Homeಮುಖಪುಟಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು, ಪುತ್ರ ಕರಣ್ ಭೂಷಣ್ ಸಿಂಗ್‌ಗೆ ಬಿಜೆಪಿ ಈ ಬಾರಿಯ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಿದೆ.

ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಮಗ. 2019 ರ ಲೋಕಸಭಾ ಚುನಾವಣೆಯಲ್ಲಿ ಬ್ರಿಜ್ ಭೂಷಣ್ ಸಿಂಗ್ ಕೈಸರ್‌ಗಂಜ್‌ನಿಂದ ಸ್ಪರ್ಧಿಸಿ ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿರುವ ಹಿನ್ನೆಲೆ ಬ್ರಿಜ್ ಭೂಷಣ್ ಬದಲು ಬೇರೆ ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂದು ಮಾಧ್ಯಮಗಳು ವರದಿ ಮಾಡಿತ್ತು. ಆದರೆ, ಬಿಜೆಪಿ ಬ್ರಿಜ್ ಭೂಷಣ್ ಅವರ ಮಗನಿಗೆ ಟಿಕೆಟ್ ನೀಡಿದೆ.

ಬ್ರಿಜ್ ಭೂಷಣ್ ಸಿಂಗ್ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿದ್ದಾಗ ಸುಮಾರು 6 ಮಂದಿ ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಪ್ರಕರಣ ಪ್ರಸ್ತುತ ನ್ಯಾಯಾಲಯದಲ್ಲಿದೆ.

ತನ್ನ ಮೇಲಿನ ಆರೋಪದ ಕುರಿತು ಹೆಚ್ಚಿನ ತನಿಖೆ ನಡೆಸುವಂತೆ ಕೋರಿ ಬ್ರಿಜ್ ಭೂಷಣ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿಯ ನ್ಯಾಯಾಲಯ ಇತ್ತೀಚೆಗೆ ತಿರಸ್ಕರಿಸಿತ್ತು.

ಉತ್ತರ ಪ್ರದೇಶದ ಮತ್ತೊಂದು ಲೋಕಸಭಾ ಕ್ಷೇತ್ರ ರಾಯ್ ಬರೇಲಿಯಿಂದ ದಿನೇಶ್ ಪ್ರತಾಪ್ ಸಿಂಗ್ ಅನ್ನು ಬಿಜೆಪಿ ಕಣಕ್ಕಿಳಿಸಿದೆ.

ಇದನ್ನೂ ಓದಿ : ಕಾಂಗ್ರೆಸ್ ವಿರುದ್ಧ ಪ್ರತಿಭಟಿಸಿ ಟ್ರೋಲ್ ಆದ ಗಾಲ್ಗೋಟಿಯಾಸ್ ವಿವಿ ವಿದ್ಯಾರ್ಥಿಗಳು: ಕ್ಷಮಿಸುವಂತೆ ಮನವಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಇಸ್ರೇಲ್‌ಗೆ ಶಸ್ತ್ರಾಸ್ತ್ರ ಪೂರೈಸುವ ಹಡಗಿಗೆ ಬಂದರಿನಲ್ಲಿ ನಿಲುಗಡೆ ನಿಷೇಧಿಸಿದ ಸ್ಪೇನ್

0
ಇಸ್ರೇಲ್‌ಗೆ ಶಸ್ತ್ರಾಸ್ತ್ರಗಳನ್ನು ಸಾಗಿಸುವ ಹಡಗನ್ನು ಸ್ಪೇನ್ ಬಂದರಿನಲ್ಲಿ ನಿಲ್ಲಿಸಲು ಅನುಮತಿ ನಿರಾಕರಿಸಲಾಗಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಜೋಸ್ ಮ್ಯಾನುಯೆಲ್ ಅಲ್ಬರೆಸ್ ಗುರುವಾರ ಹೇಳಿದ್ದಾರೆ. "ಇದೇ ಮೊದಲ ಬಾರಿಗೆ ನಾವು ಇಸ್ರೇಲ್‌ಗೆ ತೆರಳುತ್ತಿದ್ದ ಹಡಗಿಗೆ...