Homeಕರ್ನಾಟಕಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳನ್ನು ಸುಟ್ಟ ಜಾಗದಿಂದ ಒಂದು ಹಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸೋಣ: ದೇವನೂರು ಮಹಾದೇವ ಕರೆ

ಮನಿಷಾಳ ತಾಯಿಯ ಕೊನೆಯ ಆಸೆ, ಆಕೆಯ ಕೆನ್ನೆಗೆ ಹರಿಶಿನ ಹಚ್ಚಿ ಅಂತ್ಯಸಂಸ್ಕಾರ ಮಾಡುವುದಾಗಿತ್ತು. ಆದರೆ ಅದು ನಡೆಯಲಿಲ್ಲ. ನಾವು ಆಕೆಯ ಪ್ರತಿಮೆ ನಿರ್ಮಿಸಿ, ಅದಕ್ಕೆ ಹರಿಶಿನ ಹಚ್ಚಿದರೆ ಆಕೆಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗುತ್ತದೆ.

- Advertisement -
- Advertisement -

ಹತ್ರಾಸ್‌ನ ದಲಿತ ಯುವತಿಯ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಇಂದು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು. ಈ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿ, ಹೋರಾಟಗಾರ ದೇವನೂರು ಮಹಾದೇವ ಮಾತನಾಡಿ, “ಮನಿಷಾಳನ್ನು ಸುಟ್ಟ ಸ್ಥಳದಿಂದ ಒಂದಿಡಿ ಮಣ್ಣು ತಂದು ಸ್ಮಾರಕ ನಿರ್ಮಿಸಬೇಕೆಂದು ಕೇಳಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ಇಂದಿನ ಪ್ರತಿಭಟನೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವ ಅವರು ಮಾಡಿದ ಭಾಷಣದ ಪೂರ್ಣಪಾಠ ಈ ಕೆಳಗಿನಂತಿದೆ.

ಇದನ್ನೂ ಓದಿ: ’ಹತ್ರಾಸ್‌‌ನಲ್ಲಿ ಪಿತೂರಿ ಮಾಡಲಾಗುತ್ತಿದೆ’ – 19 ಆರೋಪಗಳ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌‌

“ನೆನಸಿಕೊಳ್ಳಲೂ ಬೀಭತ್ಸ- ಉತ್ತರ ಪ್ರದೇಶದ ಹಾಥರಸ್‌ನ ಮನೀಷಾಳ ಸಾವು. ಇದು, ಸಾವಲ್ಲ. ಸಾಕ್ಷ್ಯ ನಾಶಕ್ಕಾಗಿ ಉತ್ತರಪ್ರದೇಶ ಸರ್ಕಾರದ ಒಳಿಚ್ಛೆಗೆ ತಕ್ಕಂತೆ ಅಲ್ಲಿನ ಪೊಲೀಸ್ ವ್ಯವಸ್ಥೆ ನಡೆಸಿದ ಕೊಲೆ ಇದು, ಸಾವಲ್ಲ.

