BREAKING NEWS: ಚನ್ನರಾಯಪಟ್ಟಣ ರೈತರಿಗೆ ಐತಿಹಾಸಿಕ ಗೆಲುವು; ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದು

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ 1198 ದಿನಗಳ ಹೋರಾಟಕ್ಕೆ ಅಂತಿಮವಾಗಿ ಐತಿಹಾಸಿಕ ಜಯ ಸಿಕ್ಕಿದ್ದು, ಇಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.