Homeಕರ್ನಾಟಕಜಮ್ಮು-ಕಾಶ್ಮೀರ ಬಗ್ಗೆ ಭಾರತದ ನಡೆಯನ್ನು ಟೀಕಿಸಿದ್ದಕ್ಕೆ ಬ್ರಿಟೀಷ್‌ ಸಂಸದೆಗೆ ವೀಸಾ ನಿರಾಕಣೆ..

ಜಮ್ಮು-ಕಾಶ್ಮೀರ ಬಗ್ಗೆ ಭಾರತದ ನಡೆಯನ್ನು ಟೀಕಿಸಿದ್ದಕ್ಕೆ ಬ್ರಿಟೀಷ್‌ ಸಂಸದೆಗೆ ವೀಸಾ ನಿರಾಕಣೆ..

- Advertisement -
- Advertisement -

ಕಾಶ್ಮೀರದ ಬಗ್ಗೆ ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸಿದ ಬ್ರಿಟಿಷ್ ಸಂಸದೆಗೆ ಭಾರತಕ್ಕೆ ಪ್ರವೇಶ ನಿರಾಕರಿಸಲಾಗಿದೆ. “ದೆಹಲಿ ವಿಮಾನ ನಿಲ್ದಾಣದಲ್ಲಿ ಅವರ ಇ-ವೀಸಾವನ್ನು ತಿರಸ್ಕರಿಸಲಾಗಿದೆ ಎಂದು ತಿಳಿಸಿದ ನಂತರ ತಾನು ವಾಪಾಸು ಹೋಗಲು ಕಾಯುತ್ತಿದ್ದೇನೆ.” ಅಲ್ಲದೇ “ನನ್ನನು ಅಪರಾಧಿಗಳ ತರ ನಡೆಸಿಕೊಳ್ಳಾಯಿತು” ಎಂದು ಬ್ರಿಟಿಷ್ ಪಾರ್ಲಿಮೆಂಟ್ ಸದಸ್ಯೆ ಡೆಬ್ಬಿ ಅಬ್ರಹಾಮ್ಸ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಬೆಳಿಗ್ಗೆ 8.50 ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ಅಬ್ರಹಾಮ್ಸ್‌ ಗೆ ಕಳೆದ ಅಕ್ಟೋಬರ್‌ನಲ್ಲಿ ನೀಡಲಾಗಿದ್ದ 2020 ರ ಅಕ್ಟೋಬರ್ ವರೆಗೆ ಮಾನ್ಯವಾಗಿದ್ದ ಇ-ವೀಸಾವನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.

“ಎಲ್ಲರ ಜೊತೆಗೆ, ನಾನು ಕೂಡಾ ನನ್ನ ಇ-ವೀಸಾ ಸೇರಿದಂತೆ ನನ್ನ ದಾಖಲೆಗಳನ್ನು ಹಾಜರುಪಡಿಸಿದೆ, ನನ್ನ ಛಾಯಾಚಿತ್ರವನ್ನು ತೆಗೆದುಕೊಂಡ ನಂತರ ಅಧಿಕಾರಿಯು ಅವನ ಪರದೆಯನ್ನು ನೋಡಿ ತಲೆ ಅಲ್ಲಾಡಿಸಲು ಪ್ರಾರಂಭಿಸಿದನು. ನಂತರ ನನ್ನ ವೀಸಾವನ್ನು ತಿರಸ್ಕರಿಸಿದ್ದಾರೆಂದು ಹೇಳಿ ಪಾಸ್ಪೋರ್ಟ್ ಸಮೇತ ಸುಮಾರು 10 ನಿಮಿಷಗಳ ಕಾಲ ಕಣ್ಮರೆಯಾದನು. ಹಿಂತಿರುಗಿ ಬಂದು ‘ನನ್ನೊಂದಿಗೆ ಬನ್ನಿ’ ಎಂದು ತುಂಬಾ ಕೆಟ್ಟದಾಗಿ ಮತ್ತು ಅಸಭ್ಯವಾಗಿ  ಎಂದು ಕೂಗಿಕೊಂಡನು” ಎಂದು ಸಂಸದೆ ಹೇಳಿಕೊಂಡಿದ್ದಾರೆ.

“ನನ್ನೊಂದಿಗೆ ಹಾಗೆ ಮಾತನಾಡಬಾರದೆಂದು ಅವನಿಗೆ ಹೇಳಿದೆ ಮತ್ತು ನಂತರ ನನ್ನನ್ನು ʼಡಿಪೋರ್ಟಿ ಸೆಲ್ʼ ಎಂದು ಗುರುತಿಸಲಾದಲ್ಲಿಗೆ ಕರೆದೊಯ್ದು, ನನ್ನನ್ನು ಕುಳಿತುಕೊಳ್ಳಲು ಆದೇಶಿಸಿದ ಆದರೆ ನಾನು ನಿರಾಕರಿಸಿದೆ. ಇವರು ಏನು ಮಾಡುತ್ತಾರೆ ಅಥವಾ ನನ್ನನ್ನು ಬೇರೆಲ್ಲಿಗೆ ಕರೆದುಕೊಂಡು ಹೋಗುತ್ತಾರೆ ಎಂದು ನನಗೆ ತಿಳಿದಿಲ್ಲ ಆದ್ದರಿಂದ ಇದನ್ನು ಜನರು ನೋಡಲಿ ಎಂದು ಬಯಸುತ್ತೇನೆ” ಎಂದಿದ್ದಾರೆ.

ಅಲ್ಲದೆ “ಭಾರತ ಸರ್ಕಾರ ತನ್ನ ಮನಸ್ಸು ಬದಲಿಸದೆ ಇರುವುದಾದರೆ ನಾನು ವಾಪಾಸು ಹೋಗುವ ದಾರಿ ಕಾಯುತ್ತಿದ್ದೇನೆ. ನನ್ನನ್ನು ಅಪರಾಧಿಗಳ ತರ ನಡೆಸಿಕೊಳ್ಳಲಾಗುತ್ತಿದೆ. ನಾನು ನನ್ನ ಕುಟುಂಬ ಮತ್ತು ಸ್ನೆಹಿತರನ್ನು ಸೇರಲು ಅವಕಾಶ ನೀಡುತ್ತಾರೆ ಎಂದು ಭಾವಿಸುತ್ತೇನೆ” ಎಂದಿದ್ದಾರೆ.

ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ 370 ನೇ ವಿಧಿಯನ್ನು ಕೊನೆಗೊಳಿಸಿದ ದಿನ ಟ್ವಿಟ್ಟರಿನಲ್ಲಿ ಅಬ್ರಹಾಮ್ಸ್ ಸ್ಪಷ್ಟವಾಗಿ ಬರೆದ ಪತ್ರವೊಂದನ್ನು ಪೋಸ್ಟ್ ಮಾಡಿದ್ದರು. ಅದರಲ್ಲಿ 370 ನೇ ವಿಧಿಯ ಕುರಿತು ಯುಕೆಯಲ್ಲಿರುವ ಭಾರತೀಯ ರಾಯಭಾರಿಗೆ ತೀವ್ರ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದರು.

ಅಲ್ಲದೇ ಅವರ ಫೇಸ್‌ಬುಕ್‌, ಟ್ವಿಟ್ಟರ್‌ನಲ್ಲಿ ​​ಕಾಶ್ಮೀರದ ಬಗ್ಗೆ ಭಾರತದ ನಿರ್ಧಾರವನ್ನು ಟೀಕಿಸುವ ಹಲವಾರು ಪೋಸ್ಟ್‌ಗಳನ್ನು ಹೊಂದಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...