Homeಕರೋನಾ ತಲ್ಲಣ’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌

’ಚಂದನ’ ವಾಹಿನಿಯಲ್ಲಿ ’ಸೇತುಬಂಧ’ ತರಗತಿ ಪ್ರಾರಂಭ: ಸಚಿವ ಸುರೇಶ್ ಕುಮಾರ್‌‌

ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಹಿನ್ನಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಯನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದಕ್ಕಾಗಿ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಒಂದು ತರಗತಿಯಿಂದ ಮತ್ತೊಂದು ತರಗತಿಗೆ ತೇರ್ಗಡೆ ಹೊಂದುವ ಮಕ್ಕಳಿಗೆ ಹಿಂದಿನ ತರಗತಿಗಳ ಕಲಿಕೆಯನ್ನು ನೆನಪಿಸಿ ಮುಂದಿನ ತರಗತಿಗಳಿಗೆ ಸಿದ್ಧಗೊಳಿಸುವ ತರಗತಿಗಳನ್ನು ‘ಸೇತುಬಂಧ’ ಎಂದು ಹೇಳುತ್ತಾರೆ. ಮಕ್ಕಳ ಕಲಿಕೆಯನ್ನು ಸಮಗ್ರವಾಗಿಸುವ ನಿಟ್ಟಿನಲ್ಲಿ ಒಂದು ಪರಿಪೂರ್ಣ ಕಾರ್ಯಕ್ರಮ ಎಂದು ಸಚಿವರು ತಿಳಿಸಿದರು.

ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್‍ಇಆರ್‍ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಬುಧವಾರ ಪರಿಶೀಲಿಸಿದ ಸಚಿವರು, ಇಲಾಖೆ ಸಿದ್ಧಪಡಿಸಿದ ವಿಡಿಯೋ ತರಗತಿಗಳನ್ನು ವೀಕ್ಷಿಸಿದರು.

ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ ಎಂದು ಅವರು ಹೇಳಿದ್ದಾರೆ.

ಕೆಲವೇ ದಿನಗಳಲ್ಲಿ 8ರಿಂದ 10ನೇ ತರಗತಿಯ ಸೇತುಬಂದ ವಿಡಿಯೋ ತರಗತಿಗಳು ಚಂದನ ವಾಹಿನಿಯಲ್ಲಿ ಆರಂಭಗೊಳ್ಳಲಿವೆ. ಆ ನಂತರ ಇಂಗ್ಲಿಷ್ ಮಾಧ್ಯಮಗಳಲ್ಲೂ ಈ ತರಗತಿಗಳ ಪಾಠಗಳನ್ನು ಪ್ರಾರಂಭಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿದ್ದು, ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದೆ ಎಂದರು.


ಓದಿ: ಆನ್‌ಲೈನ್‌ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ: ಸುರೇಶ್ ಕುಮಾರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ ಪ್ರಕರಣ: ಟಿವಿಕೆ ನಾಯಕ ವಿಜಯ್‌ಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ನೋಟಿಸ್

ಕರೂರ್ ಕಾಲ್ತುಳಿತ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಟಿವಿಕೆ ನಾಯಕ ವಿಜಯ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ಮಂಗಳವಾರ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ನಟ-ರಾಜಕಾರಣಿ ವಿಜಯ್ ಅವರ ತಮಿಳಗ...

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ರಾಯಭಾರ ಕಚೇರಿ ಉದ್ಘಾಟನೆ : ‘ಐತಿಹಾಸಿಕ ಕ್ಷಣ’ ಎಂದ ರಾಯಭಾರಿ ಹುಸಾಮ್ ಝೊಮ್ಲೋಟ್

