Homeರಾಷ್ಟ್ರೀಯಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

ಮರುಪರಿಶೀಲಿಸುವವರೆಗೆ ಬ್ರಿಟೀಷ್‌ ಯುಗದ ‘ದೇಶದ್ರೋಹ’ ಕಾನೂನಿಗೆ ತಡೆ: ಸುಪ್ರೀಂಕೋರ್ಟ್ ಐತಿಹಾಸಿಕ ಆದೇಶ; ಕೆಲವು ಪಾಯಿಂಟ್ಸ್‌‌‌

- Advertisement -
- Advertisement -

ಸರ್ಕಾರವು ತನ್ನ ಪರಿಶೀಲನೆಯನ್ನು ಪೂರ್ಣಗೊಳಿಸುವವರೆಗೆ ದೇಶದ್ರೋಹದ ಕಾನೂನನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಮಹತ್ವದ ಆದೇಶದಲ್ಲಿ ಹೇಳಿದ್ದು, ಈಗಾಗಲೇ ದೇಶದ್ರೋಹದ ಆರೋಪ ಎದುರಿಸುತ್ತಿರುವವರು ಜಾಮೀನಿಗಾಗಿ ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ತಿಳಿಸಿದೆ.

ವಿವಾದಾತ್ಮಕ ದೇಶದ್ರೋಹ ಕಾನೂನನ್ನು ಬ್ರಿಟೀಷ್‌‌‌‌ ವಸಾಹತುಶಾಹಿ ಯುಗದ ಆಳ್ವಿಕೆಯ ಅಡಿಯಲ್ಲಿ ಸ್ವಾತಂತ್ಯ್ರ ಹೋರಾಟಗಾರರನ್ನು ಹಣಿಯಲು ಬೇಕಾಗಿ ರಚಿಸಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ದೇಶದ್ರೋಹ ಕಾನೂನಿನ ಸಾಂವಿಧಾನಿಕ ಮಾನ್ಯತೆಯನ್ನು ಪರಿಶೀಲಿಸುವಂತೆ ಮತ್ತು ಅದನ್ನು ರದ್ದುಗೊಳಿಸುವಂತೆ ಸಲ್ಲಿಸಲಾಗಿರುವ ಹಲವು ಅರ್ಜಿಗಳನ್ನು ಸುಪ್ರೀಂಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇಂದು ನೀಡಿದ ಮಹತ್ವದ ಆದೇಶದ ಕುರಿತು ಕೆಲವು ಅಂಶಗಳು ಇಲ್ಲಿದೆ:

  • ಸರ್ಕಾರವು ದೇಶದ್ರೋಹ ಕಾನೂನನ್ನು ಮರುಪರಿಶೀಲಿಸುತ್ತಿರುವಾಗ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ತಡೆಹಿಡಿಯಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಾರಾಷ್ಟ್ರದ ಹನುಮಾನ್ ಚಾಲೀಸಾ ಪಠಣದ ಮೇಲೆ ದೇಶದ್ರೋಹ ಕಾನೂನನ್ನು ಅನ್ವಯಿಸಿದ ಪ್ರಕರಣಗಳಲ್ಲಿ ಅದರ ದುರುಪಯೋಗವನ್ನು ಆಪಾದಿಸಿ ಕಾನೂನನ್ನು ಪ್ರಶ್ನಿಸಿದ ಅರ್ಜಿಗಳನ್ನು ಉಲ್ಲೇಖಿಸಿ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

ಇದನ್ನೂ ಓದಿ: ದೇಶದ್ರೋಹ ಕಾನೂನಿಗೆ ತಡೆ; ಬಂಧಿತರು ಜಾಮೀನು ಪಡೆಯಬಹುದು: ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