ನೋಡಿ, ಮನೀಷಾಳು ಅತ್ಯಾಚಾರಕ್ಕೆ ಒಳಗಾಗಿ ಅವಳ ಮನಸ್ಸು ದೇಹ ಜರ್ಝರಿತವಾಗಿ ಅರೆಪ್ರಜ್ಞಾವಸ್ಥೆಯಲ್ಲಿದ್ದವಳನ್ನು ಪೊಲೀಸ್ ಸ್ಟೇಷನ್‌ಗೆ ಕರೆತಂದರೆ ಅಲ್ಲಿ ಏಳೆಂಟು ಗಂಟೆ ಕಾಲ ಹೊರಗೆ ಕೂರಿಸುತ್ತಾರೆ. ಕಾನೂನಿನಂತೆ ಅವಳನ್ನು ರೇಫ್ ಕ್ರೈಸಿಸ್ ಸೆಂಟರ್‌ಗೆ ಕರೆದುಕೊಂಡು ಹೋಗುವುದಿಲ್ಲ. ಹಾಗೇ ಕಾನೂನಿನಂತೆ 24 ಗಂಟೆ ಒಳಗೆ ವೀರ್‍ಯಾಣು (Sperm) ಪತ್ತೆ ಪರೀಕ್ಷೆಯನ್ನೂ ಮಾಡಿಸುವುದಿಲ್ಲ. ಬದಲಾಗಿ ವಿಳಂಬಿಸಿ, ಇದ್ದಿರಬಹುದಾದ ವೀರ್‍ಯಾಣು ಸಾಕ್ಷ್ಯವು ನಾಶವಾದ ಮೇಲೆ ವೀರ್‍ಯಾಣು ಪತ್ತೆ ಪರೀಕ್ಷೆ ಮಾಡಿಸುತ್ತಾರೆ. ಮನೀಷಾ ಸಾಯುವ ಮೊದಲು (victim’s dying declaration) ತನ್ನ ಮೇಲೆ ಅತ್ಯಾಚಾರವಾಯ್ತು ಎಂದು ಹೇಳಿದ್ದರೂ ಕಾನೂನು ರೀತ್ಯ ಇದೇ ಪ್ರಬಲ ಸಾಕ್ಷಿಯಾಗಿದ್ದರೂ ಇದನ್ನು ಪರಿಗಣಿಸದ ಪೊಲೀಸ್ ವರಿಷ್ಠಾಧಿಕಾರಿ ’ಅತ್ಯಾಚಾರವಾಗಿಲ್ಲ, ಯಾಕೆಂದರೆ ಪರೀಕ್ಷೆಯಲ್ಲಿ ವೀರ್‍ಯಾಣು ಪತ್ತೆ ಆಗಿಲ್ಲ’ ಅನ್ನುತ್ತಾನೆ. ಜೊತೆಗೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಓಡಾಡಿಸುತ್ತಾರೆ. ಕುಟುಂಬಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಧಮಕಿ ಹಾಕುತ್ತಾನೆ. ಇದನ್ನೆಲ್ಲಾ ನೋಡಿದರೆ ಮನೀಷಾಳು ಬದುಕಿಬಿಟ್ಟರೆ ಅವಳೇ ಸಾಕ್ಷಿಯಾಗಿಬಿಡುತ್ತಾಳೆ ಎಂಬ ಕಾರಣಕ್ಕೆ ಅವಳು ಸಾಯಲಿ ಅಂತ ಏನೇನೆಲ್ಲಾ ಮಾಡಬೇಕೊ ಅದನ್ನೆಲ್ಲಾ ಉತ್ತರ ಪ್ರದೇಶದ ಪೊಲೀಸರು ಹಾಗೂ ಆಡಳಿತ ನಿರ್ವಹಣೆ ಮಾಡಿದೆ ಅನ್ನಿಸಿಬಿಡುತ್ತೆ. ಹೌದು, ಮನೀಷಾಳ ಸಾವು ಸರ್ಕಾರಿ ಕೊಲೆ.

