Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್!

ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್!

- Advertisement -
- Advertisement -

ಕೊರೊನಾ ಆಂಟಿವೈರಲ್ ಔಷಧಿಗಳ ವ್ಯಾಪಕ ಬಳಕೆಗೆ ಯುಕೆ ಸರ್ಕಾರ ಅನುಮೋದನೆ ನೀಡಿದೆ. ಫಿಜರ್ ಮತ್ತು ಬಯೋಎಂಡೆಕ್ ಈ ಲಸಿಕೆಯನ್ನು ತಯಾರಿಸಿದ್ದು, ಈ ಮೂಲಕ ಕೊರೊನಾ ಲಸಿಕೆಯ ಬಳಕೆಯನ್ನು ಅನುಮೋದಿಸಿದ ವಿಶ್ವದ ಮೊದಲ ರಾಷ್ಟ್ರವಾಗಿ ಬ್ರಿಟನ್ ಹೊರಹೊಮ್ಮಿದೆ.

ಕೊರೊನಾದಿಂದ 95% ರಕ್ಷಣೆ ನೀಡುವ ಈ ಲಸಿಕೆಯು ಸುರಕ್ಷಿತವಾಗಿದೆ ಎಂದು ಬ್ರಿಟನ್ ಔಷಧಿಗಳ ಮತ್ತು ಆರೋಗ್ಯಸೇವಾ ಉತ್ಪನ್ನಗಳ ನಿಯಂತ್ರಣಾ ಏಜನ್ಸಿ(MHRA)ಯು ಲಸಿಕೆಯ ವ್ಯಾಪಕ ಬಳಕೆಗೆ ಅನುಮೋದನೆ ನೀಡಿದೆ. ಮುಂದಿನ ವಾರದಿಂದ ಹೆಚ್ಚಿನ ಆದ್ಯತೆಯ ಗುಂಪುಗಳ ಜನರಿಗೆ ಲಸಿಕೆಯು ಲಭ್ಯವಿರುತ್ತದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಇಲಾಖೆ

4 ಕೋಟಿ ಡೋಸ್‌‌ಗಳನ್ನು ಬ್ರಿಟನ್ ಈಗಾಗಲೆ ಆದೇಶಿಸಿದ್ದು, ಅದನ್ನು ಎರಡು ಡೋಸ್‌ಗಳಂತೆ ಒಬ್ಬರಿಗೆ ನೀಡಲಾಗುತ್ತದೆ. ಸಾಮಾನ್ಯವಾಗಿ ಲಸಿಕೆ ಉತ್ಪಾದಿಸಲು ಹಾಗೂ ಸಂಶೋಧನೆ ಮತ್ತು ಬಳಕೆಯ ಹಂತವನ್ನು ತಲುಪಲು 10 ವರ್ಷಗಳವರೆಗೆ ತೆಗೆದುಕೊಳ್ಳುತ್ತದೆ. ಆದರೆ ಫಿಜರ್ ಮತ್ತು ಬಯೋಎಂಡೆಕ್ ಅಭಿವೃದ್ಧಿಪಡಿಸಿದ ಈ ಕೊರೊನಾ ವೈರಸ್ ಲಸಿಕೆ ಕೇವಲ ಹತ್ತು ತಿಂಗಳಿನಲ್ಲಿ ತಯಾರಾಗಿದೆ. ವಿಶ್ವದಲ್ಲೇ ಅತ್ಯಂತ ಕಡಿಮೆ ಅವಧಿಯಲ್ಲಿ ತಯಾರಾದ ಲಸಿಕೆ ಇದಾಗಿದೆ.

ಇಂಗ್ಲೆಂಡ್‍ನಲ್ಲಿ ಈ ಲಸಿಕೆ ಬಳಕೆಗೆ ದೊರೆತ ಅನುಮತಿ ಕೊರೊನಾ ವಿರುದ್ಧದ ಹೋರಾಟದಲ್ಲಿ ಒಂದು ಐತಿಹಾಸಿಕ ಕ್ಷಣ ಎಂದು ಫಿಜರ್ ಹೇಳಿದ್ದು, ತಕ್ಷಣವೆ ಇಂಗ್ಲೆಂಡ್‍ಗೆ ಲಸಿಕೆಗಳ ಪೂರೈಕೆ ಪ್ರಾರಂಭಿಸುವುದಾಗಿ ಹೇಳಿದೆ.

ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...