Homeಕರ್ನಾಟಕಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು 'ಬೃಹತ್ ಬೆಂಗಳೂರು ಚಲೋ'

ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನವೆಂಬರ್ 26ರಂದು ಸಂಯುಕ್ತ ಹೋರಾಟ-ಕರ್ನಾಟಕ, ಸಂಯುಕ್ತ ಕಿಸಾ ಮೋರ್ಚಾ ಮತ್ತು ಜೆಸಿಟಿಯು ಸಂಘಟನೆಗಳು ಜಂಟಿಯಾಗಿ ‘ಬೃಹತ್ ಬೆಂಗಳೂರು ಚಲೋ’ ಪ್ರತಿಭಟನೆಗೆ ಕರೆ ನೀಡಿವೆ.

ಬೆಂಗಳೂರಿನ ಪ್ರಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಂಘಟನೆ ಮುಖಂಡರು, “ಕೇಂದ್ರ ಸರ್ಕಾರ ರೈತರು, ಕಾರ್ಮಿಕರು ಹಾಗೂ ಇತರೆ ಜನವರ್ಗಗಳ ಹಿತಾಸಕ್ತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ; ಕಂಪನಿಗಳ ಹಿತ ಕಾಯುವುದರಲ್ಲಿ ಮಗ್ನವಾಗಿದೆ. ಅದು ಜಾರಿಗೆ ತರುತ್ತಿರುವ ನೀತಿಗಳ ಪರಿಣಾಮವಾಗಿ ಜನರು ತೀವ್ರ ಸಂಕಷ್ಟಗಳ ಸುಳಿಯಲ್ಲಿ ಸಿಲುಕಿದ್ದಾರೆ. ಈ ಕಾರಣಕ್ಕಾಗಿಯೇ ಜನ ರಾಜ್ಯದಲ್ಲಿ ಬಿಜೆಪಿಯ ಬದಲು ಕಾಂಗ್ರಸ್‌ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ತಂದಿದ್ದ ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನ ವಿರೋಧಿ ನೀತಿಗಳನ್ನು ಬದಲಾಯಿಸುತ್ತೇವೆ, ಜನಹಿತ ರಕ್ತಿಸುತ್ತೇವೆ ಎಂದು ಅಧಿಕಾರಕ್ಕೆ ಬಂದ ಕಾಂಗ್ಲೆಸ್‌ ಸರ್ಕಾರ ಏನು ಮಾಡುತ್ತಿದೆ” ಎಂದು ಆಕ್ರೋಶ ಹೊರಹಾಕಿದರು.

“ಕಾರ್ಮಿಕರ ಸಂಕಷ್ಟ ನಿವಾರಣೆಯ ಕ್ರಮಗಳಿಗೆ ರಾಜ್ಯ ಸರ್ಕಾರ ಕೂಡಲೇ ಮುಂದಾಗಲೇಬೇಕು. ನವೆಂಬರ್‌ 26ರಂದು ಸಂಬಂಧಪಟ್ಟ ಸಚಿವರುಗಳು ಸ್ಪಷ್ಟ ತೀರ್ಮಾನಗಳನ್ನು ಘೋಷಿಸಬೇಕು. ಸಂವಿಧಾನ ದಿನವಾದ ನವೆಂಬರ್‌ 26, ಜನರ ಹಕ್ಕುಗಳ ಕುರಿತು ಖಚಿತ ನಿರ್ಣಯಗಳಾಗುವ ದಿನವಾಗಬೇಕು. ಇದನ್ನು ಸಿರ್ಲಕ್ಷಿಸಿದರೆ ಫ್ರೀಡಂ ಪಾರ್ಕಿನಲ್ಲೇ ತೀವ್ರ ಹೋರಾಟದ ತೀರ್ಮಾನ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

“ಈ ಹೋರಾಟದ ಮೂಲಕ, ರಾಜ್ಯದ ದುಡಿಯುವ ಹಾಗೂ ದಮನಿತರು ಪರಿತಪಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಸರ್ಕಾರದ ಮುಂದಿಡುತ್ತಿದ್ದೇವೆ. ಇವನ್ನು ಬಗೆಹರಿಸಲು ಇರುವ ದಾರಿಗಳ ಕುರಿತೂ ನಮಗೆ ನಿರ್ಧಿಷ್ಟ ಪಸ್ತಾಪಗಳಿವೆ. ಈ ವಿಚಾರಗಳಿಗೆ ಸಾಧ್ಯವಿರುವ ತ್ವರಿತ ಪರಿಹಾರಗಳ ಕುರಿತು ಚರ್ಚಿಸಲು ಕೂಡಲೇ ಸಮಾಲೋಚನಾ ಸಭೆಗಳನ್ನು ಕರೆಯಬೇಕೆಂದು ಮುಖ್ಯಮಂತ್ರಿಗಳಲ್ಲೂ, ಸಂಬಂಧಪಟ್ಟ ಸಚಿವರುಗಳಲ್ಲಿಯೂ ನಾವು ಮನವಿ ಮಾಡಿಕೊಳ್ಳುತ್ತಿದ್ದೇವೆ” ಎಂದರು.

