪ್ರಕಾರ, ಆ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಕೊಲೆಗಳ ಬಗ್ಗೆ ಸ್ಥಳೀಯರಿಗೆಲ್ಲ ತಿಳಿದಿತ್ತು. ಆದರೆ, ‘ಭಯದಿಂದ ಯಾರೂ ಬಾಯಿ ಬಿಡುತ್ತಿರಲಿಲ್ಲ’ ಎಂದಿದ್ದಾರೆ. ಈಗ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವುದರಿಂದ ಆ ಭಯ ದೂರವಾಗಿದೆ. ಹೀಗಾಗಿ, ತಾನು ದೂರು ನೀಡಲು ಮುಂದೆ ಬಂದಿರುವುದಾಗಿ ಅವರು ತಿಳಿಸಿದ್ದಾರೆ.

ತಮ್ಮ ಜೊತೆ ಇನ್ನೂ ಐದಾರು ಜನ ಸಾಕ್ಷಿಗಳು ಮುಂದೆ ಬರುವುದಾಗಿ ಹೇಳಿದ್ದಾರೆ ಎಂದು ಶೆಟ್ಟಿ ಬಹಿರಂಗಪಡಿಸಿದ್ದಾರೆ. ಮೃತದೇಹಗಳನ್ನು ಕಂಡಿದ್ದ ಸಾಕ್ಷ್ಯವನ್ನೂ ಅವರು ಹೇಳಿಕೊಂಡಿದ್ದಾರೆ. ‘ಮರಣೋತ್ತರ ಪರೀಕ್ಷೆ ಮಾಡಿಸದೇ, ಎಫ್‌ಐಆರ್ ದಾಖಲಿಸದೇ ಮೃತದೇಹಗಳನ್ನು ಹೂತಿದ್ದಾರೆ’ ಎಂದು ಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಬಾಲಕಿಯೊಬ್ಬಳ ಮೃತದೇಹ ವಾರಗಟ್ಟಲೆ ಹಾಗೆಯೇ ಬಿದ್ದಿದ್ದರೂ, ಪೊಲೀಸರಿಗೆ ಮಾಹಿತಿ ನೀಡದೆ ಹೂತುಹಾಕಿದ್ದನ್ನು ತಾನು ಕಣ್ಣಾರೆ ನೋಡಿದ್ದಾಗಿ ಅವರು ಹೇಳಿಕೊಂಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲಿ ಯಾಕೆ ಧ್ವನಿ ಎತ್ತಲಿಲ್ಲ ಎಂದು ಮಾಧ್ಯಮಗಳು ಪ್ರಶ್ನಿಸಿದಾಗ, ‘ಅಂದು ಬಾಯಿಬಿಡುವ ಪರಿಸ್ಥಿತಿ ಇರಲಿಲ್ಲ’ ಎಂದು ಜಯಂತ ಶೆಟ್ಟಿ ತಿಳಿಸಿದ್ದಾರೆ. ಜೊತೆಗೆ, ‘ನನ್ನ ಕುಟುಂಬದ ಹೆಣ್ಣುಮಗಳಾದ ಪದ್ಮಲತಾ ಪ್ರಕರಣಕ್ಕೂ ಏನಾಯಿತು ಎಂಬುದನ್ನು ಎಸ್‌ಐಟಿಗೆ ತಿಳಿಸುವವರೂ ಇದ್ದಾರೆ’ ಎಂದು ಹೇಳಿದರು.

ಈ ಕುರಿತು ಎಸ್‌ಐಟಿ ತಂಡ ಯಾವ ರೀತಿ ತನಿಖೆ ನಡೆಸಿ, ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು.

ಧರ್ಮಸ್ಥಳ ಪ್ರಕರಣದ ದೂರುದಾರನಿಗೆ ಬೆದರಿಕೆ, ಕೇಸ್ ವಾಪಸ್ ಪಡೆಯಲು ಒತ್ತಡ: ಎಸ್‌ಐಟಿ ಅಧಿಕಾರಿ ವಿರುದ್ಧ ಗಂಭೀರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...