Homeಮುಖಪುಟಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್ ಸಿಂಗ್ ಅವರನ್ನು ಕಂಬಳ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ನ.25 ಮತ್ತು 26ರಂದು ಬೆಂಗಳೂರಿನಲ್ಲಿ 2 ದಿನಗಳ ಕಂಬಳ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ರಾಜ್ಯ ಸರಕಾರ ಕೂಡ 1 ಕೋಟಿ ಅನುದಾನ ನೀಡಿದೆ. ಆದರೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್‌ ಶರಣ್ ಸಿಂಗ್ ಅವರನ್ನು ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಇದೀಗ ಟೀಕೆಗೆ ಕಾರಣವಾಗಿದೆ.

ಬ್ರಿಜ್‌ ಭೂಷಣ್‌ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪಿಸಿ ದೆಹಲಿಯಲ್ಲಿ ಬೃಹತ್‌ ಪ್ರತಿಭಟನೆ ನಡೆದಿತ್ತು. ಬ್ರಿಜ್ ಭೂಷಣ್ ಅವರು ಅಪ್ರಾಪ್ತೆ ಸೇರಿದಂತೆ 7 ಮಂದಿ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಕುಸ್ತಿಪಟುಗಳು ಆರೋಪಿಸಿದ್ದರು ಮತ್ತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ ಮತ್ತು ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನೆ ನಡೆಸಿದ್ದರು.  ಭಜರಂಗ್‌ ಪೂನಿಯಾ, ವಿನೇಶ್‌ ಫೊಗಟ್‌, ರವಿ ದಹಿಯಾ ಹಾಗೂ ಸಾಕ್ಷಿ ಮಲಿಕ್‌ ಸೇರಿದಂತೆ ಹಲವು ಕುಸ್ತಿಪಟುಗಳು ಜನರಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಬ್ರಿಜ್ ಭೂಷಣ್‌ ಶರಣ್‌ ಸಿಂಗ್‌ ಅವರನ್ನು ಭಾರತೀಯ ಕುಸ್ತಿ ಒಕ್ಕೂಟದಿಂದ ಅಮಾನತು ಮಾಡುವಂತೆ ಆಗ್ರಹಿಸಿದ್ದರು.

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದರು. ಬ್ರಿಜ್‌ಭೂಷಣ್ ಮೇಲೆ ಪೋಕ್ಸೊ ಕಾಯಿದೆಯಲ್ಲಿ ಒಂದು ಹಾಗೂ ಮಹಿಳೆಯರ ಘನತೆಗೆ ಧಕ್ಕೆ ಮಾಡಿರುವ ಆರೋಪದಲ್ಲಿ ಎರಡನೇ ಎಫ್‌ಐಆರ್ ದಾಖಲು ಮಾಡಲಾಗಿದೆ.

ಭಾರತದ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಮಾತ್ರವಲ್ಲದೆ ಕಂಬಳದಲ್ಲಿ ನಟ ದರ್ಶನ್, ಬಿಜೆಪಿಯ ಮಾಜಿ ಶಾಸಕ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಗ್ರಾಹಕರ ಸಹಕಾರ ಒಕ್ಕೂಟದ ಅಧ್ಯಕ್ಷ ವಿಶಾಲ್ ಸಿಂಗ್ ಸನ್ಮಾನ ಸಮಾರಂಭದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ಕಂಬಳ ಸಮಿತಿ ಆಯೋಜಿಸಿರುವ ಬೃಹತ್ ಕಂಬಳ ಕಾರ್ಯಕ್ರಮವು 4 ಹಂತಗಳನ್ನು ಹೊಂದಿದ್ದು, ಎರಡು ದಿನಗಳಲ್ಲಿ ಅನೇಕ ಕಾರ್ಯಕ್ರಮಗಳು ನಡೆಯಲಿದೆ.

ನ.25 ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿರುವ ಮುಖ್ಯ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪ ಮತ್ತು ಡಿವಿ ಸದಾನಂದ ಗೌಡ ಅವರು ಸೇರಿದಂತೆ ಅನೇಕ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಪುತ್ತೂರು ಶಾಸಕ ಅಶೋಕ್ ರೈ, ಸಿದ್ದಿ ಜನಾಂಗದ ಸಂಘಟನೆಯವರು ಬಂದು ಬ್ರಿಜ್ ಭೂಷಣ್ ಅವರನ್ನು ಕಾರ್ಯ್ರಮಕ್ಕೆ ಆಹ್ವಾನಿಸುವಂತೆ ತಿಳಿಸಿದ್ದಾರೆ. ಎಲ್ಲ ಜಾತಿ ಜನಾಂಗದ ಮುಖಂಡರನ್ನು ಕರೆಯಲಾಗುತ್ತಿದೆ. ಸಮುದಾಯದ ಕೋರಿಕೆ ಮೇರೆಗೆ ಬ್ರಿಜ್ ಭೂಷಣ್‌ ಅವರನ್ನು ಆಹ್ವಾನಿಸಲಾಗಿದೆ. ಅವರು ಕಾರ್ಯಕ್ರಮಕ್ಕೆ ಬರುವ ಬಗ್ಗೆ ದೃಢಪಟ್ಟಿಲ್ಲ. ಅವರು ಕಾರ್ಯಕ್ರಮಕ್ಕೆ ಬಂದರೂ ಕಂಬಳ ಹೊರತುಪಡಿಸಿ ಬೇರೆ ವಿಚಾರಗಳ ಕುರಿತು ಮಾತನಾಡಲು ಅನುಮತಿ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಇಬ್ಬರು ಬಲಿ; ಬಂದ್‌ಗೆ ಕರೆಕೊಟ್ಟ ಬುಡಕಟ್ಟು ಸಮುದಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...