Homeಮುಖಪುಟಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

- Advertisement -
- Advertisement -

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳನ್ನು ಪೂರೈಸುವಂತಿರಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಂದಿರಿಗೆ ಹೆರಿಗೆ ರಜೆ ನೀಡಬೇಕು ಎಂಬ ನಿರ್ಬಂಧದ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಆರ್. ಮಹದೇವನ್ ಅವರನ್ನೊಳಗೊಂಡ ಪೀಠವು ಈ ಸೂಚನೆ ನೀಡಿದೆ.

ಸಾಮಾಜಿಕ ಭದ್ರತಾ ಸಂಹಿತೆ, 2020ರ ಸೆಕ್ಷನ್ 60(4) ಅಡಿಯಲ್ಲಿ ಮಗು 3 ತಿಂಗಳಿಗಿಂತ ಕಡಿಮೆ ವಯಸ್ಸಿನದ್ದಾಗಿದ್ದರೆ ಮಾತ್ರ ದತ್ತು ಪಡೆದ ತಾಯಿಗೆ 12 ವಾರಗಳ ಹೆರಿಗೆ ರಜೆ ನೀಡಬೇಕು ಎಂಬ ನಿಬಂಧನೆಯು ಅಸಂವಿಧಾನಿಕ ಎಂದು ಪೀಠ ತೀರ್ಪು ನೀಡಿದೆ. ಈ ನಿಬಂಧನೆಯನ್ನು ತಿದ್ದುಪಡಿ ಮಾಡಿ, ಕಾನೂನುಬದ್ಧವಾಗಿ ಮಗುವನ್ನು ದತ್ತು ಪಡೆದ ಮಹಿಳೆಯು ಮಗುವಿನ ವಯಸ್ಸಿನ ಮಿತಿಯಿಲ್ಲದೆ 12 ವಾರಗಳ ಹೆರಿಗೆ ರಜೆಗೆ ಅರ್ಹರಾಗಿರುತ್ತಾರೆ ಎಂದು ಘೋಷಿಸಿದೆ.

“ಪಿತೃತ್ವ ರಜೆಯ ಅಗತ್ಯತೆಯ ಕುರಿತು ಹೇಳುವುದಾದರೆ, ಪಿತೃತ್ವ ರಜೆಯನ್ನು ಸಾಮಾಜಿಕ ಭದ್ರತಾ ಸೌಲಭ್ಯವೆಂದು ಗುರುತಿಸುವ ಕಾನೂನು ರೂಪಸಿಲು ನಾವು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಅಂತಹ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ ಅಗತ್ಯತೆಗಳಿಗೆ ಸ್ಪಂದಿಸುವ ರೀತಿಯಲ್ಲಿ ನಿರ್ಧರಿಸಲ್ಪಡಬೇಕು ಎಂದು” ಎಂದು ನ್ಯಾಯಮೂರ್ತಿ ಪಾರ್ದೀವಾಲಾ ಅವರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಪಿತೃತ್ವ ರಜೆ ಎಂದರೆ ಮಗುವಿನ ಜನನ ಅಥವಾ ದತ್ತು ಸ್ವೀಕಾರದ ನಂತರ ತಂದೆಗೆ ನೀಡಲಾಗುವ ವೇತನ ಸಹಿತ ಅಥವಾ ವೇತನ ರಹಿತ ರಜೆಯಾಗಿದೆ. ಇದು ಮಗುವಿನ ಆರಂಭಿಕ ಆರೈಕೆಯಲ್ಲಿ ಪಾಲ್ಗೊಳ್ಳಲು ಮತ್ತು ಹೆರಿಗೆಯ ನಂತರದ ಹಂತದಲ್ಲಿ ತಾಯಿಗೆ ಬೆಂಬಲ ನೀಡಲು ಸಹಕಾರಿಯಾಗುತ್ತದೆ. ಪೋಷಣೆ ಎಂಬುದು ಇಬ್ಬರ ಹಂಚಿಕೆಯ ಜವಾಬ್ದಾರಿಯಾಗಿದ್ದು, ಮಗುವಿನ ಆರಂಭಿಕ ಜೀವನದಲ್ಲಿ ಪೋಷಕರಿಬ್ಬರ ಉಪಸ್ಥಿತಿಯು ಮಗುವಿನ ಉತ್ತಮ ಬೆಳವಣಿಗೆಗೆ ಪೂರಕ ಎಂಬ ಮಾನ್ಯತೆಯ ಮೇಲೆ ಈ ಪರಿಕಲ್ಪನೆಯು ಆಧಾರಿತವಾಗಿದೆ. ಇದು ಕೇವಲ ಮಹಿಳೆಯರಿಗೆ ಸೀಮಿತವಾಗಿರುವ ಸಾಂಪ್ರದಾಯಿಕ ಪೋಷಣೆಯ ಜವಾಬ್ದಾರಿಯನ್ನು ಪ್ರಶ್ನಿಸುವ ಮೂಲಕ ಲಿಂಗ ಸಮಾನತೆಯನ್ನು ಉತ್ತೇಜಿಸುತ್ತದೆ. ಜೊತೆಗೆ, ಮನೆಗೆಲಸದ ಜವಾಬ್ದಾರಿಗಳನ್ನು ಸಮಾನವಾಗಿ ಹಂಚಿಕೊಳ್ಳಲು ಮತ್ತು ಮಹಿಳೆಯರು ನಿರಂತರವಾಗಿ ಉದ್ಯೋಗದಲ್ಲಿ ಮುಂದುವರಿಯಲು ಸಹಾಯ ಮಾಡುತ್ತದೆ.

ಭಾರತದಲ್ಲಿ ಇನ್ನೂ ಪಿತೃತ್ವ ರಜೆಯನ್ನು ಕಾನೂನುಬದ್ಧವಾಗಿ ಗುರುತಿಸಲಾಗಿಲ್ಲ, ಆದರೆ ಮಹಿಳೆಯರಿಗೆ 26 ವಾರಗಳವರೆಗೆ ವೇತನ ಸಹಿತ ಹೆರಿಗೆ ರಜೆಗೆ ಅವಕಾಶವಿದೆ. ಇಬ್ಬರಿಗಿಂತ ಕಡಿಮೆ ಮಕ್ಕಳನ್ನು ಹೊಂದಿರುವ ಮಹಿಳೆಯರಿಗೆ 26 ವಾರಗಳ ವೇತನ ಸಹಿತ ಹೆರಿಗೆ ರಜೆ ಮತ್ತು ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ 12 ವಾರಗಳ ರಜೆಯನ್ನು ಕಾನೂನು ಒದಗಿಸುತ್ತದೆ. ಇದರಲ್ಲಿ ಹೆರಿಗೆಗೆ ಮುನ್ನ 8 ವಾರಗಳವರೆಗೆ ರಜೆ ಪಡೆಯಲು ಅವಕಾಶವಿರುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...