  • “ಮುಂದಿನ ಮರು ಪರಿಶೀಲನೆ ಮುಗಿಯುವವರೆಗೆ ದೇಶದ್ರೋಹ ಕಾನೂನನ್ನು ಬಳಸದಿರುವುದು ಸೂಕ್ತವಾಗಿರುತ್ತದೆ. ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳು 124 ಎ (ದೇಶದ್ರೋಹದ ಕಾನೂನು) ಅಡಿಯಲ್ಲಿ ಯಾವುದೇ ಎಫ್‌ಐಆರ್ ಅನ್ನು ನೋಂದಾಯಿಸುವುದನ್ನು ನಿಲ್ಲಿಸುತ್ತವೆ ಎಂದು ನಾವು ಭಾವಿಸುತ್ತೇವೆ ಮತ್ತು ನಿರೀಕ್ಷಿಸುತ್ತೇವೆ’’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಹೇಳಿದ್ದಾರೆ.
  • ಯಾವುದೇ ಹೊಸ ಪ್ರಕರಣಗಳು ದಾಖಲಾದರೆ, ಆರೋಪಿಗಳು ನ್ಯಾಯಾಲಯವನ್ನು ಸಂಪರ್ಕಿಸಬಹುದು ಎಂದು ಸುಪ್ರಿಂಕೋರ್ಟ್‌ ಹೇಳಿದೆ.
  • “ಕಾನೂನಿನ ದುರುಪಯೋಗವನ್ನು ತಡೆಗಟ್ಟಲು ರಾಜ್ಯಗಳಿಗೆ ನಿರ್ದೇಶನಗಳನ್ನು ರವಾನಿಸಲು ಒಕ್ಕೂಟ ಸರ್ಕಾರದ ಅಡಿಯಲ್ಲಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.
  • ದೇಶದ್ರೋಹ ಕಾನೂನನ್ನು ಪರಿಶೀಲಿಸುವ ನಿರ್ಧಾರವನ್ನು ಪ್ರಕಟಿಸಿದ್ದ ಒಕ್ಕೂಟ ಸರ್ಕಾರವು ಕಾನೂನನ್ನು ತಡೆಹಿಡಿಯುವುದರ ಪರವಾಗಿಲ್ಲ ಎಂದು ವಾದಿಸಿತ್ತು. ಸದ್ಯಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತ್ರ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕು ಎಂದು ಶಿಫಾರಸು ಮಾಡಿತ್ತು.
  • “ಮುಂಬರುವ ಎಫ್‌ಐಆರ್‌ಗಳಲ್ಲಿ ದೇಶದ್ರೋಹದ ಆರೋಪವನ್ನು ದಾಖಲಿಸಬೇಕೇ ಎಂಬುದರ ಕುರಿತು ಸದ್ಯಕ್ಕೆ ಸೂಪರಿಂಟೆಂಡೆಂಟ್ ಅಥವಾ ಅದಕ್ಕಿಂತ ಹೆಚ್ಚಿನ ಹಂತದ ಪೊಲೀಸ್ ಅಧಿಕಾರಿ ನಿರ್ಧರಿಸಬೇಕು ಎಂದು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಪ್ರಸ್ತಾಪಿಸಿದೆ” ಎಂದು ಒಕ್ಕೂಟ ಸರ್ಕಾರದ ಪರ ವಕೀಲ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ನಲ್ಲಿ ‘ದೇಶದ್ರೋಹ’ ಕಾನೂನನ್ನು ಸಮರ್ಥಿಸಿಕೊಂಡ ಮೋದಿ ನೇತೃತ್ವದ ಬಿಜೆಪಿ ಸರ್ಕಾರ

  • ಬಾಕಿ ಇರುವ ಪ್ರಕರಣಗಳು ಈಗಾಗಲೇ ನ್ಯಾಯಾಲಯದ ಮುಂದೆ ಇವೆ ಎಂದು ಸರ್ಕಾರ ಹೇಳಿದೆ.
  • “ಭಾರತದಾದ್ಯಂತ ದಾಖಲಾದ ದೇಶದ್ರೋಹ ಪ್ರಕರಣಗಳಲ್ಲಿನ ಅಪರಾಧಗಳ ಗಂಭೀರತೆ ನಮಗೆ ತಿಳಿದಿಲ್ಲ. ಈ ಪ್ರಕರಣಗಳಲ್ಲಿ ಇತರ ಭಯೋತ್ಪಾದನೆ ಆರೋಪಗಳೂ ಇರಬಹುದು. ಬಾಕಿ ಇರುವ ಪ್ರಕರಣಗಳು ಪೊಲೀಸ್ ಅಥವಾ ಸರ್ಕಾರದ ಮುಂದೆ ಇರುವುದಲ್ಲ, ಅವು ನ್ಯಾಯಾಲಯದ ಮುಂದೆ ಇವೆ. ಹಾಗಾಗಿ, ನ್ಯಾಯಾಲಯಗಳ ವಿವೇಕವನ್ನು ನಾವು ಊಹಿಸಬಾರದು” ಎಂದು ಮೆಹ್ತಾ ಹೇಳಿದ್ದಾರೆ.
  • ಆದರೆ ಅರ್ಜಿದಾರರು ಸರ್ಕಾರದ ನಿಲುವನ್ನು ವಿರೋಧಿಸಿ, ವಸಾಹತುಶಾಹಿ ಯುಗದ ಕಾನೂನನ್ನು ಸರ್ಕಾರವು ಪರಿಶೀಲಿಸುವವರೆಗೆ ದೇಶದ್ರೋಹ ಕಾನೂನನ್ನು ತಡೆಹಿಡಿಯುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...