ಪ್ರಮುಖ ಹಕ್ಕೊತ್ತಾಯಗಳು

    • ಬಲವಂತದ ಭೂಸ್ವಾಧೀನಗಳನ್ನು ಕೈಬಿಡಬೇಕು.
    • ಉಳುಮೆ ಮಾಡುತ್ತಿರುವ, ಅರ್ಜಿ ಸಲ್ಲಿಸಿರುವ ಹಾಗೂ ಬೇರೆ ಭೂಮಿ ಇಲ್ಲದ ಬಗರ್‌ ಹುಕುಂ ರೈತರಿಗೆ ‘ಒನ್‌ ಟೈಂ
      ಸೆಟಲ್ಮೆಂಟ್‌’ ಆಧಾರದಲ್ಲಿ ಭೂಮಿ ಮಂಜೂರು ಮಾಡುವ ಗಟ್ಟಿ ತೀರ್ಮಾನ ಸರ್ಕಾರ ಮಾಡಬೇಕು.
    • ಅರಣ್ಯವಾಸಿಗಳನ್ನು ಆತಂತ್ರ ಸ್ಥಿತಿಯಿಂದ ಪಾರು ಮಾಡಲು ಸರ್ಕಾರ ಮುಂದಾಗಬೇಕು. ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಆದಿವಾಸಿಗಳಿಗೆ ಮಾತ್ರವಲ್ಲದೆ. ಎಲ್ಲಾ ಅರಣ್ಯವಾಸಿಗಳಿಗೂ ಭೂಮಿ ಹಕ್ಕು ನೀಡಬೇಕು.
    • ಯಾವುದೇ ಕಾರಣಕ್ಕೂ ಬಡ ರೈತರನ್ನು ಒಕ್ಕಲೆಬ್ಬಿಸಬಾರದು. ಈಗಾಗಲೇ ಭೂಮಿ ಮಂಜೂರು ಮಾಡಿ ಖಾತೆ ಪಾಣಿಯಾಗಿರುವ ಭೂಮಿಗಳ ಖಾತೆಗಳನ್ನು ಯಾವುದೇ ಕಾರಣಕ್ಕೂ ರದ್ದುಪಡಿಸಬಾರದು.
    • ವಸತಿ ನಿವೇಶನಗಳ ಹಂಚಿಕೆಗೆ ಸರ್ಕಾರ ಮೆಗಾ ಯೋಜನೆ ರೂಪಿಸಬೇಕು. ‘ಪ್ರತಿಯೊಬ್ಬರಿಗೂ ಸೂರು’ ಸರ್ಕಾರದ
      ಕಾರ್ಯನೀತಿಯಾಗಬೇಕು.
    • ರೈತರ ಬೆಳೆಗಳಿಗೆ ಬೆಂಬಲ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಖರೀದಿ ಪ್ರಮಾಣವನ್ನು ಹೆಚ್ಚಿಸಬೇಕು.
    • ಪಡಿತರ ವ್ಯವಸ್ಥೆಯನ್ನು ಬಲಪಡಿಸಬೇಕು, ಹಣದ ಹಂಚಿಕೆ ನಿಲ್ಲಬೇಕು. ರೈತರಿಂದ ವಿವಿಧ ಬೆಳೆಗಳನ್ನು ಖರೀದಿಸಿ ಸಮಗ್ರ ಕುಟುಂಬ ಪ್ಯಾಕ್‌ ವಿತರಿಸಬೇಕು.
    • ಕಬ್ಬಿನ ಬೆಲೆಯಲ್ಲಿ ಆಗುತ್ತಿರುವ ಆನ್ಯಾಯ ತಡೆಯಲು ರಾಜ್ಯ ಬೆಲೆ ನಿಗದಿ ನೀತಿಯನ್ನು ರೂಪಿಸಬೇಕು. ಸ್ವಾಮಿನಾಥನ್ ವರದಿ ಜಾರಿ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ಮೈಕೋಫೈನಾನ್ಸ್‌ ಹಾವಳಿಯಿಂದ ಜನಸಾಮಾನ್ಯರಿಗೆ ಮುಕ್ತಿ ದೊರಕಬೇಕು. ಜಪ್ತಿ, ಸಾಮಾಜಿಕ ಆವಮಾನ ಮಾಡುವಂತಹ ಕ್ರಿಯೆಗಳ ಮೇಲೆ ಕಠಿಣ ಕಮಕ್ಕೆಗೊಳ್ಳಬೇಕು. ಮೈಕ್ರೋಫೈನಾನ್ಸ್‌ ಸಂಸ್ಥೆಗಳನ್ನೂ ಆರ್‌ಬಿಐ ನಿಯಮಾವಳಿಗಳಡಿ ತರಬೇಕು.
    • ಸಣ್ಣ ರೈತರು ಮಾಡಿರುವ ಸಾಲಮನ್ನಾ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಕೇರಳ ಮಾದರಿಯಲ್ಲಿ ಋಣಮುಕ್ತ ಕಾಯ್ದೆ ಜಾರಿಗೆ ತರಬೇಕು.
    • 9 ರೈತರಿಗೆ, ಕೃಷಿಕೂಲಿಗಳಿಗೆ ಸರಳವಾಗಿ ಹಾಗೂ ಜಾಮೀನು ರಹಿತವಾಗಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಾಲಸೌಲಭ್ಯ ದೊರಕಿಸುವ ಕ್ರಮಕ್ಕೆ ಸರ್ಕಾರ ಮುಂದಾಗಬೇಕು.
    • ಎಲ್ಲಾ ರೈತರ ಸಾಲ ಮನ್ನಾ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು.
    • ವಿದ್ಯುತ್‌ ಖಾಸಗೀಕರಣವನ್ನು ಕೈಬಿಡಬೇಕು. ಪ್ರೀಪೇಯ್ಡ್‌ ಮೀಟರ್‌ ಅಳವಡಿಕೆ ಕೈಬಿಡಬೇಕು.
