Homeಮುಖಪುಟರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

ರಾಜ್ಯ ರಾಜಕಾರಣಕ್ಕೆ ಧುಮುಕಿದ ಕೆ.ಎಚ್ ಮುನಿಯಪ್ಪನವರ ಕಿರು ಪರಿಚಯ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಇಂದು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೆ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾಚ್‌ 07, 1948ರಂದು ಕೋಲಾರ ಜಿಲ್ಲೆಯ ಶಿಢ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್ ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದರು.

ಹಾಗಾಗಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ರಾಜಕೀಯ ಪ್ರವೇಶಿಸಿ 1991 ರಲ್ಲಿ ಕೋಲಾರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆನಂತರ 1996, 1998, 1999, 2004, 2009, 2014ರವರೆಗೂ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರಿಗೆ ಸಲ್ಲುತ್ತದೆ.

2004ರಲ್ಲಿ ಸಾಗಾಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಮೊದಲ ಸೋಲು

ಕೆ.ಎಚ್ ಮುನಿಯಪ್ಪನವರಿಗೆ ಇಡೀ ಕೋಲಾರ ಜಿಲ್ಲೆಯ ಮೇಲೆ ತಮ್ಮದೇ ಹಿಡಿತ ಹೊಂದಿದ್ದಾರೆ. ಆದರೆ, ತಾಲೂಕುಗಳಲ್ಲಿ ಕಾಂಗ್ರೆಸ್ ವಿರುದ್ಧ ಇರುವ ಬೇರೆ ಪಕ್ಷದ ಎಂಎಲ್‌ಎಗಳು ಅಥವಾ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪವು ಅವರ ಮೇಲಿದೆ. ಹಾಗಾಗಿ ಜಿಲ್ಲೆಯ ಕಾಂಗ್ರೆಸ್‌ನಲ್ಲಿ ಮುನಿಯಪ್ಪ ಬಣ ಮತ್ತು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣ ಸಕ್ರಿಯವಾಗಿದೆ. ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್ ಮುನಿಯಪ್ಪನವರು ಸಿಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ಇದನ್ನೂ ಓದಿ: 2023ರ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶದ ಪರಿಣಾಮಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...