Homeಮುಖಪುಟಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

ಪ್ರತಿಸ್ಪರ್ಧಿ ಅಭ್ಯರ್ಥಿಗೆ ಲಂಚ: ಕೇರಳ ಬಿಜೆಪಿ ಅಧ್ಯಕ್ಷರ ವಿರುದ್ಧ ಎಫ್‍ಐಆರ್ ದಾಖಲು

- Advertisement -
- Advertisement -

ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಕೇರಳ ಬಿಜೆಪಿ ಅಧ್ಯಕ್ಷ ಕೆ. ಸುರೇಂದ್ರನ್‍ ವಿರುದ್ಧ ಪೊಲೀಸರು ನ್ಯಾಯಾಲಯದ ನಿರ್ದೇಶನದಂತೆ ಎಫ್‍ಐಆರ್ ದಾಖಲಿಸಿದ್ದಾರೆ.

ಮಂಜೇಶ್ವರಂನಲ್ಲಿ ಸ್ಪರ್ಧಿಸಿದ್ದ ಬಿಎಸ್‍ಪಿ ಅಭ್ಯರ್ಥಿ ಕೆ. ಸುಂದರ ಅವರಿಗೆ ಕಣದಿಂದ ಹಿಂದೆ ಸರಿಯಲು ಸುರೇಂದ್ರನ್‍ 2.5 ಲಕ್ಷ ರೂ. ಲಂಚ ನೀಡಿದ ಆರೋಪ ಎದುರಿಸುತ್ತಿದ್ದಾರೆ. ನಾಮಪತ್ರ ಹಿತೆಗೆದುಕೊಂಡು ಬಿಜೆಪಿ ಸೇರಿದ್ದ ಸುಂದರ ಅವರೇ ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್ ಈ ಕ್ಷೇತ್ರದಲ್ಲಿ 2 ಸಾವಿರ ಮತಗಳಿಂದ ಗೆದ್ದಿದ್ದಾರೆ.

ಫಲಿತಾಂಶದಲ್ಲಿ ಮೂರನೇ ಸ್ಥಾನದಲ್ಲಿದ್ದ ಸಿಪಿಎಂ ಮುಖಂಡ ವಿ.ವಿ.ರಮೇಶನ್‌ರ ಮನವಿಗೆ ಸ್ಥಳೀಯ ನ್ಯಾಯಾಲಯ ಸ್ಪಂದಿಸಿದ್ದು, ‘ಚುನಾವಣೆಗಳನ್ನು ಹಾಳುಮಾಡುವ ಉದ್ದೇಶದಿಂದ ಲಂಚ’ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು, ಕೆ ಸುಂದರ ಅವರ ಹೇಳಿಕೆಯನ್ನು ದಾಖಲಿಸಲಾಗಿದ್ದು, ಹಣ ಹೇಗೆ ವಿನಿಮಯವಾಯಿತು ಮತ್ತು ಯಾರು ಅದನ್ನು ನೀಡಿದರು ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

ಕೆ. ಸುರೇಂದ್ರನ್ ವಿರುದ್ಧದ ಈ ಆರೋಪಗಳು ಇತ್ತೀಚಿನವು. ಅವರು ಮತ್ತು ಅವರ ಪಕ್ಷವು ಕೆಲವು ಮುಜುಗರದ ಆರೋಪಗಳನ್ನು ಎದುರಿಸುತ್ತಿದೆ. ಇದರಲ್ಲಿ ಒಂದು, ಜನತಿಪತ್ಯ ರಾಷ್ಟ್ರೀಯ ಪಕ್ಷ (ಜೆಆರ್‌ಪಿ) ಮುಖಂಡ ಪರಿಸಿಥಾ ಅಝಿಕೊಡೆ ಕೂಡ ಇಂಥದ್ದೇ ಆರೋಪ ಮಾಡಿದ್ದಾರೆ. ಜೆಆರ್‍ಪಿ ನಾಯಕ ಸಿ.ಕೆ. ಜಾನು ಅವರಿಗೆ ಎನ್‍ಡಿಎ ಸೇರಲು ಕೆ. ಸುರೇಂದ್ರನ್‍  10 ಲಕ್ಷ ರೂ. ಲಂಚ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸುರೇಂದ್ರನ್ ಈ ಆರೋಪವನ್ನು ನಿರಾಕರಿಸಿದ್ದಾರೆ.

3.5 ಕೋಟಿ ದರೋಡೆ ಪ್ರಕರಣ

ಏಪ್ರಿಲ್‍ 6ರ ಚುನಾವಣೆಗೂ ಮೂರು ದಿನ ಮುನ್ನ ಕೇರಳ ಹೆದ್ದಾರಿಯಲ್ಲಿ 3.5 ಕೋಟಿ ರೂ.ಗಳ ದರೋಡೆ ನಡೆದಿದೆ ಮತ್ತು ಇದು ಹವಾಲಾ ಹಣ ಎಂಬ ಆರೋಪವಿದೆ. ಇದರಲ್ಲೂ ಕೆ.ಸುರೇಂದ್ರನ್‍ ಹೆಸರು ಕೇಳಿ ಬಂದಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

