Homeಮುಖಪುಟನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ನಮ್ಮನ್ನು ಕೊಲ್ಲುವುದಕ್ಕಾಗಿ ಮರಳಿ ಕರೆತಂದಿರಾ? ಕೇಂದ್ರ ಸರ್ಕಾರ, BJP ವಿರುದ್ಧ ಕಾಶ್ಮೀರಿ ಪಂಡಿತರ ಪ್ರತಿಭಟನೆ

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ.

- Advertisement -
- Advertisement -

ಸರ್ಕಾರಿ ಉದ್ಯೋಗಿಯಾಗಿದ್ದ ರಾಹುಲ್ ಭಟ್ ಎಂಬ ಕಾಶ್ಮೀರಿ ಪಂಡಿತನ ಕೊಲೆ ಖಂಡಿಸಿ ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಶ್ರೀನಗರದ ವಿಮಾನ ನಿಲ್ದಾಣದ ಕಡೆ ಮೆರವಣಿಗೆ ಹೊರಟಿದ್ದ ಕಾಶ್ಮೀರಿ ಪಂಡಿತರನ್ನು ಚದುರಿಸಲು ಪೊಲೀಸರು ಅಶ್ರವಾಯು ಸಿಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಹಲವಾರು ನಗರಗಳಲ್ಲಿ ಸಾರಿಗೆ ಶಿಬಿರಗಳಲ್ಲಿ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ರಸ್ತೆ ತಡೆ ನಡೆಸಿದ್ದಾರೆ. ಹಲವೆಡೆ ಮೊಂಬತ್ತಿ ಬೆಳಗಿ ಪ್ರತಿಭಟನೆ ದಾಖಲಿಸಲಾಗಿದೆ. ನಮಗೆ ರಕ್ಷಣೆ ಕೊಡಲು ವಿಫಲವಾಗಿವೆ ಎಂದು ಆರೋಪಿಸಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಜನರಲ್ ಮನೋಜ್ ಸಿನ್ಹಾ ವಿರುದ್ಧ ಘೋಷಣೆ ಕೂಗಿರುವ ಪ್ರತಿಭಟನಾಕಾರರು ನಮ್ಮನ್ನು ಕೊಲ್ಲುವುದಕ್ಕಾಗಿ ಕಣಿವೆಗೆ ವಾಪಸ್ ಕರೆತಂದಿರಾ ಎಂದು ಪ್ರಶ್ನಿಸಿದ್ದಾರೆ.

ಕಾಶ್ಮೀರಿ ಪಂಡಿತನ ಕೊಲೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಲ್ಲಿ ನಮಗೆ ಯಾವುದೇ ರಕ್ಷಣೆ ಇಲ್ಲ. ಇದನ್ನು ಪುನರ್ವಸತಿ ಎಂದು ಕರೆಯಲಾಗುತ್ತದೆಯೇ? ನಮ್ಮನ್ನು ಕೊಲ್ಲುವುದಕ್ಕಾಗಿ ಇಲ್ಲಿಗೆ ಕರೆತರಲಾಗಿದೆಯೇ? ಎಂಬ ರಂಜನ್ ಝುತ್ಸಿ ಎಂಬ ಪ್ರತಿಭಟನಾಕಾರರ ಹೇಳಿಕೆಯನ್ನು ಎನ್‌ಡಿಟಿವ ಉಲ್ಲೇಖಿಸಿದೆ.

ನಾವಿಲ್ಲಿ ಕೆಲಸ ಮಾಡಲು ಬಂದಿದ್ದೇವೆ. ಅದನ್ನು ಬಿಟ್ಟು ಬೇರೆನನ್ನೂ ಮಾಡುತ್ತಿಲ್ಲ. ಆದರೂ ನಮ್ಮನ್ನು ಏಕೆ ಕೊಲ್ಲಲಾಗುತ್ತಿದೆ? ನಾವು ಮಾಡಿದ ಅಪರಾಧವಾದರೂ ಏನು? ಇಲ್ಲಿನ ಆಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಮತ್ತೊಬ್ಬ ಪ್ರತಿಭಟನಾಕಾರರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಧಿಕಾರಿಗಳು ಭರವಸೆ ನೀಡುತ್ತಾರೆ. ಆದರೆ ಮತ್ತೊಂದು ಕಡೆ ನಮ್ಮ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿಗಳು ನಡೆಯುತ್ತಿವೆ. ಪರಿಸ್ಥಿತಿಯ ಗಂಭೀರವಾಗಿದೆ. ಸುರಕ್ಷಿತವಾದ ತಹಸೀಲ್ದಾರ್ ಕಚೇರಿಯಲ್ಲಿಯೇ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತಿದೆ ಅಂದರೆ ಇಲ್ಲಿನ ವ್ಯವಸ್ಥೆ ಕುಸಿದಿದೆ, ಭದ್ರತೆ ಕುಸಿದಿದೆ, ಸುರಕ್ಷತೆ ಕುಸಿದಿದೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.