ಇದನ್ನೂ ಓದಿ: ಹತ್ರಾಸ್ ಸಂತ್ರಸ್ತ ಕುಟುಂಬದ ಭೇಟಿ: ಭೀಮ್ ಆರ್ಮಿ ಮುಖ್ಯಸ್ಥ ಆಜಾದ್‌ ಮೇಲೆ FIR

ಮತ್ತೂ ಅಮಾನುಷ ಅಂದರೆ, ಹೀಗೆ ಮನೀಷಾಳನ್ನು ಸಾಯಿಸಿದ ಮೇಲೂ ಅವಳ ದೇಹದ ಸಾಕ್ಷ್ಯ ಮರು ಮರಣೊತ್ತರ ಪರೀಕ್ಷೆಗೆ ಸಿಗದಂತೆ ಮಾಡಲು ಪೊಲೀಸರು ಮನೀಷಾಳ ದೇಹವನ್ನು ರಾತ್ರಿ 1:30 ಕ್ಕೆ ಅವಳ ಹುಟ್ಟೂರಿಗೆ ತಂದು, ಹೆತ್ತವರಿಗೆ ಅಂತ್ಯ ಸಂಸ್ಕಾರಕ್ಕೆ ದೇಹವನ್ನು ಒಪ್ಪಿಸದೆ, ಅಷ್ಟೇ ಅಲ್ಲ ತಮ್ಮ ಮಗಳ ಮುಖವನ್ನು ನೋಡಲೂ ಹೆತ್ತವರಿಗೆ ಅವಕಾಶ ನೀಡದೆ, ’ಮಗಳ ಮುಖಕ್ಕೆ ಪದ್ಧತಿಯಂತೆ ಅರಶಿನ ಹಚ್ಚಲಾದರೂ ಅವಕಾಶ ಕೊಡಿ’ ಎಂದು ತಾಯಿ ಬೇಡಿದರೂ ಲೆಕ್ಕಿಸದೆ ಪೊಲೀಸರು ರಾತ್ರಿ 2:30 ಕ್ಕೆ ಮನೀಷಾಳ ದೇಹವನ್ನು ಸುಟ್ಟು ಬೂದಿ ಮಾಡುತ್ತಾರೆ. ಹೀಗಿರುವಾಗ ನ್ಯಾಯ ಸಿಗಬಹುದೆ? ನ್ಯಾಯ ಸಿಕ್ಕು ಮನೀಷಾಳ ಹೆತ್ತವರಿಗೆ ಸಾಂತ್ವನ ಸಿಗಬಹುದೆ? ಹೇಳುವುದು ಕಷ್ಟ, ಕಷ್ಟ. ‘ಬಿಜೆಪಿಸೆ ಬೇಟಿ ಬಚಾವೊ’ ಮಾತು ಈಗ ಚಾಲ್ತಿಗೆ ಬರುತ್ತಿದೆ.

ಇದನ್ನೂ ಓದಿ: ಹತ್ರಾಸ್‌: ಸಂತ್ರಸ್ಥೆಯ ಗುಪ್ತಾಂಗದಲ್ಲಿ ಆಳವಾದ ಗಾಯವಿದೆ; ಫೋರೆನ್ಸಿಕ್ ವರದಿ

ಆಯ್ತು, ನಮ್ಮ ನ್ಯಾಯ ವಿತರಣಾ ಪದ್ಧತಿಯನ್ನು ನೋಡಿದರೆ, ಆತಂಕ ಆಗುತ್ತದೆ. ಇತ್ತೀಚಿನ ಬಾಬ್ರಿ ಮಸೀದಿ ತೀರ್ಪನ್ನು ನೋಡಿದರೆ, ಮಸೀದಿ ಧ್ವಂಸದ ಸಂದರ್ಭದಲ್ಲಿ ಆರೋಪಿಗಳು ಧ್ವಂಸದ ಸ್ಥಳದಲ್ಲೇ ಇದ್ದರೂ ಅವರು ಖುಲಾಸೆಯಾಗುತ್ತಾರೆ. ಇನ್ನೊಂದು ಕಡೆ ಎಲ್ಗಾರ್ ಪರಿಷತ್ ಸಭೆಯಲ್ಲಿ ಯಾವುದೇ ಹಿಂಸೆ ನಡೆಯದಿದ್ದರೂ ಜೊತೆಗೆ ಆನಂದ್ ತೇಲ್ತುಂಬ್ಡೆ ಮತ್ತಿತರರು ಆ ಸಭೆಯಲ್ಲಿ ಇಲ್ಲದಿದ್ದರೂ ಅವರನ್ನು ಆರೋಪಿಗಳನ್ನಾಗಿಸಿ ವಿಚಾರಣೆ ಮಾಡದೆ ಬಂಧಿಸಿಡಲಾಗಿದೆ. ಇಂದಿನ ಕಾನೂನು ವ್ಯವಸ್ಥೆ, ನ್ಯಾಯಾಂಗ ವಿತರಣೆ ವ್ಯವಸ್ಥೆ ಹೆಚ್ಚೂಕಮ್ಮಿ ಪುರಾತನ ಕಾಲದ ಅನ್ಯಾಯದ ’ಮನುಧರ್ಮ ಶಾಸ್ತ್ರ’ದ ಜಾತಿ ಅಂತಸ್ಥಿಗೆ ತಕ್ಕಂತೆ ಶಿಕ್ಷೆ ಎಂಬಂತಿದೆ. ಭಾರತ ಯಾವ ಕಡೆಗೆ ಚಲಿಸುತ್ತಿದೆ? ಹಿಂದಕ್ಕೊ? ಮುಂದಕ್ಕೊ? ಇಂದು ನಮ್ಮ ಕಾನೂನು ವ್ಯವಸ್ಥೆ ಹಾಗೂ ನಮ್ಮ ನ್ಯಾಯ ವಿತರಣಾ ವ್ಯವಸ್ಥೆಗಳು- ನ್ಯಾಯದ ಮುಂದೆ ಅಪರಾಧಿಗಳಾಗಿ ಕಟಕಟೆಯಲ್ಲಿ ನಿಂತಿವೆ. ಭಾರತ ದಿಕ್ಕು ತಪ್ಪುತ್ತಿದೆ.

