Homeಕರೋನಾ ತಲ್ಲಣನಾಳೆಯಿಂದ 14 ದಿನಗಳವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್!‌

ನಾಳೆಯಿಂದ 14 ದಿನಗಳವರೆಗೆ ರಾಜ್ಯದಾದ್ಯಂತ ಲಾಕ್‌ಡೌನ್!‌

- Advertisement -
- Advertisement -

ರಾಜ್ಯದಾದ್ಯಂತ ಕೊರೊನಾ ಉಲ್ಬಣಗೊಂಡಿದ್ದು ಮಂಗಳವಾರದಿಂದ ಮುಂದಿನ ಹದಿನಾಲ್ಕು ದಿನಗಳ ವರೆಗೆ ಲಾಕ್‌ಡೌನ್ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಸೋಮವಾರ ಘೋಷಣೆ ಮಾಡಿದ್ದಾರೆ.

ಇಂದು ವಿಧಾನಸೌಧದಲ್ಲಿ ಮಾತಾಡಿದ ಮುಖ್ಯಮಂತ್ರಿ, ರಾಜ್ಯದಾದ್ಯಂತ ಮಂಗಳವಾರ ರಾತ್ರಿಯಿಂದ ಮೇ 10ರ ವರೆಗೆ ಸಂಪೂರ್ಣ ಲಾಕ್‌ಡೌನ್‌ ಮಾಡುತ್ತಿರುವುದಾಗಿ ಹೇಳಿದ್ದಾರೆ. ಬಿಗಿಯಾದ ಕ್ರಮಗಳು ಹೇರಲಾಗಿದ್ದು, ಲಾಕ್‌ಡೌನ್‌ ಸಮಯದಲ್ಲಿ ಬೆಳಿಗ್ಗೆ 6 ರಿಂದ 10 ಗಂಟೆಗಳ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಮೋದಿಯವರೆ ಬಾಯಿ ಬಡಾಯಿ ಬಿಟ್ಟಾಕಿ ಉಚಿತ ಲಸಿಕೆ ನೀಡಿ: ಸಿದ್ದರಾಮಯ್ಯ

ಗಾರ್ಮೆಂಟ್‌ ಬಿಟ್ಟು ಉಳಿದ ಎಲ್ಲಾ ಕೈಗಾರಿಗಕೆಗಳಿಗೆ ಅವಕಾಶ ನೀಡಲಾಗಿದೆ. ಜನರ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಆದರೆ ಬೆಳಿಗ್ಗೆ 6 ರಿಂದ 10 ಗಂಟೆಗಳ ವರೆಗೆ ಮದ್ಯದ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಪಾರ್ಸೆಲ್‌ಗೆ ಅವಕಾಶವಿದೆ.

ಮುಂದಿನ ಹದಿನಾಲ್ಕು ದಿನಗಳ ಕಾಲ ಸಾರ್ವಜನಿಕ ಸಾರಿಗೆಯನ್ನು ಕೂಡ ಬಂದ್ ಮಾಡಲಾಗುತ್ತದೆ, ಮೆಟ್ರೋ ಓಡಾಟ ಕೂಡಾ ಇರುವುದಿಲ್ಲ. ಕಟ್ಟಡ ನಿರ್ಮಾಣ ಕಾಮಗಾರಿಗಳು ಯಾವುದೆ ಅಡ್ಡಿಯಿಲ್ಲದೆ ಮುಂದುವರೆಯಬಹುದು ಎಂದು ರಾಜ್ಯ ಸರ್ಕಾರ ಹೇಳಿದೆ.

ಅಂತರಾಜ್ಯ ವಾಹನ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಕೃಷಿ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.

“ಲಾಕ್‌ಡೌನ್‌ ದಿನಗಳಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರದಿದ್ದರೆ, ಇನ್ನೂ ಒಂದು ವಾರ ಮುಂದುವರೆಯುತ್ತದೆ” ಎಂದು ಮುಖ್ಯಮಂತ್ರಿ ಲಾಕ್‌ಡೌನ್‌ ಮುಂದುವರಿಕೆಯ ಸೂಚನೆ ಕೂಡಾ ನೀಡಿದ್ದಾರೆ.

ಮುಂದಿನ ಕೆಲವೇ ಗಂಟೆಗಳಲ್ಲಿ ವಿಸ್ತೃತ ಮಾಹಿತಿಯನ್ನು ಸರ್ಕಾರವು ಹೊರಡಿಸಲಿದೆ.

ಇದನ್ನೂ ಓದಿ: ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಉಡುಪಿ ಜಿಲ್ಲಾಧಿಕಾರಿ? ಅವರು ಹೇಳಿದ್ದೇನು?

ವಿಡಿಯೊ ನೋಡಿ: ಕೋವಿಡ್ ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ/ತಾಲೂಕು ಮಟ್ಟದಲ್ಲಿ ನಾವೇನು ಮಾಡಬಹುದು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...