ಬುಡ್ಗಾಮ್ ಜಿಲ್ಲೆಯ ಶೇಕಾಪೊರದಲ್ಲಿ ಪ್ರತಿಭಟನಾನಿರತ ಕಾಶ್ಮೀರಿ ಪಂಡಿತರಿಗೆ ಬೆಂಬಲ ವ್ಯಕ್ತಪಡಿಸಿ ಸ್ಥಳೀಯ ಮುಸ್ಲಿಮರು ಜೊತೆಗೂಡಿದ್ದಾರೆ. ನೀರು ಮತ್ತಿತರ ಆಹಾರ ಒದಗಿಸಿರುವ ಮುಸ್ಲಿಮರು, ಕಾಶ್ಮೀರಿ ಪಂಡಿತರಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮುಸ್ಲಿಂ ಸಹೋದರರು ನಮ್ಮ ಪರವಾಗಿ ನಿಂತಿದ್ದಾರೆ. ನಮ್ಮ ಸೇವೆ ಮಾಡುತ್ತಿದ್ದಾರೆ. ನಮಗೆ ಹೆಗಲು ಕೊಟ್ಟ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸಂಜಯ್ ಎಂಬ ಪ್ರತಿಭಟನಾಕಾರರು ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದರುವ ಜಾವೇದ್ ಇಕ್ಬಾಲ್ ಮಾತನಾಡಿ ”ಕಾಶ್ಮೀರದಲ್ಲಿರುವ ಎಲ್ಲ ಮುಸ್ಲಿಮರು ಮುಂದೆ ಬಂದು ಪ್ರತಿಭಟಿಸಲು ನಾನು ಮನವಿ ಮಾಡುತ್ತೇನೆ. ಕಾಶ್ಮೀರಿ ಪಂಡಿತರನ್ನು ರಕ್ಷಿಸುವಲ್ಲಿ ಆಡಳಿತವು ಸಂಪೂರ್ಣವಾಗಿ ವಿಫಲವಾಗಿದೆ, ತಹಶೀಲ್ದಾರ್ ಕಚೇರಿಯಲ್ಲಿಯೇ ಒಬ್ಬ ವ್ಯಕ್ತಿಯನ್ನು ಕೊಂದರೆ, ಕಾಶ್ಮೀರಿ ಪಂಡಿತರು ಎಲ್ಲಿಗೆ ಹೋಗಬೇಕು” ಎಂದು ಪ್ರಶ್ನಿಸಿದ್ದಾರೆ.

ಗುರುವಾರ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚಾದೂರ ಗ್ರಾಮದ ತಹಸೀಲ್ದಾರ್ ಕಚೇರಿಯಲ್ಲಿ ಕಾಶ್ಮೀರಿ ಪಂಡಿತ ರಾಹುಲ್ ಭಟ್ ಎಂಬುವವರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇಬ್ಬರು ಭಯೋತ್ಪಾದಕರು ಸರ್ಕಾರಿ ಕಚೇರಿಗೆ ನುಗ್ಗಿ ಅಲ್ಲಿನ ಉದ್ಯೋಗಿ ರಾಹುಲ್ ಭಟ್ ಅವರ ಹಣೆಗೆ ಗುಂಡಿಟ್ಟು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಲಸೆ ಕಾರ್ಮಿಕರು ಮತ್ತು ಸ್ಥಳೀಯ ಅಲ್ಪಸಂಖ್ಯಾತರ ಮೇಲೆ ಕಳೆದ ಎಂಟು ತಿಂಗಳಿನಿಂದ ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉದ್ದೇಶಿತ ದಾಳಿಗೆ ಇದು ಮತ್ತೊಂದು ಸೇರ್ಪಡೆಯಾಗಿದೆ. ಅಕ್ಟೋಬರ್‌ ತಿಂಗಳಿನಿಂದ ಹೆಚ್ಚಾಗಿ ಹೊರಗಿನಿಂದ ಉದ್ಯೋಗ ಅರಸಿ ಬಂದ ವಲಸಿಗರು ಮತ್ತು ಸ್ಥಳೀಯ ಕಾಶ್ಮೀರಿ ಪಂಡಿತರ ಮೇಲೆ ದಾಳಿಗಳಾಗುತ್ತಿವೆ ಎಂದು ವರದಿಯಾಗಿದೆ. ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಓಮರ್ ಅಬ್ದುಲ್ಲಾ ಕೊಲೆಯನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: ಜಮ್ಮು ಕಾಶ್ಮೀರದ ತಹಶೀಲ್ದಾರ್ ಕಚೇರಿಯಲ್ಲಿ ಭಯೋತ್ಪಾದಕರಿಂದ ಕಾಶ್ಮೀರಿ ಪಂಡಿತನ ಹತ್ಯೆ: ವರದಿ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸ್ಥಳೀಯರನ್ನು ರಕ್ಷಿಸುವಲ್ಲಿ ವಿಫಲವಾಗುತ್ತಿದೆ ಎಂದು ವಿರೋಧ ಪಕ್ಷವಾದ ಕಾಂಗ್ರೆಸ್ ಆರೋಪಿಸಿದೆ. ಕಾಶ್ಮೀರ ಪಂಡಿತರ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ, ಪಂಡಿತರು ಬೀದಿಯಲ್ಲಿ ಕೊಲೆಯಾಗುತ್ತಿರುವಾಗ ಏನು ಮಾಡುತ್ತಿದೆ ಎಂದು ಪ್ರಶ್ನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...