Homeಮುಖಪುಟತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

ತೆಲಂಗಾಣದಲ್ಲಿ ಬಿಆರ್‌ಎಸ್-ಬಿಜೆಪಿ ಮೈತ್ರಿ? ಹೊಸ ಚರ್ಚೆ ಹುಟ್ಟು ಹಾಕಿದ ವೈರಲ್ ಪತ್ರ

- Advertisement -
- Advertisement -

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್‌ ಪಕ್ಷದ ನಾಯಕ ಕೆ.ಚಂದ್ರಶೇಖರ್ ರಾವ್ (ಕೆಸಿಆರ್) ಅವರಿಗೆ ಮಗಳು ಕೆ.ಕವಿತಾ ಅವರು ಬರೆದಿದ್ದಾರೆ ಎನ್ನಲಾದ ಪತ್ರವೊಂದು ವೈರಲ್ ಆಗಿದ್ದು, ರಾಜ್ಯದಲ್ಲಿ ಹೊಸ ರಾಜಕೀಯ ಚರ್ಚೆಯನ್ನು ಹುಟ್ಟು ಹಾಕಿದೆ.

ತೆಲಂಗಾಣದಲ್ಲಿ ಬಿಜೆಪಿ ಜೊತೆ ಬಿಆರ್‌ಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳು ದಟ್ಟವಾಗಿ ಹರಡಿತ್ತು. ಈ ನಡುವೆ ಕವಿತಾ ಅವರದ್ದು ಎನ್ನಲಾದ ಪತ್ರದ ಕೆಲವೊಂದು ಅಂಶಗಳು ಸಂಚಲನ ಸೃಷ್ಟಿಸಿದೆ.

ವೈರಲ್ ಪತ್ರದ ನೈಜತೆ ಇನ್ನೂ ದೃಢಪಡದಿದ್ದರೂ, ಈ ಕುರಿತು ಕವಿತಾರ ಕಚೇರಿಯಾಗಲಿ ಅಥವಾ ಕೆ.ಚಂದ್ರಶೇಖರ್ ಅವರಿಂದಾಗಲಿ ಇದುವರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

“ನೀವು (ಕೆಸಿಆರ್) ಕೇವಲ ಎರಡು ನಿಮಿಷಗಳ ಕಾಲ ಮಾತನಾಡಿದರೂ, ಭವಿಷ್ಯದಲ್ಲಿ ಬಿಜೆಪಿ ಜೊತೆ ಮೈತ್ರಿ ಏರ್ಪಡುತ್ತದೆ ಎಂದು ಕೆಲವರು ಊಹಿಸಲು ಪ್ರಾರಂಭಿಸಿದ್ದಾರೆ. ನೀವು (ಬಿಜೆಪಿ ವಿರುದ್ಧ) ಇನ್ನೂ ಬಲವಾಗಿ ಮಾತನಾಡಬೇಕಿತ್ತು ಎಂದು ನಾನು ವೈಯಕ್ತಿಕವಾಗಿ ಭಾವಿಸಿದ್ದೇನೆ. ಬಹುಶಃ ನಾನು (ಬಿಜೆಪಿಯಿಂದಾಗಿ) ತೊಂದರೆ ಅನುಭವಿಸಿದ್ದರಿಂದ ಹಾಗೆ ಅನಿಸಿರಬಹುದು. ಆದರೆ, ನೀವು ಬಿಜೆಪಿಯನ್ನು ಇನ್ನೂ ಸ್ವಲ್ಪ ಹೆಚ್ಚು ಗುರಿಯಾಗಿಸಿಕೊಳ್ಳಬೇಕಿತ್ತು ಅಪ್ಪಾ” ಎಂದು ಕವಿತಾ ಅವರು ತಂದೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ ಒಳ ಮೀಸಲಾತಿ, ವಕ್ಫ್ ತಿದ್ದುಪಡಿ ಕಾಯ್ದೆ ಮತ್ತು ತಮ್ಮ ಭಾಷಣದಲ್ಲಿ ಉರ್ದು ಭಾಷೆಯನ್ನು ಕೈಬಿಟ್ಟಿರುವುದು ಮುಂತಾದ ಪ್ರಮುಖ ವಿಷಯಗಳ ಕುರಿತು ಸಭೆಯಲ್ಲಿ ನೀವು (ಕೆಸಿಆರ್) ಮೌನ ವಹಿಸಿರುವುದು ನಕಾರಾತ್ಮಕ ಪ್ರತಿಕ್ರಿಯೆಗೆ ಕಾರಣ” ಎಂದು ಪತ್ರದಲ್ಲಿ ಹೇಳಲಾಗಿದೆ

