Homeಮುಖಪುಟರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ 'ಬ್ರಿಕ್ಸ್‌' ಸದಸ್ಯ ರಾಷ್ಟ್ರಗಳು

ರಫಾ ಮೇಲಿನ ಇಸ್ರೇಲ್‌ ಆಕ್ರಮಣವನ್ನು ಖಂಡಿಸಿ ಜಂಟಿ ಹೇಳಿಕೆ ಬಿಡುಗಡೆ ಮಾಡಿದ ‘ಬ್ರಿಕ್ಸ್‌’ ಸದಸ್ಯ ರಾಷ್ಟ್ರಗಳು

- Advertisement -
- Advertisement -

ಭಾರತ ಸೇರಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳ ಒಕ್ಕೂಟ ಬ್ರಿಕ್ಸ್ ದಕ್ಷಿಣ ಪ್ಯಾಲೆಸ್ತೀನ್‌ ರಫಾದಲ್ಲಿನ ನಿರಾಶ್ರಿತರ ಶಿಬಿರಗಳ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸಿದೆ ಮತ್ತು ಅಂತರಾಷ್ಟ್ರೀಯ ನ್ಯಾಯಾಲಯದ ಆದೇಶಗಳ ನಿರ್ಲ್ಷಕ್ಷ್ಯದ ಬಗ್ಗೆ ಕಳವಳನ್ನು ವ್ಯಕ್ತಪಡಿಸಿದೆ.

ಬ್ರಿಕ್ಸ್ ಗುಂಪಿನ ದೇಶಗಳ ವಿದೇಶಾಂಗ ಸಚಿವರುಗಳು ಸೋಮವಾರ ರಷ್ಯಾದಲ್ಲಿ ಸಭೆ ಸೇರಿದ್ದರು. ಸಭೆಯಲ್ಲಿ ಭಾರತದ ಕಾರ್ಯದರ್ಶಿ ದಮ್ಮು ರವಿ ಭಾಗಿಯಾಗಿದ್ದರು.

ಭಾರತವು ಬ್ರೆಜಿಲ್, ರಷ್ಯಾ ಮತ್ತು ಚೀನಾ ಮತ್ತು ದಕ್ಷಿಣ ಆಫ್ರಿಕಾದೊಂದಿಗೆ ಬ್ರಿಕ್ಸ್‌ನ ಸ್ಥಾಪಕ ಸದಸ್ಯ ದೇಶಗಳಲ್ಲಿ ಒಂದಾಗಿದೆ. ಕಳೆದ ವರ್ಷದ ಶೃಂಗಸಭೆಯಲ್ಲಿ ಬ್ಲಾಕ್ ತನ್ನ ಸದಸ್ಯತ್ವವನ್ನು ದ್ವಿಗುಣಗೊಳಿಸಿದ ನಂತರ, ಈಜಿಪ್ಟ್, ಇರಾನ್, ಯುಎಇ, ಸೌದಿ ಅರೇಬಿಯಾ ಮತ್ತು ಇಥಿಯೋಪಿಯಾ ಸೇರಿಕೊಂಡಿದ್ದವು. ಸೋಮವಾರ ನಡೆದ ವಿಸ್ತೃತ ಶೃಂಗಸಭೆಯ ಮೊದಲ ಪ್ರಮುಖ ಸಭೆಯಲ್ಲಿ ಹೊಸದಾಗಿ ಸೆರ್ಪಡೆಗೊಂಡಿದ್ದ ದೇಶಗಳ ಪ್ರತಿನಧಿಗಳು ಕೂಡ ಭಾಗವಹಿಸಿದ್ದರು.

ಗಾಝಾದ ಮೇಲೆ ಇಸ್ರೇಲ್‌ ಹತ್ಯಾಕಾಂಡವನ್ನು ಭಾರತ ಈ ಮೊದಲಿನಿಂದಲೇ ಖಂಡಿಸುತ್ತಾ ಬಂದಿದೆ. ರಷ್ಯಾದಲ್ಲಿ ನಡೆದ ಸಭೆಯ ನಂತರ ಬಿಡುಗಡೆಯಾದ ಜಂಟಿ ಹೇಳಿಕೆಯಲ್ಲಿ ಇಸ್ರೇಲ್‌ನ ಕೃತ್ಯವನ್ನು ಖಂಡಿಸಿದೆ.

ರಾಫಾದಲ್ಲಿ ಇಸ್ರೇಲ್‌ ಮಿಲಿಟರಿ ದಾಳಿ ಮತ್ತು ನಾಗರಿಕರ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುವ ಅದರ ಪರಿಣಾಮಗಳನ್ನು ಬ್ರಿಕ್ಸ್‌ ಸದಸ್ಯರಾಷ್ಟ್ರಗಳು ಬಲವಾಗಿ ಖಂಡಿಸಿದೆ.

