Homeಮುಖಪುಟಬ್ರಿಜ್ ಭೂಷಣ್ ಸಿಕ್ಕ ಅವಕಾಶದಲ್ಲಿ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು: ಕೋರ್ಟ್‌ಗೆ ತಿಳಿಸಿದ ದೆಹಲಿ ಪೊಲೀಸರು

ಬ್ರಿಜ್ ಭೂಷಣ್ ಸಿಕ್ಕ ಅವಕಾಶದಲ್ಲಿ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು: ಕೋರ್ಟ್‌ಗೆ ತಿಳಿಸಿದ ದೆಹಲಿ ಪೊಲೀಸರು

- Advertisement -
- Advertisement -

ಭಾರತೀಯ ಕುಸ್ತಿ ಒಕ್ಕೂಟದ ನಿರ್ಗಮನ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸಿಕ್ಕ ಪ್ರತಿ ಅವಕಾಶದಲ್ಲೂ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ದೆಹಲಿ ಪೊಲೀಸರು ಶನಿವಾರ ಸ್ಥಳೀಯ ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇಂಡಿಯಾ ಟುಡೇ ಪ್ರಕಾರ, ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ಪೀಠದ ಮುಂದೆ ಈ ಮಹತ್ವದ ಹೇಳಿಕೆ ನೀಡಿದ್ದು, ಸಿಂಗ್ ಅವರಿಗೆ ಅವರು ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಮಹಿಳಾ ಕುಸ್ತಿಪಟು ನೀಡಿದ ದೂರನ್ನು ಉಲ್ಲೇಖಿಸಿದ ವಕೀಲರು, ತಜಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಂಗ್ ಅವರು  ಮಹಿಳಾ ಕುಸ್ತಿಪಟುವನ್ನು ಕೋಣೆಗೆ ಕರೆದು ಬಲವಂತವಾಗಿ ತಬ್ಬಿಕೊಂಡಿದ್ದರು. ಇದಕ್ಕೆ ಆಕೆ ವಿರೋಧಿಸಿದಾಗ ಕುಸ್ತಿಪಟುವಿಗೆ  ನಾನು ನಿನ್ನ ‘ಅಪ್ಪನಂತೆ’ ಅದಕ್ಕಾಗಿ ಈ ರೀತಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಈ ಘಟನೆ ನೋಡಿದರೆ ಅವರು ಉದ್ದೇಶಪೂರ್ವಕವಾಗಿಯೇ ಮಾಡಿದ್ದಾರೆಂದು ಸ್ಪಷ್ಟವಾಗಿ ತಿಳಿದು ಬರುತ್ತದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಸಂಸದ ಸಿಂಗ್ ವಿರುದ್ಧ ಆರು ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಕನಿಷ್ಠ ಎರಡು ಸಂದರ್ಭಗಳಲ್ಲಿ ಕ್ರೀಡೆಗೆ ಸಂಬಂಧಿಸಿದ ಸಹಾಯ ಮಾಡಲು ಸಿಂಗ್ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ದೂರುದಾರ ಕ್ರೀಡಾಪಟುಗಳು ಲೈಂಗಿಕ ಕಿರುಕುಳದ 15 ಘಟನೆಗಳನ್ನು ಕೂಡ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಜನವರಿಯಲ್ಲಿ ಸಿಂಗ್ ವಿರುದ್ಧ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದ್ದರು. ಆರೋಪಗಳ ತನಿಖೆಗಾಗಿ ರಚಿಸಲಾಗಿದ್ದ ಮೇಲ್ವಿಚಾರಣಾ ಸಮಿತಿಯು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಏಪ್ರಿಲ್‌ನಲ್ಲಿ ಪ್ರತಿಭಟನೆ ಪುನರಾರಂಭಿಸಿದ್ದರು.

ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ನಂತರ ದೆಹಲಿ ಪೊಲೀಸರು ಸಿಂಗ್ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿದ್ದಾರೆ. ಜೂನ್ 15 ರಂದು ಸಿಂಗ್ ವಿರುದ್ಧ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಆಗಸ್ಟ್‌ನಲ್ಲಿ ನಡೆದ ಪ್ರಕರಣದ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಂಗ್ ಮತ್ತು ಅವರ ಅಮಾನತುಗೊಂಡ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಾಕಷ್ಟು ಪುರಾವೆಗಳಿವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಆದರೆ ಲೈಂಗಿಕ ಉದ್ದೇಶವಿಲ್ಲದೆ ಮಹಿಳೆಯನ್ನು ಅಪ್ಪಿಕೊಳ್ಳುವುದು ಅಥವಾ ಸ್ಪರ್ಶಿಸುವುದು ಅಪರಾಧವಲ್ಲ ಎಂದು ಭೂಷಣ್ ನ್ಯಾಯಾಲಯಕ್ಕೆ ತಿಳಿಸಿದ್ದರು. ಪ್ರಕರಣದ  ಕುರಿತು ಕೋರ್ಟ್ ಅಕ್ಟೋಬರ್ 7 ರಂದು ಮುಂದಿನ ವಿಚಾರಣೆ ನಡೆಸಲಿದೆ.

ಇದನ್ನು ಓದಿ: ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...