ಲಂಡನ್‌ನಲ್ಲಿ ಪ್ಯಾಲೆಸ್ತೀನ್ ದೇಶದ ರಾಯಭಾರಿ ಕಚೇರಿ ಅಧಿಕೃತವಾಗಿ ಉದ್ಘಾಟನೆಯಾಗಿದ್ದು, ಯುಕೆಯ ಪ್ಯಾಲೆಸ್ತೀನ್‌ ರಾಯಭಾರಿ ಇದನ್ನು 'ಐತಿಹಾಸಿಕ ಕ್ಷಣ' ಎಂದು ಬಣ್ಣಿಸಿದ್ದಾರೆ. ಸೋಮವಾರ (ಜ.5) ಪಶ್ಚಿಮ ಲಂಡನ್‌ನ ಹ್ಯಾಮರ್‌ಸ್ಮಿತ್‌ನಲ್ಲಿ ನಡೆದ ರಾಯಭಾರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ...

ಬಾಂಗ್ಲಾದೇಶದಲ್ಲಿ ಹಿಂದೂ ಉದ್ಯಮಿ ಮತ್ತು ಪತ್ರಕರ್ತನಾಗಿದ್ದ ರಾಣಾ ಪ್ರತಾಪ್ ಬೈರಾಗಿ ತಲೆಗೆ ಗುಂಡಿಕ್ಕಿ ಹತ್ಯೆ 

ಬಾಂಗ್ಲಾದೇಶದ ಜೆಸ್ಸೋರ್ ಜಿಲ್ಲೆಯಲ್ಲಿ ಸೋಮವಾರ 38 ವರ್ಷದ ರಾಣಾ ಪ್ರತಾಪ್ ಬೈರಾಗಿ ಅವರ ತಲೆಗೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಹಲವು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿದೆ.  ಬೈರಾಗಿ ಒಬ್ಬ ಹಿಂದೂ ಉದ್ಯಮಿ ಮತ್ತು...

ತಿರುಪರನ್‌ಕುಂದ್ರಂ ಬೆಟ್ಟದ ಮೇಲೆ ದೀಪ ಬೆಳಗಿಸುವ ಆದೇಶ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಮಧುರೈನ ತಿರುಪರನ್‌ಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದಲ್ಲಿ ದೀಪ ಬೆಳಗಿಸಲು ಅನುಮತಿ ನೀಡಿ ಮದ್ರಾಸ್‌ ಹೈಕೋರ್ಟ್‌ನ ಮಧುರೈ ಪೀಠದ ಏಕ ಸದಸ್ಯ ನ್ಯಾಯಾಧೀಶರು ನೀಡಿದ ಆದೇಶವನ್ನು ವಿಭಾಗೀಯ ಪೀಠ ಎತ್ತಿಹಿಡಿದಿದೆ. ನ್ಯಾಯಮೂರ್ತಿ ಜಿ. ಜಯಚಂದ್ರನ್...

ಕರ್ನಾಟಕದ ದೀರ್ಘಾವಧಿಯ ಮುಖ್ಯಮಂತ್ರಿಯಾಗಿ ದಾಖಲೆ ಸೃಷ್ಟಿಸಿದ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಿವಂಗತ ಡಿ.ದೇವರಾಜ್ ಅರಸ್ ಅವರ ದಾಖಲೆಯನ್ನು (7 ವರ್ಷ 239 ದಿನಗಳು) ಸಿದ್ದರಾಮಯ್ಯ ಮುರಿದಿದ್ದಾರೆ.  ದೇವರಾಜು ಅರಸು ಮತ್ತು ಸಿದ್ದರಾಮಯ್ಯ ಅವರು ಸಾಮಾಜಿಕ...

ಅಜ್ಮೀರ್ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಅರ್ಜಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಉರೂಸ್ ಪ್ರಯುಕ್ತ ಅಜ್ಮೀರ್‌ನ ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ ದರ್ಗಾಕ್ಕೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ಮತ್ತು ದರ್ಗಾಕ್ಕೆ ಸರ್ಕಾರದ ವತಿಯಿಂದ ನೀಡಲಾಗುವ ಗೌರವಗಳನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು...