    • ವಿದ್ಯುತ್‌ ಸಂಪರ್ಕ ವೆಚ್ಚವನ್ನು ರೈತರ ಮೇಲೆಯೇ ಹೇರುವ ನೀತಿ ರದ್ದಾಗಬೇಕು.
    • ಜನಸಾಮಾನ್ಯರ ವಿದ್ಯುತ್‌ ದರಗಳನ್ನು ತಗ್ಗಿಸಬೇಕು.
    • ಕಾರ್ಮಿಕ ಕೋಡ್‌ ಗಳು; ಕಾರ್ಮಿಕರ ಹಕ್ಕುಗಳಿಗೆ ಸಂಬಂಧಿಸಿದ 26 ಕಾಯ್ದೆಗಳನ್ನು ರದ್ದುಗೊಳಿಸಿ ಕೇಂದ್ರ ಸರ್ಕಾರ ತಂದಿರುವ ಕೋಡ್‌ ಗಳ ರದ್ದುಮಾಡುವ ತೀರ್ಮಾನ ತೆಗೆದುಕೊಳ್ಳಬೇಕು.
    • ಅಸ೦ಂಘಟತ ಅಕಾರ್ಮಿಕರ ಕುಂದುಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರವು ಎಲ್ಲಾ ತಾಲೂಕು, ಜಿಲ್ಲೆ ಮತ್ತು ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು.
    • ಅಸುರಕ್ಷಿತ ಕಾರ್ಮಿಕರಿಗಾಗಿ ಸಾಮಾಜಿಕ ಭದ್ರತಾ ಮಂಡಳಿಯನ್ನು ಸ್ಥಾಪಿಸಬೇಕು.
    • ಶ್ರಮಜೀವಿಗಳನ್ನು ಗುಲಾಮರಂತೆ ನಡೆಸಿಕೊಳ್ಳುವ ಅಮಾನವೀಯ ಪದ್ಧತಿಗಳು ಕೂಡಲೇ ಕೊನೆಗೊಳ್ಳಬೇಕು.
    • ಮಾಜಿ ಜೀತಗಾರರ ಪುನರ್ವಸತಿ ತ್ವರಿತವಾಗಿ ಜಾರಿಯಾಗಬೇಕು, ವಲಸೆ ಕಾರ್ಮಿಕರ ರಕ್ಷಣೆ, ವಲಸೆ ಕಾರ್ಮಿಕರಿಗೆ ರಕ್ಷಣೆ ನೀಡಬೇಕು. ಅವರಿಗೆ ಪಡಿತರ ಆಹಾರ ವ್ಯವಸ್ಥೆಗೆ ಪ್ರವೇಶವಿರಬೇಕು. ಅವರ ವಸತಿ
      ಸ್ಥಳದಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು ಸರ್ಕಾರ ಮುಂದಾಗಬೇಕು.
    • ಕನಿಷ್ಟ ವೇತನ ಪರಿಷ್ಕರಣೆಗಾಗಿ ರಚಿಸಿರುವ ತ್ರಿಪಕ್ಷೀಯ ಸಲಹಾ ಮಂಡಳಿಯ ನಿರ್ಧಾರವನ್ನು ಈ ಕೂಡಲೇ
    • ಜಾರಿಮಾಡಬೇಕು.
    • ಕನಿಷ್ಠ ವೇತನವನ್ನು ಎಲ್ಲ ಕಾರ್ಮಿಕ ಸಂಘಟನೆಗಳಿಗೂ, ಮಾಲೀಕರಿಗೂ ಇಲಾಖೆಗಳಿಗೂ ಮನದಟ್ಟಾಗುವಂತೆ
      ಮುಟ್ಟಿಸಬೇಕು. ಅದನ್ನು ಜಾರಿಗೊಳಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.
    • ಅಂಗನವಾಡಿ, ಬಿಸಿ ಊಟ ಹಾಗೂ ಆಶಾ ಕಾರ್ಯಕರ್ತರಿಗೆ ಗೌರವಧನದ ಬದಲು ಘನತೆಯ ವೇತನ ಜಾರಿಯಾಗಬೇಕು. ಇತರೆ ಕಾರ್ಮಿಕರಂತೆ ಸ್ಕೀಂ ಕಾರ್ಮಿಕರಿಗೂ ಸಾಮಾಜಿಕ ಕಲ್ಯಾಣ ಮಂಡಳಿಯನ್ನು ಸ್ಥಾಪಿಸಬೇಕು.
    • ಎಂಟು ಗಂಟೆ ಕೆಲಸ; ದುಡಿಮೆಯ ಅವಧಿಯನ್ನು 8 ರಿಂದ 12 ಗಂಟೆಗೆ ಏರಿಸುವ ತೀರ್ಮಾನವನ್ನು
      ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡುಪಟ್ಟು ವೇತನ ನೀಡಬೇಕು.
    • ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಉದ್ಯೋಗಗಳನ್ನು ಹಂತಹಂತವಾಗಿ ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ
      ನೀಡಬೇಕು.
    • ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಲು ‘ಉದ್ಯೋಗ ಖಾತ್ರಿ ಆಯೋಗ’ವನ್ನು ರಚಿಸಬೇಕು.
