Homeಮುಖಪುಟಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಮೋದಿ ಕಾರ್ಯಕ್ರಮಕ್ಕೆ 6 ಸಾವಿರ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ: DDPU ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಮಾರು 70 ಕಾಲೇಜುಗಳಿಂದ 6,000 ಹೆಚ್ಚು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪ್ರಧಾನಿ ಮೋದಿಯವರ ಕಾರ್ಯಕ್ರಮಕ್ಕೆ ಕರೆ ತರಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಒಂದು ವೇಳೆ ತಪ್ಪಿದ್ದಲ್ಲಿ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆ ಸಹ ನೀಡಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದರು ಕಾಂಗ್ರೆಸ್ ಈ ಕೆಲಸಕ್ಕೆ ಶಿಕ್ಷಣ ಸಚಿವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದೆ.

“ದಿನಾಂಕ 11-11.2022 ರಂದು ಮಾನ್ಯ ಪ್ರಧಾನ ಮಂತ್ರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಯುಕ್ತ, ದಿನಾಂಕ:02-11-2022 ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು (ಪ್ರತಿ ಲಗತ್ತಿಸಿದೆ) ನೇಮಕ ಮಾಡಿರುವ ಬಸ್ ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ” ಎಂದು ಸುತ್ತೊಲೆಯಲ್ಲಿ ತಿಳಿಸಲಾಗಿದೆ.

ಸುತ್ತೋಲೆಯೊಂದಿಗೆ ಪ್ರತಿ ಕಾಲೇಜಿನಿಂದ 100, 150, 500 ರಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕೆಂದು ಟಾರ್ಗೆಟ್ ಸಹ ನೀಡಲಾಗಿದೆ. ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸುಮಾರು 70 ಕಾಲೇಜುಗಳಿಂದ 6,000 ಹೆಚ್ಚು ವಿದ್ಯಾರ್ಥಿಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಕರೆ ತರಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ ಯಾವ ಕಾರ್ಯಕ್ರಮ? ಅದರ ಉದ್ದೇಶವೇನು ಎಂಬುದನ್ನು ಸುತ್ತೋಲೆಯಲ್ಲಿ ತಿಳಿಸಿಲ್ಲ.

ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ನ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್‌ರವರು, “ಜನ ಬೇಕು ಸ್ವಾಮಿ ಜನಾ.. ಪ್ರಧಾನಿ ಮೋದಿಯವರ ಭಾಷಣಕ್ಕೆ ಜನ‌ ಬೇಕು ಸ್ವಾಮಿ ಜನಾ..ಮಾನ್ಯ ನರೇಂದ್ರ ಮೋದಿಯವರ ಜನಪ್ರಿಯತೆ ಈ ಮಟ್ಟಕ್ಕೆ ಕುಸಿದಿದೆ. ಸರ್ಕಾರದ ಆದೇಶದ ಮೂಲಕ ಮೋದಿ ಅವರ ಕಾರ್ಯಕ್ರಮಕ್ಕೆ ಜನರನ್ನು ಲೋಡುಗಟ್ಟಲೆ ಸಾಗಿಸಲು‌ ಆದೇಶಿಸಲಾಗಿದೆ. ಶಿಕ್ಷಣ ಸಚಿವರೇ ನಿಮ್ಮ ಇಲಾಖೆ ಇಂಥಾದ್ದೊಂದು ಆದೇಶ ಹೊರಡಿಸಬಹುದೇ? ನಿಮಗೆ Shame ಅಲ್ಲವೇ?” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ; ಮುರುಘಾ ಶರಣರಿಗೆ ತಕ್ಕ ಶಿಕ್ಷೆಯಾಗಲಿ: ಬಿ.ಎಸ್‌.ಯಡಿಯೂರಪ್ಪ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...