“ಕಾಂಗ್ರೆಸ್ ಸರ್ಕಾರವು ತಳಮಟ್ಟದ ಜನ ಬೆಂಬಲವನ್ನು ಕಳೆದುಕೊಂಡಿದೆ. ಕೆಲವು ಬಿಆರ್‌ಎಸ್ ಕಾರ್ಯಕರ್ತರು ಈಗ ಬಿಜೆಪಿಯನ್ನು ಪರ್ಯಾಯವಾಗಿ ನೋಡುತ್ತಿದ್ದಾರೆ. ಇತ್ತೀಚಿನ ಎಂಎಲ್‌ಸಿ ಚುನಾವಣೆಯಲ್ಲಿ ಬಿಆರ್‌ಎಸ್ ಸ್ಪರ್ಧಿಸದಿರಲು ನಿರ್ಧರಿಸಿದ್ದು, ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಹುದು ಎಂಬ ಬಲವಾದ ಸೂಚನೆಯನ್ನು ಪಕ್ಷದ ಕಾರ್ಯಕರ್ತರಿಗೆ ರವಾನಿಸಿದೆ” ಎನ್ನಲಾಗಿದೆ.

“ರಾಜಕೀಯ ಸನ್ನಿವೇಶವನ್ನು ಪರಿಹರಿಸಲು ನೀವು ನಿರ್ದಿಷ್ಟ ಕಾರ್ಯಕ್ರಮಗಳು ಅಥವಾ ಮಾರ್ಗಸೂಚಿಗಳನ್ನು ನೀಡುತ್ತೀರಿ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಕನಿಷ್ಠ ಈಗ ನಾವು ಒಂದು ಅಥವಾ ಎರಡು ದಿನಗಳ ಕಾಲ ಸಮಗ್ರ ಸಭೆಯನ್ನು ನಡೆಸಬಹುದು. ಕಾರ್ಯಕರ್ತರಿಂದ ಸಾಧ್ಯವಾದಷ್ಟು ಅಭಿಪ್ರಾಯಗಳನ್ನು ಸಂಗ್ರಹಿಸಿ ಅವರಿಗೆ ಮಾರ್ಗಸೂಚಿಯನ್ನು ನೀಡಿ” ಎಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.

ಈ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿ ಗಂಟೆಗಳೇ ಕಳೆದಿದ್ದರೂ, ವಿರೋಧ ಪಕ್ಷವಾದ ಬಿಆರ್‌ಎಸ್‌ ಈವರೆಗೆ ಪತ್ರವನ್ನು ನಿರಾಕರಿಸಿಲ್ಲ. ಬಿಆರ್‌ಎಸ್ ತನ್ನ ವಜ್ರ ಮಹೋತ್ಸವವನ್ನು ಏಪ್ರಿಲ್ 27 ರಂದು ವಾರಂಗಲ್‌ನಲ್ಲಿ ಆಚರಿಸಿತ್ತು.

ವಾರಂಗಲ್ ಕಾರ್ಯಕ್ರಮದ ಸಂದರ್ಭದಲ್ಲಿ ತೆಲಂಗಾಣ ಚಳವಳಿಯ ಕೆಲವು ಕಾರ್ಯಕರ್ತರನ್ನು ಸರಿಯಾಗಿ ನಡೆಸಿಕೊಳ್ಳಲಾಗಿಲ್ಲ ಅಥವಾ ಮಾತನಾಡಲು ಅವಕಾಶ ನೀಡಲಾಗಿಲ್ಲ ಎಂದು ಪತ್ರವು ಕಳವಳ ವ್ಯಕ್ತಪಡಿಸಿದೆ.

