Homeಕರ್ನಾಟಕBREAKING NEWS| ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಮತ್ತೆರಡು ಪ್ರಕರಣ ದಾಖಲು

BREAKING NEWS| ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಮತ್ತೆರಡು ಪ್ರಕರಣ ದಾಖಲು

- Advertisement -
- Advertisement -

‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಮತ್ತೆರಡು ಪ್ರಕರಣ ದಾಖಲಾಗಿರುವುದಾಗಿ ‘ದಿ ಫೈಲ್‌’ ವರದಿ ಮಾಡಿದೆ.

ಮತ್ತಿಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಸಂಬಂಧ ದೂರು ದಾಖಲಿಸಿದ್ದಾರೆ. ಅಕ್ಕಮಹಾದೇವಿ, ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 12 ಮತ್ತು 14 ವಯಸ್ಸಿನ ವಿದ್ಯಾರ್ಥಿನಿಯರು ಪೋಷಕರೊಂದಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಮುರುಘಾ ಮಠಾಧೀಶರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಂಗ ಬಂಧನದ ಅವಧಿಯನ್ನು ಅಕ್ಟೋಬರ್ 21ರವರೆಗೆ ವಿಸ್ತರಣೆಯಾಗಿತ್ತು. ಇದರ ನಡುವೆ ಮತ್ತೆರಡು ಹೆಣ್ಣುಮಕ್ಕಳು ದೂರು ನೀಡಲು ಮುಂದಾಗಿರುವುದು ಪ್ರಕರಣದ ವ್ಯಾಪ್ತಿ ದೊಡ್ಡದಾಗಿದೆ.

12 ಮತ್ತು 14 ವರ್ಷದ ಬಾಲಕಿಯರಿಬ್ಬರು ತಮ್ಮ ಪೋಷಕರೊಂದಿಗೆ ಮೈಸೂರಿನ ಒಡನಾಡಿ ಸ್ಟ್ಯಾನ್ಲಿ ಅವರನ್ನು ಸಂಪರ್ಕಿಸಿದ್ದರು. ಅವರ ಸಲಹೆ ಮೇರೆಗೆ ಮಕ್ಕಳು ಮತ್ತು ಪೋಷಕರು ಮೈಸೂರಿನ ಸಿಡಬ್ಲ್ಯೂಸಿಯ ಮುಂದೆ ಗುರುವಾರ (ಅ.13)ರಂದು ಸಂಜೆ ಹಾಜರಾಗಿದ್ದಾರೆ ಎಂದು ಮೂಲಗಳನ್ನು ‘ದಿ ಫೈಲ್‌’ ಉಲ್ಲೇಖಿಸಿದೆ.

ಸಿಡಬ್ಲ್ಯೂಸಿಯು ಮಕ್ಕಳಿಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದೆ. ಆ ನಂತರ ಸಂತ್ರಸ್ತ ಬಾಲಕಿಯರ ಹೇಳಿಕೆಗಳನ್ನು ಪಡೆದು ದಾಖಲಿಸಿ ತಕ್ಷಣವೇ ಮುರುಘಾ ಶರಣರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಸಿಡಬ್ಲ್ಯೂಸಿಯು ಆದೇಶ ಹೊರಡಿಸಿದೆ ಎನ್ನಲಾಗಿದೆ.

ಕಳೆದ ಆಗಸ್ಟ್‌ನಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿತ್ತು. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಹಲವು ದಿನಗಳಿಂದಲೂ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂಗತಿ ಹೊರಬಿದ್ದಿತ್ತು. ಅಲ್ಲಿ ನ್ಯಾಯ ದೊರಕುವುದಿಲ್ಲ ಎಂಬ ಆತಂಕದಲ್ಲಿ ತೊಂದರೆಗೊಳಗಾದ ವಿದ್ಯಾರ್ಥಿನಿಯರು ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದ್ದರು.

ಒಡನಾಡಿ ಸಂಸ್ಥೆಯು ಮಕ್ಕಳನ್ನು ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿತ್ತು. ತೊಂದರೆಗೊಳಗಾದ ವಿದ್ಯಾರ್ಥಿನಿಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂಬುದನ್ನು ಖಚಿತಪಡಿಸಿಕೊಂಡ ನಂತರ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಮೊಕದ್ದಮೆ ದಾಖಲಿಸಬೇಕು ಎಂದು ಸಮಿತಿಯು ಆದೇಶ ಹೊರಡಿಸಿತ್ತು.

ಇದನ್ನೂ ಓದಿರಿ: ಮುರುಘಾ ಮಠದ ಶಿವಮೂರ್ತಿ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯದ ದೂರು | ಕ್ರಮ ಕೈಗೊಳ್ಳದ ಜಿಲ್ಲಾಡಳಿತ

ಆರಂಭದಲ್ಲಿ ಪ್ರಕಣವನ್ನು ದಾಖಲಿಸಲು ನಜರಾಬಾದ್ ಠಾಣೆ ಪೊಲೀಸರು ಹಿಂದೇಟು ಹಾಕಿದ್ದರು. ಆನಂತರ ಜಿಲ್ಲಾಧಿಕಾರಿಯವರ ಗಮನಕ್ಕೆ ತಂದ ಬಳಿಕ ಪ್ರಕರಣ ದಾಖಲಿಸಲಾಯಿತು. ಸಮಿತಿ ಆದೇಶದ ಅನ್ವಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅರುಂಧತಿ ಅವರು ನೀಡಿದ ದೂರು ಆಧರಿಸಿ ನಜರ್‌ಬಾದ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಯಿತು. ನಂತರ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿತ್ತು.

“ಚಿತ್ರದುರ್ಗದ ಮುರುಘಾಮಠದ ವಿದ್ಯಾರ್ಥಿನಿಲಯದಲ್ಲಿರುವ ನಮ್ಮನ್ನು ಸ್ವಾಮೀಜಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಸ್ವಾಮೀಜಿ ಅವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ಅವರೇ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಮತ್ತು ಬರುವಂತೆ ಮಾಡಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದರು” ಎಂದು ಎಸ್‌ಎಸ್‌ಎಲ್‌ಸಿ ಓದುತ್ತಿರುವ ವಿದ್ಯಾರ್ಥಿನಿಯರು ಹೇಳಿದ್ದರು.

“ಇದೇ ರೀತಿಯ ಅನುಭವ ಹಲವು ವಿದ್ಯಾರ್ಥಿನಿಯರಿಗೆ ಆಗಿದ್ದರೂ ದೂರು ನೀಡಲು ಹೆದರುತ್ತಿದ್ದರು. ನಮಗೆ ಚಿತ್ರದುರ್ಗದಲ್ಲಿ ನ್ಯಾಯ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮೈಸೂರಿನ ಒಡನಾಡಿ ಸಂಸ್ಥೆಯನ್ನು ಸಂಪರ್ಕಿಸಿದೆವು” ಎಂದು ವಿದ್ಯಾರ್ಥಿನಿಯರು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...