Homeಕರ್ನಾಟಕBREAKING News| ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

BREAKING News| ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

- Advertisement -
- Advertisement -

ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವುದನ್ನು ಮೌಖಿಕವಾಗಿ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

“ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿರಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ಹೈಕೋರ್ಟ್ ಆದೇಶದ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡದ ಕಾರಣ ಅರ್ಜಿದಾರರು, ಕರ್ನಾಟಕ ಹೈಕೋರ್ಟ್ ಪ್ರೊಸೀಡಿಂಗ್ಸ್ ಲೈವ್ ಲಾನಲ್ಲಿ ಆಗಿರುವ ಲೈವ್ ಟ್ವೀಟ್‌ಗಳ ಪಠ್ಯವನ್ನು ಸಲ್ಲಿಸಿದ್ದಾರೆ.

ಗುರುವಾರ ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠವು ಹಿಜಾಬ್ ನಿಷೇಧ ಪ್ರಕರಣವನ್ನು ಆಲಿಸಿದೆ ಮತ್ತು ವಿಷಯವನ್ನು ಶೀಘ್ರವಾಗಿ ಪರಿಹರಿಸಬೇಕೆಂದು ಬಯಸಿದೆ. ಆದರೆ ವಿಷಯವು ಬಾಕಿ ಉಳಿದಿರುವವರೆಗೂ ಶಾಂತಿಯನ್ನು ಕಾಪಾಡಲು ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಉಡುಪುಗಳನ್ನು ಧರಿಸಲು ಅವಕಾಶವಿಲ್ಲ ಎಂದು ಹೇಳಿದೆ. ಜೊತೆಗೆ ಫೆಬ್ರವರಿ 14ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮುಖ್ಯ ನ್ಯಾಯಾಧೀಶರು ಮಧ್ಯಂತರ ಆದೇಶವನ್ನು ನೀಡುತ್ತಿದ್ದಂತೆ, ಮುಸ್ಲಿಂ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ವಕೀಲರು ಈ ಮಧ್ಯಂತರ ಆದೇಶವು ಹಕ್ಕುಗಳನ್ನು ಅಮಾನತುಗೊಳಿಸುತ್ತದೆ ಎಂದು ವಾದಿಸಿದರು. “ಆಹಾರ ಮತ್ತು ನೀರಿನ ನಡುವೆ ಆಯ್ಕೆ ಮಾಡಲು ನಮಗೆ ತಿಳಿಸಲಾಗಿದೆ. ಎರಡೂ ಅತ್ಯಗತ್ಯ” ಎಂದು ವಕೀಲರು ಹೇಳಿದರು.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅನುಮತಿ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌‌ನಲ್ಲಿ ಸಲ್ಲಿಸಲಾಗಿರುವ ಅರ್ಜಿಗೆ ಮಧ್ಯಂತರ ಆದೇಶ ನೀಡುವುದಾಗಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಹೇಳಿದ್ದರು.  ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದರು.

ಪೀಠದಲ್ಲಿ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿಯುದ್ದೀನ್ ವಿಚಾರಣೆಯನ್ನು ಗುರುವಾರ ನಡೆಸಿದ್ದರು.

ಅರ್ಜಿದಾರ ವಿದ್ಯಾರ್ಥಿಯರ ಪರವಾಗಿ ವಾದಿಸಿದ ಹಿರಿಯ ವಕೀಲರಾದ ಸಂಜಯ್ ಹೆಗ್ಡೆ ಮತ್ತು ದೇವದತ್‌ ಕಾಮತ್‌, “ಮಧ್ಯಂತರ ಆದೇಶ” ನೀಡುವಂತೆ ನ್ಯಾಯಾಲಯವನ್ನು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಹೇಳಿಕೆ ನೀಡಿತ್ತು.


ಇದನ್ನೂ ಓದಿರಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್‌‌, ಕೇಸರಿ ವಿಚಾರಣೆ ಮುಂದೂಡಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...