Homeಮುಖಪುಟನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

ನೇತಾಜಿಯವರ ಅವಶೇಷಗಳನ್ನು ಭಾರತಕ್ಕೆ ತನ್ನಿ: ಬೋಸ್ ಮಗಳ ಆಗ್ರಹ

- Advertisement -
- Advertisement -

ಇಂದು ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ. ಲಕ್ಷಾಂತರ ಜನ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದಿದ್ದಾರೆ. ಅದವರಲ್ಲಿ ಸುಭಾಷ್ ಚಂದ್ರಬೋಸ್‌ರವರು ಅಗ್ರಗಣ್ಯರು. ನನಗೆ ರಕ್ತ ಕೊಡಿ ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ ಎಂದು ಯುವಜನರಿಗೆ ಕರೆನೀಡಿದ್ದ ಆ ಮಹಾನ್ ಚೇತನವನ್ನು ಭಾರತೀಯರ್ಯಾರು ಮರೆಯುವುದಿಲ್ಲ. ಇದೀಗ ಅವರ ಅವಶೇಷಗಳನ್ನು ಭಾರತಕ್ಕೆ ತರುವಂತೆ ಅವರ ಮಗಳು ಅನಿತಾ ಬೋಸ್ ಫಾಫ್ ಆಗ್ರಹಿಸಿದ್ದಾರೆ.

ನೇತಾಜಿಯವರು 1945ರ ಆಗಸ್ಟ್ 18 ರಂದು ತೈಪೆಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ನಿಧನರಾದರು ಎಂದು ವ್ಯಾಪಕವಾಗಿ ನಂಬಲಾಗಿದೆ. ಆದರೆ ಅವರ ಸಾವಿನ ಬಗ್ಗೆ ಇಂದಿಗೂ ಚರ್ಚೆಗಳು ನಡೆಯುತ್ತಲೆ ಇವೆ. ಭಾರತೀಯ ಸರ್ಕಾರದ ಎರಡು ತನಿಖಾ ಆಯೋಗಗಳು ಅವರು ಸಾವನಪ್ಪಿದ್ದಾರೆ ಎಂದು ವರದಿ ನೀಡಿದರೆ ಅವುಗಳಿಗೆ ವಿರುದ್ಧವಾಗಿ ಎಂ. ಕೆ. ಮುಖರ್ಜಿ ನೇತೃತ್ವದ ಮೂರನೇ ಆಯೋಗವು ಬೋಸ್ ಜೀವಂತವಾಗಿದ್ದಾರೆಂಬ ಸಂಶಯಾಸ್ಪದ ಹೇಳಿಕೆಯನ್ನು ನೀಡಿತು. ಹಾಗಾಗಿ ನೇತಾಜಿಯವರ ಸಾವು ನಿಗೂಢವಾಗಿಯೇ ಉಳಿದಿದೆ.

ಈ ಕುರಿತು ಹೇಳಿಕೆ ನೀಡಿದ ನೇತಾಜಿಯವರ ಪುತ್ರಿ ಅನಿತಾ ಫಾಫ್‌ “ನನ್ನ ತಂದೆಯ ಅವಶೇಷಗಳನ್ನು ಭಾರತಕ್ಕೆ ತರುವ ಸಮಯ ಬಂದಿದೆ. ಜಪಾನ್‌ನ ರೆಂಕೋಜಿ ದೇವಸ್ಥಾನದಲ್ಲಿ ಅವಶೇಷಗಳನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸುವುದು ಅವರ ಸಾವಿನ ಕುರಿತು ಅನುಮಾನಿಸುವವರಿಗೆ ಉತ್ತರವಾಗಲಿದೆ. ಇದಕ್ಕೆ ಜಪಾನ್ ಸರ್ಕಾರ ಒಪ್ಪಿಗೆ ನೀಡಿದೆ” ಎಂದು ತಿಳಿಸಿದ್ದಾರೆ.

ಆಸ್ಟ್ರೀಯಾದಲ್ಲಿ ಜನಿಸಿರುವ, ಸದ್ಯ ಜರ್ಮನಿಯಲ್ಲಿ ಅರ್ಥಶಾಸ್ತ್ರಜ್ಞೆಯಾಗಿರುವ ನೇತಾಜಿಯವರ ಏಕೈಕ ಪುತ್ರಿಯಾದ ಅನಿತಾ ಬೋಸ್, “ನೇತಾಜಿಯವರ ಜೀವನದಲ್ಲಿ ಸ್ವಾತಂತ್ರ್ಯಕ್ಕಿಂತ ಮುಖ್ಯವಾದದ್ದು ಬೇರಾವುದು ಇರಲಿಲ್ಲ. ಅವರಿಗೆ ಬ್ರಿಟೀಷ್ ಆಳ್ವಿಕೆಯಿಂದ ಮುಕ್ತವಾದ ಭಾರತದಲ್ಲಿ ಬದುಕುವ ಹಂಬಲವಿತ್ತು. ಸ್ವಾತಂತ್ರ್ಯದ ಸಂಭ್ರಮವನ್ನು ಅನುಭವಿಸಲು ಅವರಿಲ್ಲದ ಈ ಸಂದರ್ಭದಲ್ಲಿ ಅವರ ಅವಶೇಷಗಳಾದರೂ ಭಾರತೀಯ ನೆಲಕ್ಕೆ ಮರಳುವ ಸಮಯ ಇದಾಗಿದೆ” ಎಂದಿದ್ದಾರೆ.

ಆಧುನಿಕ ತಂತ್ರಜ್ಞಾನ ಸತ್ಯವನ್ನು ತಿಳಿಸಲು ಶಸಕ್ತವಾಗಿದೆ. ಅವಶೇಷಗಳಿಂದ ಡಿಎನ್‌ಎ ತೆಗೆಯುವುದು ಸಾಧ್ಯವಿದೆ. ರೆಂಕೋಜಿ ದೇವಸ್ಥಾನದ ಅರ್ಚಕರು ಮತ್ತು ಜಪಾನ್ ಸರ್ಕಾರ ಡಿಎನ್‌ಎ ಪರೀಕ್ಷೆಗೆ ಒಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹಳತು ವಿವೇಕ; ನೆಹರೂ ಆತ್ಮಕತೆಯಿಂದ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...