Homeಮುಖಪುಟಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಯ ಬಂಧನ

- Advertisement -
- Advertisement -

ಮಕ್ಕಳು, ಮಹಿಳೆಯರ ಮೇಲಿನ ಅತ್ಯಾಚಾರ ಕೊಲೆ ಪ್ರಕರಣಗಳು ಇಂದಿಗೂ ಮುಂದುವರೆಯುತ್ತಿರುವುದು ನಾಗರಿಕ ಸಮಾಜ ಕೊಳೆಯುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಸರ್ಕಾರಗಳ ನಿರ್ಲಕ್ಷ್ಯ, ಇಚ್ಛಾಶಕ್ತಿಯ ಕೊರತೆಯಿಂದಾಗಿ ಅಮಾಯಕರು ಅಸುನೀಗುತ್ತಿರುವ ಘಟನೆಗಳು ನಡೆಯುತ್ತಲೇ ಇವೆ. ಉತ್ತರ ಪ್ರದೇಶದ 6 ವರ್ಷದ ಬಾಲಕಿ ಮೇಲೆ ಕ್ರೂರ ಲೈಂಗಿಕ ದೌರ್ಜನ್ಯವೆಸಗಿ, ಕೊಲೆಗೈದು ಮೃತದೇಹವನ್ನು ಟ್ರಂಕ್‌ನಲ್ಲಿ ಬಚ್ಚಿಟ್ಟಿದ್ದನ್ನು ಭೇದಿಸಿರುವ ಪೊಲೀಸರು ಅಮ್ಜದ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಹಾಪುರ್ ನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಪಕ್ಕದ ಮನೆಯ ಬಾಲಕಿಯನ್ನು ಎಳೆದುತಂದು ಲೈಂಗಿಕ ಹಿಂಸೆ ನೀಡಿ ಕೊಲೆಗೈದಿರುವುದನ್ನು ಆರೋಪಿ 38 ವರ್ಷದ ಅಜ್ಮದ್ ಒಪ್ಪಿಕೊಂಡಿದ್ದು, ಆತನ ಮನೆಯ ಟ್ರಂಕ್‌ನಿಂದ ಮೃತದೇಹವನ್ನು ವಶಪಡಿಸಿಕೊಂಡಿರುವ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

6 ವರ್ಷದ ಬಾಲಕಿ ಅಂಗಡಿಗೆ ತೆರಳಿದ್ದಾಗ ಆರೋಪಿ ಮನೆಗೆ ಎಳೆದೊಯ್ದಿದ್ದ. ದುಷ್ಕೃತ್ಯವೆಸಗೆ ಯಾರಿಗೂ ತಿಳಿಯಬಾರದೆಂದು ಬಾಲಕಿಯ ಮೃತದೇಹವನ್ನು ತನ್ನ ಮನೆಯ ಟ್ರಂಕಿನಲ್ಲಿ ಬಚ್ಚಿಟ್ಟಿದ್ದ. ಆ ಸಮಯದಲ್ಲಿ ಆತನ ಹೆಂಡತಿ ಮತ್ತು ಮಕ್ಕಳು ಮನೆಯಲ್ಲಿರಲಿಲ್ಲ. ಬಾಲಕಿ ಮನೆಗೆ ಹಿಂದಿರುಗದಿದ್ದಾಗ ಆಕೆಯ ಕುಟುಂಬದವರು ಶುಕ್ರವಾರ ಪೊಲೀಸ್ ದೂರು ನೀಡಿದ್ದರು. ಅದೇ ಸಮಯದಲ್ಲಿ ನೆರ ಮನೆಯವರು ಕೆಟ್ಟ ವಾಸನೆ ಬರುತ್ತಿದೆಯೆಂದು ದೂರು ನೀಡಿದಾಗ ಪೊಲೀಸರು ಮನೆಗಳನ್ನು ಪರೀಶಿಲಿಸಿದಾಗ ಮೃತ ದೇಹ ಕಂಡುಬಂದಿದೆ.

ನಂತರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಸಂದರ್ಭದಲ್ಲಿ ಆಕ್ರೋಶಭರಿತ ಜನಸಮೂಹದಿಂದ ಆತನನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಕೊಲೆಯನ್ನು ಒಪ್ಪಿಕೊಂಡಿದ್ದು, ತಾನು ಆ ವೇಳೆ ಡ್ರಗ್ ಸೇವಿಸಿದ್ದೆ ಎಂದು ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದು ವಿಚಾರಣೆ ಮುಂದುವರೆದಿದೆ.

ಲೈಂಗಿಕ ದೌರ್ಜನ್ಯ ಎನ್ನುವುದು ಅತಿ ಕ್ರೂರ ಅಪರಾಧವಾಗಿದೆ. ಅದಕ್ಕೆ ತೀವ್ರತೆರನಾದ ಶಿಕ್ಷೆ ವಿಧಿಸಲಾಗುತ್ತದೆ. 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯವು ಪೊಕ್ಸೊ ಕಾಯ್ದೆಯಡಿ ಬರಲಿದ್ದು, ಆರೋಪಿಯೇ ತಾನು ತಪ್ಪಿತಸ್ಥನಲ್ಲ ಎಂದು ಸಾಬೀತುಪಡಿಸಬೇಕಾಗುತ್ತದೆ. ಈ ಕಾನೂನುಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದರ ಜೊತೆಗೆ ಅತ್ಯಾಚಾರಕ್ಕೆ ತೀವ್ರ ಶಿಕ್ಷೆಯಿದೆಯೆಂದು ಸರ್ಕಾರ ಎಲ್ಲೆಡೆ ಪ್ರಚಾರ ಮಾಡಬೇಕಿದೆ. ಜೊತೆಗೆ ಮಹಿಳಾ ಸಮಾನತೆ, ರಕ್ಷಣೆ ಮತ್ತು ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕಿದೆ. ಆ ಮೂಲಕ ಅತ್ಯಾಚಾರಗಳೆಂಬ ಹೀನ ಕೃತ್ಯಗಳನ್ನು ತಡೆಯಲು ಸಾಧ್ಯ.


ಇದನ್ನೂ ಓದಿ: ಬ್ಯಾಟರಾಯನಪುರ ಠಾಣೆಯಲ್ಲಿ ಯುವಕನಿಗೆ ಕಸ್ಟಡಿ ಹಿಂಸೆ: ಪಾಪ್ಯುಲರ್ ಫ್ರಂಟ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...