ವೆನೆಜುವೆಲಾದ ಅಧ್ಯಕ್ಷ ಮಡುರೊ ಅವರ ಅಪಹರಣ ಖಂಡಿಸಿದ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸದಸ್ಯರು

ವೆನೆಜುವೆಲಾದ ಅಧ್ಯಕ್ಷ ನಿಕೋಲಸ್ ಮಡುರೊ ಅವರ ಅಪಹರಣವನ್ನು ಅಮೆರಿಕದ ಮಿತ್ರರಾಷ್ಟ್ರಗಳು ಸೇರಿದಂತೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಖಂಡಿಸಿದ್ದಾರೆ. ವೆನೆಜುವೆಲಾ ಮೇಲಿನ ಅಮೆರಿಕದ ದಾಳಿ ಮತ್ತು ಮಡುರೊ ಅಪಹರಣದ ಬಗ್ಗೆ ಚರ್ಚಿಸಲು ವಿಶ್ವಸಂಸ್ಥೆಯ ಭದ್ರತಾ...

“ನನ್ನನ್ನು ಅಪಹರಿಸಲಾಗಿದೆ, ನಾನು ಈಗಲೂ ವೆನೆಜುವೆಲಾದ ಅಧ್ಯಕ್ಷ” : ಯುಎಸ್‌ ಕೋರ್ಟ್ ಮುಂದೆ ನಿಕೋಲಸ್ ಮಡುರೊ ಹೇಳಿಕೆ

"ಅಮೆರಿಕ ಮಾಡಿರುವ ಮಾದಕವಸ್ತು ಕಳ್ಳಸಾಗಣೆ ಆರೋಪ ಪ್ರಕರಣಗಳಲ್ಲಿ ನಾನು ತಪ್ಪೊಪ್ಪಿಕೊಂಡಿಲ್ಲ. ನಾನು ನಿರಪರಾಧಿ, ನನ್ನನ್ನು ಅಪಹರಿಸಲಾಗಿದೆ. ನಾನು ಈಗಲೂ ವೆನೆಜುವೆಲಾದ ಸಾಂವಿಧಾನಿಕ ಅಧ್ಯಕ್ಷ" ಎಂದು ನಿಕೋಲಸ್ ಮಡುರೊ ಅಮೆರಿಕದ ನ್ಯಾಯಾಲಯದ ಮುಂದೆ ಹೇಳಿದ್ದಾರೆ. ವೆನೆಜುವೆಲಾ...

ಗುಜರಾತ್ ವಿಶೇಷ ಆರ್ಥಿಕ ವಲಯದಿಂದ ಪಡೆದ ವಿದ್ಯುತ್‌ಗಾಗಿ ಅದಾನಿ ಕಂಪನಿಗೆ ಕಸ್ಟಮ್ಸ್ ಸುಂಕ ವಿನಾಯಿತಿ ನೀಡಲು ಸುಪ್ರೀಂ ಅನುಮತಿ

ಮುಂದ್ರಾದಲ್ಲಿರುವ ತನ್ನ SEZ ಘಟಕದಿಂದ ದೇಶೀಯ ಸುಂಕ ಪ್ರದೇಶಕ್ಕೆ (DTA) ಸರಬರಾಜು ಮಾಡುವ ವಿದ್ಯುತ್ ಮೇಲಿನ ಕಸ್ಟಮ್ಸ್ ಸುಂಕವನ್ನು ವಿಧಿಸುವುದರಿಂದ ಅದಾನಿ ಪವರ್‌ಗೆ ವಿನಾಯಿತಿ ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್‌ನ ಜೂನ್ 28, 2019...

ಅರಣ್ಯ ಭೂಮಿ ಒತ್ತುವರಿ ಆರೋಪ; ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾಂಗ್ರೆಸ್, ಬಿಜೆಪಿ ಶಾಸಕರು

ಬೀದರ್ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಹಾಗೂ ಕಾಂಗ್ರೆಸ್ ಪರಿಷತ್ ಸದಸ್ಯ ಭೀಮರಾವ್ ಪಾಟೀಲ್...