Homeಕರ್ನಾಟಕಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

- Advertisement -
- Advertisement -

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

ನಗರದ ಜೀವನಭೀಮಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 13 ರಂದು ಈ ದಾರುಣ ಘಟನೆ ನಡೆದಿದ್ದು, ಮೂರು ದಿನಗಳ ಕಾಲ ಸಾವು-ಬದುಕಿನ ನಡುವೆ ಹೋರಾಡಿದ ನಾಲ್ಕನೇ ವರ್ಷದ ಕಾನೂನು ವಿದ್ಯಾರ್ಥಿನಿ ಅಮೃತಾ ಸದ್ಯ ಕೊನೆಯುಸಿರೆಳೆದಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಮುಖ ಆರೋಪಿ ಧನುಷ್ ಹಾಗೂ ಆತನ ಸಹೋದರ ಸೂರ್ಯ ಎಂಬಿಬ್ಬರನ್ನು ಬಂಧಿಸಿದ್ದಾರೆ.

ವಂಚನೆ ತಿಳಿದು ದೂರಾಗಿದ್ದ ಯುವತಿ

ಮೃತ ಅಮೃತಾ ಹಾಗೂ ಧನುಷ್ ನಡುವೆ ಕುಟುಂಬದ ಪರಿಚಯದ ಮೂಲಕ ಸ್ನೇಹ ಬೆಳೆದು, ಅದು ಪ್ರೇಮಕ್ಕೆ ತಿರುಗಿತ್ತು. ಆದರೆ, ಧನುಷ್ ತನಗೆ ಮೊದಲೇ ಮದುವೆಯಾಗಿ ವಿಚ್ಛೇದನವಾಗಿದೆ ಎಂಬ ರಹಸ್ಯವನ್ನು ಹಾಗೂ ತನಗೊಂದು ಮಗುವಿದೆ ಎಂಬ ಸತ್ಯವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದ. ಈ ವಂಚನೆಯ ವಿಷಯ ತಿಳಿದ ತಕ್ಷಣ ಅಮೃತಾ ಧನುಷ್ ಜೊತೆಗಿನ ಸಂಬಂಧವನ್ನು ಸಂಪೂರ್ಣವಾಗಿ ಕೊನೆಗೊಳಿಸಿದ್ದರು.

ಸಂಬಂಧ ಮುರಿದುಕೊಂಡ ಅಮೃತಾಳ ನಿರ್ಧಾರದಿಂದ ಆಕ್ರೋಶಗೊಂಡಿದ್ದ ಧನುಷ್ ಸಹೋದರ ಸೂರ್ಯ, ಆಕೆಗೆ ನಿರಂತರವಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಜುಲೈ 13 ರಂದು ಅಮೃತಾಳ ಮನೆಯ ಬಳಿಯೇ ಬಂದ ಸೂರ್ಯ, ಆಕೆಯೊಂದಿಗೆ ತೀವ್ರ ಜಗಳ ತೆಗೆದಿದ್ದಾನೆ. ವಾಗ್ದಾಳಿ ವಿಕೋಪಕ್ಕೆ ತಿರುಗಿದಾಗ, ಸೂರ್ಯ ತಾನು ತಂದಿದ್ದ ಚಾಕುವಿನಿಂದ ಅಮೃತಾಳ ಎದೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಇರಿದು ಸ್ಥಳದಿಂದ ಪರಾರಿಯಾಗಿದ್ದ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಮೃತಾಳನ್ನು ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ಗಾಯಗೊಂಡಿದ್ದ ಆಕೆ ಚಿಕಿತ್ಸೆ ಫಲಕಾರಿಯಾಗದೆ ಮೂರು ದಿನಗಳ ನಂತರ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿ.ವಿ. ರಾಮನ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಜೀವನಭೀಮಾ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಯುವತಿಯೊಬ್ಬಳು ವಂಚಕ ಪ್ರಿಯಕರನಿಂದ ದೂರ ಸರಿದಿದ್ದಕ್ಕೇ ಆಕೆಯ ಜೀವವನ್ನೇ ಬಲಿಪಡೆದಿರುವ ಈ ಘಟನೆ ನಗರದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...