ಕಳೆದ ವರ್ಷ ಅಕ್ಟೋಬರ್ 7ರಂದು ಇಸ್ರೇಲ್ ಗಾಝಾದ ಮೇಲೆ ಆಕ್ರಮಣವನ್ನು ಪ್ರಾರಂಭಿಸಿದ ಬಳಿಕ ಕಳೆದ ಒಂಬತ್ತು ತಿಂಗಳಲ್ಲಿ 36,000ಕ್ಕೂ ಹೆಚ್ಚು ಜನರನ್ನು ಇಸ್ರೇಲ್‌ ಹತ್ಯೆ ಮಾಡಿದೆ. ಗಾಝಾ ಪಟ್ಟಿಯ ಮೇಲೆ ಆಕ್ರಮಣದ ವೇಳೆ ಲಕ್ಷಾಂತರ ಪ್ಯಾಲೆಸ್ತೀನ್‌ ನಾಗರಿಕರು ರಫಾದಲ್ಲಿ ತೆರಳಿ ನಿರಾಶ್ರಿತರ ಶಿಬಿರದಲ್ಲಿ ಉಳಿದುಕೊಂಡಿದ್ದರು. ರಫಾವನ್ನು ಯುದ್ಧ ಸಂತ್ರಸ್ತ ನಿರಾಶ್ರಿತರ ಕೊನೆಯ ತಾಣ ಎಂದು ಹೇಳಲಾಗಿತ್ತು. ಆದರೆ ಇಸ್ರೇಲ್‌ ರಫಾವನ್ನೇ ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದೆ. ರಫಾದಲ್ಲಿ ಇಸ್ರೇಲ್ ಆಕ್ರಮಣವು ನಾಗರಿಕರ ಸಾವುನೋವುಗಳನ್ನು ಅಗಾಧವಾಗಿ ಹೆಚ್ಚಿಸುತ್ತದೆ ಎಂದು ವಿಶ್ವವೇ ಕಳವಳ ವ್ಯಕ್ತಪಡಿಸಿದೆ.

ಇಸ್ರೇಲ್‌, ಅಂತರಾಷ್ಟ್ರೀಯ ಕಾನೂನು, ಯುಎನ್ ಚಾರ್ಟರ್, ಯುಎನ್ ನಿರ್ಣಯಗಳು ಮತ್ತು ನ್ಯಾಯಾಲಯದ ಆದೇಶಗಳನ್ನು ನಿರಂತರವಾಗಿ ನಿರ್ಲಕ್ಷಿಸುತ್ತಿರುವ ಬಗ್ಗೆ ಗಂಭೀರ ಕಳವಳವನ್ನು ಬಿಕ್ಸ್‌ ಸದಸ್ಯ ರಾಷ್ಟ್ರಗಳು ವ್ಯಕ್ತಪಡಿಸಿದೆ.

ಇಸ್ರೇಲಿ ದಾಳಿಯಿಂದ ಪ್ಯಾಲೆಸ್ತೀನ್‌ನಲ್ಲಿ ಪರಿಸ್ಥಿತಿ ಹದಗೆಟ್ಟಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಬ್ರಿಕ್ಸ್‌ ದೇಶಗಳು ಜಂಟಿ ಹೇಳಿಕೆಯಲ್ಲಿ ತಕ್ಷಣದ ಕದನ ವಿರಾಮ ಮತ್ತು ಯಾವುದೇ ಅಡೆ ತಡೆಯಿಲ್ಲದೆ ಪ್ಯಾಲೆಸ್ತೀನ್‌ಗೆ ನೆರವು ತಲುಪಿಸುವ ಯುಎನ್ ನಿರ್ಣಯಗಳನ್ನು ಜಾರಿಗೆ ತರಲು ಕರೆ ನೀಡಿದೆ. ಎಲ್ಲಾ ಒತ್ತೆಯಾಳುಗಳು ಮತ್ತು ನಾಗರಿಕರನ್ನು ತಕ್ಷಣವೇ ಮತ್ತು ಬೇಷರತ್ತಾಗಿ ಬಿಡುಗಡೆ ಮಾಡಲು ಅವರು ಹಮಾಸ್‌ ಮತ್ತು ಇಸ್ರೇಲ್‌ಗೆ ಬ್ರಿಕ್ಸ್‌ ಸದಸ್ಯ ರಾಷ್ಟ್ರಗಳು ಕರೆನೀಡಿದೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...