Homeಕರ್ನಾಟಕಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; 'ಎಂಎಲ್‌ಎಗಳ ಬೇಟೆಗಾರ' ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

ಬಿಜೆಪಿ ವಿರುದ್ಧ ಬಿಆರ್‌ಎಸ್ ಪೋಸ್ಟರ್ ವಾರ್; ‘ಎಂಎಲ್‌ಎಗಳ ಬೇಟೆಗಾರ’ ಸಂತೋಷ್‌ ವಾಂಟೆಡ್ ಪೋಸ್ಟರ್ ವೈರಲ್

- Advertisement -
- Advertisement -

ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಮತ್ತು ಎಂಎಲ್‌ಸಿ ಕೆ ಕವಿತಾ ಅವರ ಇಡಿ ವಿಚಾರಣೆಗೆ ಗುರುವಾರ ಹಾಜರಾಗಲಿದ್ದಾರೆ. ಈ ಬೆನ್ನಲ್ಲೇ ತೆಲಂಗಾಣದ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯು (ಬಿಆರ್‌ಎಸ್)  ಬಿಜೆಪಿ ವಿರುದ್ಧ ಪೋಸ್ಟರ್ ವಾರ್ ಆರಂಭಿಸಿದೆ.

ಹೈದರಾಬಾದ್‌ನ ಎರಡು ಸ್ಥಳಗಳಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರ ಫೋಟೋದ ಮೇಲೆ ‘ವಾಂಟೆಡ್’ ಎಂದು ಬರೆದಿರುವ ಪೋಸ್ಟರ್‌ಗಳನ್ನು ಹಾಕಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಆ ಪೋಸ್ಟರ್‌ನಲ್ಲಿ ”ಸಂತೋಷ್‌ಗೆ ‘ಎಂಎಲ್‌ಎಗಳ ಬೇಟೆಗಾರ’ ಎಂದು ಹೇಳಲಾಗಿದೆ. ಸಂತೋಷ್ ಅವರನ್ನು ಹುಡುಕಿಕೊಟ್ಟರೆ ಬಹುಮಾನವಾಗಿ ‘ಮೋದಿಯವರ ₹ 15,00,000 ಭರವಸೆಯ ಮಂಜೂರಾತಿ’ಯ ಹಣವನ್ನು ನೀಡಲಾಗುತ್ತದೆ” ಎಂದು ಪೋಸ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಗೇಲಿ ಮಾಡಲಾಗಿದೆ.

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ED ವಿಚಾರಣೆಗೆ ಕರೆದ ಬಳಿಕ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯ ಆರೋಪದ ಮೇಲೆ ಕೇಂದ್ರವನ್ನು ಟೀಕಿಸಲು ಬಿಆರ್‌ಎಸ್ ಜೊತೆಗೆ ಆಮ್ ಆದ್ಮಿ ಪಾರ್ಟಿ (ಎಎಪಿ) ಕೂಡ ಪೋಸ್ಟರ್ ವಾರ್‌ನಲ್ಲಿ ಭಾಗವಹಿಸಿತ್ತು.

ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ ಪೋಸ್ಟರ್:

ಇತ್ತೀಚೆಗೆ ನಗರದಲ್ಲಿ ಬಿಆರ್‌ಎಸ್‌ ಕಾರ್ಯಕರ್ತರು ಪೋಸ್ಟರ್‌ ಅಂಟಿಸಿ ಪ್ರತಿಭಟನೆ ಮಾಡಿದ್ದರು. ಇಲ್ಲಿನ ಗೋಡೆಗಳ ಮೇಲೆ ‘ನರೇಂದ್ರ ಮೋದಿ ಪ್ರಜಾಪ್ರಭುತ್ವದ ಧ್ವಂಸಕ, ಬೂಟಾಟಿಕೆಯ ಪಿತಾಮಹ’ ಎಂಬ ಪೋಸ್ಟರ್‌ ಅಂಟಿಸಿ ವಿರೋಧಿಸಿದರು. ಇದರೊಂದಿಗೆ ಮೋದಿ ಸರ್ಕಾರ ಅವರ ವಿರೋಧಿಗಳ ವಿರುದ್ಧ ಇಂತಹ ಕೇಂದ್ರದ ತನಿಖಾ ಸಂಸ್ಥೆಗಳನ್ನು ಶಸ್ತ್ರವಾಗಿ ಬಳಸುತ್ತಿದೆ ಎಂದು ಪೋಸ್ಟರ್ ಮೂಲಕ ಆರೋಪ ಮಾಡಿದ್ದರು.

ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಬಿಜೆಪಿ ಹೋಲಿಕೆ ಪೋಸ್ಟರ್:

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ರೈಸಿಂಗ್ ಡೇಗೆ ಹಾಜರಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೈದರಾಬಾದ್‌ಗೆ ಭೇಟಿ ನೀಡುವ ಮೊದಲು, ಬಿಆರ್‌ಎಸ್ ಅವರನ್ನು ವ್ಯಂಗ್ಯದೊಂದಿಗೆ ಸ್ವಾಗತಿಸಿತು. ಬೇರೆ ಬೇರೆ ಪಕ್ಷಗಳಿಂದ ಪಕ್ಷಕ್ಕೆ ಸೇರ್ಪಡೆಗೊಂಡ ಬಿಜೆಪಿ ನಾಯಕರನ್ನು ಒಳಗೊಂಡ ಪೋಸ್ಟರ್ ಅನ್ನು ಹಾಕಲಾಗಿತ್ತು. ಅದರ ಜೊತೆಗೆ ಅವರು ವಿವಿಧ ಹಗರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಬಿಜೆಪಿಯನ್ನು ಡಿಟರ್ಜೆಂಟ್ ಪೌಡರ್ ಬ್ರಾಂಡ್ ನಿರ್ಮಾ ಜೊತೆ ಹೋಲಿಸಿ ಬಿಆರ್‌ಎಸ್ ಪೋಸ್ಟರ್ ಹಾಕಿತ್ತು. ಇದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿತ್ತು.

ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಿಂದ ಬಿಜೆಪಿಗೆ ತೆರಳಿದ್ದಾರೆ ಎಂದು ಹೇಳಲಾದ ‘ರೇಡ್ ಡಿಟರ್ಜೆಂಟ್’ಗಳನ್ನು ಉಲ್ಲೇಖಿಸುವ ಪೋಸ್ಟರ್‌ಗಳನ್ನು ಹೈದರಾಬಾದ್‌ನಾದ್ಯಂತ ಹಾಕಲಾಗಿತ್ತು. ಡಿಟರ್ಜೆಂಟ್ ಬಳಸಿದ ನಂತರ ನಾಯಕರ ಕೊಳಕು ಬಿಳಿ ಟಿ-ಶರ್ಟ್‌ಗಳಿಗೆ ಕೇಸರಿ ಬಣ್ಣ ಹಾಕಲಾಗಿದೆ ಎಂದು ಪೋಸ್ಟರ್ ತೋರಿಸಿತ್ತು. ಇದು ಭ್ರಷ್ಟಾಚಾರ ಆರೋಪ ಹೊತ್ತಿರುವ ನಾಯಕರು ಬಿಜೆಪಿಗೆ ಸೇರಿದ ಕೆಲವೇ ದಿನಗಳಲ್ಲಿ ಆರೋಪ ಮುಕ್ತರಾಗಿ ಶುಭ್ರವಾಗುತ್ತಾರೆ ಎನ್ನುವುದನ್ನು ತೋರಿಸುತ್ತದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

ಬೊಮ್ಮಾಯಿಗೆ 40% ಸಿಎಂ ಎಂದು ಸ್ವಾಗತದ ಪೋಸ್ಟರ್:

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು 40% ಸಿಎಂ ಎಂದು ಬಿಆರ್‌ಎಸ್ ಪಕ್ಷ ವ್ಯಂಗ್ಯವಾಡಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ತೆಲಂಗಾಣಕ್ಕೆ ತೆರಳಿದ್ದರು.

ಈ ಸಂದರ್ಭದಲ್ಲಿ ”40% ಸಿಎಂಗೆ ಸ್ವಾಗತ” ಎಂದು ದೊಡ್ಡ ಅಕ್ಷರಗಳಲ್ಲಿ ಬರೆದ ಬ್ಯಾನರ್ ಅನ್ನು ನಿಲ್ಲಿಸಲಾಗಿತ್ತು. ಇದು ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿ ಮಾಡಿರುವ ಟೀಕೆ ಎನ್ನುವುದು ಸ್ಪಷ್ಟವಾಗಿದೆ. ಇದರ ವಿಡಿಯೋ ಮತ್ತು ಫೋಟೋ ವೈರಲ್ ಆಗಿತ್ತು.

ಈ ಹಿಂದೆ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಕವಿತಾ ಅವರನ್ನು ಇಡಿ ವಿಚಾರಣೆ ನಡೆಸಿತ್ತು. ಯಾವುದೇ ಎಫ್‌ಐಆರ್‌ನಲ್ಲಿ ತನ್ನ ಹೆಸರು ಇಲ್ಲ. ಆದರೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಕೆಲವು ವ್ಯಕ್ತಿಗಳ ಕೆಲವು ಹೇಳಿಕೆಗಳ ಆಧಾರದ ಮೇಲೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಅವರು ಹೇಳಿದ್ದರು. ನಂತರ ಅವರು ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು, ನಂತರ ಅದನ್ನು ತಿರಸ್ಕರಿಸಲಾಯಿತು.

ತಮ್ಮ ನಿವಾಸದಲ್ಲಿಯೇ ಇಡಿ ಅಧಿಕಾರಿಗಳು ವಿಚಾರಣೆ ನಡೆಸಬೇಕು, ಈ ಸಂದಭಧದಲ್ಲಿ ಇತರ ಆರೋಪಿಗಳೊಂದಿಗೆ ತನ್ನ ವಿಚಾರಣೆಯ ವೀಡಿಯೊಗ್ರಫಿಗೆ ಅವಕಾಶ ನೀಡಲು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂದು ಕವಿತಾ ಅವರು ಮನವಿ ಮಾಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...