ಸಕಾರಾತ್ಮಕವಾಗಿ, “ಆಪರೇಷನ್ ಕಾಗರ್” ಬಗೆಗಿನ ಕೆಸಿಆರ್ ನಿಲುವನ್ನು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳಿಗಾಗಿ ಅವರು ಮೌನ ಆಚರಿಸಿದ ಕ್ಷಣವನ್ನು ಶ್ಲಾಘಿಸಲಾಗಿದೆ. ವಾರಂಗಲ್ ಕಾರ್ಯಕ್ರಮದ ಯಶಸ್ಸಿಗೆ ಕೆಸಿಆರ್ ಅವರನ್ನು ಅಭಿನಂದಿಸುತ್ತಾ ಪತ್ರವನ್ನು ಮುಕ್ತಾಯಗೊಳಿಸಲಾಗಿದೆ.

ಬಿಆರ್‌ಎಸ್ ಎಂಎಲ್‌ಸಿಯೂ ಆಗಿರುವ ಕವಿತಾ ಅವರು ತಮ್ಮ ಮಗನ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಪ್ರಸ್ತುತ ಅಮೆರಿಕದಲ್ಲಿರುವುದರಿಂದ ಅವರು ವೈರಲ್ ಪತ್ರದ ಬಗ್ಗೆ ತಕ್ಷಣದ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿಗಳು ತಿಳಿಸಿವೆ.

ವೈರಲ್ ಪತ್ರವನ್ನು ಕವಿತಾ ಅವರೇ ನಿಜವಾಗಿಯೂ ಬರೆದಿದ್ದಾರೆಯೇ ಎಂಬುವುದು ಖಚಿತವಾಗಿಲ್ಲ. ಒಂದು ವೇಳೆ ಅವರೇ ಬರೆದಿದ್ದರೂ, ಅದರಲ್ಲಿ ಆಶ್ಚರ್ಯ ಪಡುವಂತದ್ದು ಏನೂ ಇಲ್ಲ. ಪತ್ರದ ವಿಷಯಗಳು ಪ್ರತಿಕ್ರಿಯೆಯ ಸ್ವರೂಪದ್ದಾಗಿವೆ ಎಂದು ಬಿಆರ್‌ಎಸ್ ಎಂಎಲ್‌ಸಿ ಶ್ರವಣ್ ದಾಸೋಜು ಹೇಳಿದ್ದಾರೆ.

“ಒಬ್ಬರು ಮಗಳು ತಂದೆಗೆ ಅಥವಾ ಒಬ್ಬ ಸರ್ವೋಚ್ಚ ನಾಯಕನಿಗೆ ನೀಡುವ ಸಾಮಾನ್ಯ ಪ್ರತಿಕ್ರಿಯೆ ಇದು. ಇದು ಜನರಿಂದ ಪಡೆದ ಪ್ರತಿಕ್ರಿಯೆಯನ್ನು ಕ್ರೋಢೀಕರಿಸಿ ರವಾನಿಸಿದಂತಿದೆ” ಎಂದಿದ್ದಾರೆ.

ವೈರಲ್ ಪತ್ರವು ಬಿಆರ್‌ಎಸ್‌ ಪಕ್ಷದಲ್ಲಿನ ಆಂತರಿಕ ಬಿರುಕುಗಳನ್ನು ಬಯಲು ಮಾಡಿದೆ ಎಂಬ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಅಭಿಪ್ರಾಯಗಳ ಬಗ್ಗೆ ಕೇಳಿದಾಗ, “ಭತ್ತ ಖರೀದಿ ಮತ್ತು ನಿರುದ್ಯೋಗದಂತಹ ಜನರಿಗೆ ಹೆಚ್ಚು ಪ್ರಸ್ತುತವಾದ ಇತರ ವಿಷಯಗಳಿವೆ” ಎಂದು ದಾಸೋಜು ಹೇಳಿದ್ದಾರೆ.

ನಿವೃತ್ತಿ ನಂತರ ಯಾವುದೇ ಹುದ್ದೆ ಪಡೆಯದಿರಲು ನ್ಯಾ. ಓಕಾ ಮತ್ತು ನಾನು ನಿರ್ಧರಿಸಿದ್ದೇವೆ: ಸಿಜೆಐ ಬಿ.ಆರ್‌ ಗವಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....