    • ಹಿಂದುಳಿದಿರುವ ಎಲ್ಲ ತಾಲ್ಲೂಕುಗಳಲ್ಲಿ ನರೇಗಾ ಕೆಲಸವನ್ನು 200 ದಿನಗಳಿಗೆ ವಿಸ್ತರಿಸಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ ವಿನಿಯೋಗ, ಸಾಧಕ-ಭಾದಕಗಳ ಕುರಿತು ಸಮಗ್ರ ಚರ್ಚಿಸಲು ಹಾಗೂ ಮೌಲ್ಯಮಾಪನ ಮಾಡಲು ‘ಅವಲೋಕನ ಸಭೆ’ ಕರೆಯಬೇಕು.
    • ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣದ ವಿತರಣೆ, ವಿನಿಯೋಗ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ದೃಷ್ಟಿಯಿಂದ ‘ಏಕ ಗವಾಕ್ಷಿ ಯೋಜನೆ’ ಅನುಷ್ಠಾನಗೊಳಿಸಲು ಸೂಕ್ತ ಕ್ರಮ ವಹಿಸುವುದು. ನಿರ್ವಹಣೆಗಾಗಿ ಮೇಲ್ವಿಚಾರಣಾ ಕೋಶ ರಚಿಸುವುದು.
    • ಖಾಸಗಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್‌ ಶಿಪ್‌ ಅನ್ನು ಮತ್ತು ಹಾಸ್ಟೆಲ್‌ ಸೌಲಭ್ಯವನ್ನು ನಿಲ್ಲಿಸಿರುವ ತೀರ್ಮಾನವನ್ನು ಹಿಂತೆಗೆದುಕೊಳ್ಳಬೇಕು. ಶೋಷಿತ ಹಾಗೂ ಬಡ ಮಕ್ಕಳಿಗೆ ಮೊದಲಿನಂತೆಯೇ ಶೈಕ್ಷಣಿಕ ನೆರವು ಮುಂದುವರೆಯುವಂತಾಗಬೇಕು.
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

    ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

    ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

    ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

    9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

    "ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

    SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

    ‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

    ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

    SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

    ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

    ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

    ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

    ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

    ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

    ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

    ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

    ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...