ಇದನ್ನೂ ಓದಿ: ಹತ್ರಾಸ್ ಪ್ರಕರಣದ ಆರೋಪಿಗಳು ಈಗ ‘ಬಿಂಬಿಸಿರುವಷ್ಟು ತಪ್ಪಿತಸ್ಥರಲ್ಲ’: ಬಿಜೆಪಿ ಮುಖಂಡ

ಕೊನೆಯದಾಗಿ ನನ್ನದೊಂದು ಮನವಿ: ಕಂದ ಮನೀಷಾಳನ್ನು ಎಲ್ಲಿ ಸುಟ್ಟರೋ ಅಲ್ಲಿಂದ ಅಥವಾ ಅವಳು ನಡೆದಾಡಿದ ಭೂಮಿಯಿಂದ ಒಂದು ಹಿಡಿಮಣ್ಣನ್ನು ತಂದು ಒಂದು ಸ್ಮಾರಕ ಸ್ಥಳವನ್ನಾಗಿಸಿ ಅಲ್ಲೊಂದು ಅವಳ ಪ್ರತಿಮೆ ರೂಪಿಸಿ ಅವಳ ಹೆತ್ತ ತಾಯಿಯ ಈಡೇರದ ಕೊನೆಯಾಸೆಯನ್ನು, ಮನೀಷಾಳ ಪ್ರತಿಮೆಯ ಕೆನ್ನೆಗಳಿಗೆ ನಾವೆಲ್ಲರೂ ಅರಿಶಿನ ಹಚ್ಚುವಂತಾದರೆ ನಾವೂನು ಮನೀಷಾಳಿಗೆ ಮರಣೋತ್ತರ ಗೌರವ ಸಲ್ಲಿಸಿದಂತಾಗಬಹುದೆ? ಇದರಿಂದ ಮನೀಷಾಳ ಹೆತ್ತವರಿಗೆ ಹಾಗೂ ತಾಯಿ ಭಾರತಮಾತೆಗೆ ಕಿಂಚಿತ್ತಾದರೂ ಸಮಾಧಾನವಾಗಬಹುದೆ? ಈ ಪ್ರಶ್ನೆಯನ್ನು ಭಾರತದ ಪ್ರಜ್ಞೆಯ ಮುಂದಿಡುತ್ತಿರುವೆ.


ಇದನ್ನೂ ಓದಿ: ಹತ್ರಾಸ್ ಜಿಲ್ಲಾಧಿಕಾರಿ ಮೇಲೆ ಕ್ರಮ ಏಕಿಲ್ಲ?: ಮಾಯಾವತಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...