“ಕದ್ದ ಹವಾಲಾ ಹಣದ ಬಗ್ಗೆ ಕನಿಷ್ಠ ಇಬ್ಬರು ಬಿಜೆಪಿ ನಾಯಕರನ್ನು ಪ್ರಶ್ನಿಸಲಾಗಿದೆ. ಹಣದ ಮೂಲ ಮತ್ತು ಅದನ್ನು ಹಸ್ತಾಂತರಿಸಿದ ವಿವಿಧ ಜನರನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ. ಹೆಚ್ಚಿನ ಬಿಜೆಪಿ ನಾಯಕರನ್ನು ಪ್ರಶ್ನಿಸುವ ಸಾಧ್ಯತೆಯಿದೆ. ನಾವು ಸತ್ಯಗಳನ್ನು ಕಂಡುಹಿಡಿಯುತ್ತಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎರ್ನಾಕುಲಂ ವಲಯದ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಎಲ್ ಪದ್ಮಕುಮಾರ್ ಮತ್ತು ತ್ರಿಶೂರ್ ಜಿಲ್ಲಾ ಬಿಜೆಪಿ ಮುಖ್ಯಸ್ಥ ಕೆ.ಕೆ. ಅನೀಶ್ ಕುಮಾರ್ ಅವರನ್ನು ಪ್ರಶ್ನಿಸಲಾಗಿದೆ. ಇವರಿಬ್ಬರು ಹಣ ಸಾಗಿಸುತ್ತಿದ್ದರು ಎಂಬ ಆರೋಪವಿದೆ. ಇವರಿಬ್ಬರನ್ನೂ ಈಗಾಗಲೇ ಪ್ರಶ್ನಿಸಲಾಗಿದೆ. ಹಣವಿದ್ದ ಇವರ ಕಾರನ್ನು ಅಡ್ಡಗಟ್ಟಿ 3.5 ಕೋಟಿ ರೂ ಹವಾಲಾ ಹಣವನ್ನು ದರೋಡೆ ಮಾಡಲಾದ ಆರೋಪವಿದ್ದು, ಇದರಲ್ಲೂ ಕೆ. ಸುರೇಂದ್ರನ್‍ ಅವರ ಕೈವಾಡ ಇದೆ ಎನ್ನಲಾಗಿದೆ.

ಈ ಹಣವು ಬಿಜೆಪಿಗೆ ಸಂಬಂಧಿಸಿದ ಹವಾಲಾ ನಗದು ಆಗಿರಬಹುದು ಎಂದು ಇದುವರೆಗೆ ನಡೆದ ತನಿಖೆಯಿಂದ ತಿಳಿದುಬಂದಿದೆ.

ಈಗ, ಈ ಪ್ರಕರಣವನ್ನು ತನಿಖೆ ಮಾಡುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಸುರೇಂದ್ರನ್ ಮತ್ತು ಅವನ ಮಗ ಹರಿ ಕೃಷ್ಣನ್ ಅವರನ್ನು ಪ್ರಶ್ನಿಸಲಿದೆ ಎಂದು ತಿಳಿದುಬಂದಿದೆ. ಕರೆ ವಿವರ ದಾಖಲೆಗಳನ್ನು ಆಧರಿಸಿ ಕೆ.ಸುರೇಂದ್ರನ್‍ ಅವರ ಮೇಲೆ ಶಂಕೆ ಶುರುವಾಗಿದೆ.

ಈ ಪ್ರಕರಣದಲ್ಲಿ ಸುರೇಂದ್ರನ್ ಅವರ ಚಾಲಕ ಮತ್ತು ಕಾರ್ಯದರ್ಶಿಯನ್ನು ಎಸ್ಐಟಿ ಈಗಾಗಲೇ ಪ್ರಶ್ನಿಸಿದೆ. ಆರೋಪಗಳನ್ನು ಪರಿಶೀಲಿಸಲು ಬಿಜೆಪಿ ಎರಡು ಸಮಿತಿಗಳನ್ನು ರಚಿಸಿದೆ.

ಚುನಾವಣಾ ನಿಧಿಯೂ ದುರ್ಬಳಕೆ

ಇದರ ಜೊತೆಗೆ ಬಿಜೆಪಿ ಪಕ್ಷವು ನೀಡಿದ ಚುನಾವಣಾ ನಿಧಿಯನ್ನೂ ಕೆ, ಸುರೇಂದ್ರನ್‍ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಪಕ್ಷದ ಹಲವರು ಆರೋಪಿಸಿದ್ದಾರೆ.

ಈ  ಎಲ್ಲ ಆರೋಪಗಳು ರಾಜ್ಯ ಬಿಜೆಪಿಯನ್ನು ಚುನಾವಣೆಯಲ್ಲಿ ಸೋತ ಕೆಲವೇ ವಾರಗಳ ನಂತರ ಬಿಕ್ಕಟ್ಟಿಗೆ ಸಿಲುಕಿಸಿವೆ. ಈ ಸಲ ಬಿಜೆಪಿ ಕೇರಳದಲ್ಲಿ ಇದ್ದ ಏಕೈಕ ಸ್ಥಾನವನ್ನೂ ಕಳೆದುಕೊಂಡಿದೆ.


ಇದನ್ನೂ ಓದಿ: ಪ್ರಧಾನಿ ಭಾಷಣ ಪೂರ್ಣ ಪೊಳ್ಳು- ವೈರಲ್ ಆದ ಶಿವಸುಂದರ್ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...