Homeಕರ್ನಾಟಕಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

ಕರ್ನಾಟಕದಲ್ಲಿ ರಾಜಾ ಹುಲಿ, ಮೋದಿ ಎದುರು ಇಲಿ: ಬಿಎಸ್‌ವೈಗೆ ಸಿದ್ದು ವ್ಯಂಗ್ಯ

- Advertisement -
- Advertisement -

ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಎಕ್ಸಾನಲ್ಲಿ ಸರಣಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ”ಪ್ರತಿನಿತ್ಯ ಬೈದರೆ ನರೇಂದ್ರ ಮೋದಿ ಅವರು  ಏಕೆ ಸಿದ್ದು ಭೇಟಿ ಆಗ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿರುವುದು ರಾಜ್ಯದ ಆರೂವರೆ ಕೋಟಿ ಕನ್ನಡಿಗರಿಗೆ ಮಾಡಿರುವ ಅವಮಾನ” ಎಂದಿದ್ದಾರೆ.

”ಒಂದು ಕಾಲದಲ್ಲಿ ನರೇಂದ್ರ ಮೋದಿ ಅವರನ್ನು ಬಾಯಿಗೆ ಬಂದಂತೆ ಬೈದಾಡಿದ್ದ ಯಡಿಯೂಪರಪ್ಪನವರು ತನ್ನ ರಾಜಕೀಯ ಅಸ್ವಿತ್ವ ಉಳಿಸಿಕೊಳ್ಳಲು ಇಂತಹ ಗುಲಾಮಿ ಮನೋಭಾವ ಬೆಳೆಸಿಕೊಂಡಿರುವುದು ವಿಷಾದನೀಯ. ನರೇಂದ್ರ ಮೋದಿಯವರ ವಿರುದ್ಧ ವೈಯಕ್ತಿಕವಾಗಿ ನನಗೇನು ಪ್ರೀತಿ ಇಲ್ಲವೇ ದ್ವೇಷ ಇಲ್ಲ. ವೈಯಕ್ತಿಕವಾಗಿ ಅವರೇನು ನನಗೆ ಹಾನಿ ಮಾಡಿಲ್ಲ. ಆದರೆ ಆರೂವರೆ ಕೋಟಿ ಜನರನ್ನು ಪ್ರತಿನಿಧಿಸುತ್ತಿರುವ ಮುಖ್ಯಮಂತ್ರಿಯಾಗಿ ನಮ್ಮ ಜನರಿಗೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯವನ್ನು ಕಂಡು ಕಣ್ಣುಮುಚ್ಚಿಕೊಂಡು ಇರಲಾಗುವುದಿಲ್ಲ. ಈ ಪ್ರಶ್ನಿಸುವ ಕೆಲಸವನ್ನು ಮಾಡದೆ ಇದ್ದರೆ ಅದು ಜನದ್ರೋಹವಾಗುತ್ತದೆ” ಎಂದು ಹೇಳಿದ್ದಾರೆ.

”ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಬಿಎಸ್‌ ಯಡಿಯೂರಪ್ಪ ಅವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ ಮುಖ್ಯಮಂತ್ರಿಗಳು ಪ್ರಧಾನಿಯ ಗುಲಾಮರಲ್ಲ. ಇಷ್ಟೊಂದು ದೀರ್ಘಕಾಲ ರಾಜಕೀಯದಲ್ಲಿರುವ ಯಡಿಯೂರಪ್ಪನವರಿಗೆ ಪ್ರಜಾಪ್ರಭುತ್ವದ ಈ ಮೂಲ ಪಾಠ ತಿಳಿಯದೆ ಇರುವುದು ದುರಂತವೇ ಸರಿ. ಬಹಳ ಮುಖ್ಯವಾಗಿ ಬಿ.ಎಸ್. ಯಡಿಯೂರಪ್ಪನವರಿಗೆ ಈ ರೀತಿ ಹೇಳಿಕೆ ನೀಡುವ ಯಾವ ನೈತಿಕತೆ ಇಲ್ಲವೇ ಇಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

”ರಾಜ್ಯ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿಕೊಂಡ ದಿನಗಳಲ್ಲಿ ಯಡಿಯೂರಪ್ಪ ಮತ್ತು ಬೆಂಬಲಿಗರು ಕೇವಲ ನರೇಂದ್ರ ಮೋದಿ ಅವರ ವಿರುದ್ಧ ಮಾತ್ರ ಅಲ್ಲ ಎಲ್.ಕೆ.ಅಡ್ವಾನಿಯವರಂತಹ ಅವರ ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಗೆಲ್ಲ ಬೈದಿದ್ದಾರೆ ಎನ್ನುವುದನ್ನು ರಾಜ್ಯದ ಜನ ಕಂಡಿದ್ದಾರೆ” ಎಂದಿದ್ದಾರೆ.

”ಬಿ.ಎಸ್.ಯಡಿಯೂರಪ್ಪನವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರೂ ಹೊತ್ತು ಹಾಡಿ ಹೊಗಳುತ್ತಿದ್ದಾರೆ. ಹೀಗಿದ್ದರೂ ಈಗಲೂ ಅವರಿಗೆ ಕೂತು ನಿರಾಳವಾಗಿ ಮಾತನಾಡಲು ಮೋದಿಯವರು ಒಂದು ಅಪಾಯ್ಟ್‌ಮೆಂಟ್ ಕೊಡುತ್ತಿಲ್ಲ. ದೆಹಲಿಗೆ ಹೋಗಿ ದಿನಗಟ್ಟಲೆ ಅವರು ಕಾಯಬೇಕಾಗುತ್ತದೆ. ಕರ್ನಾಟಕದಲ್ಲಿ ರಾಜಾ ಹುಲಿ ಎಂದು ಕರೆಸಿಕೊಳ್ಳುವ ಬಿಎಸ್ ಯಡಿಯೂರಪ್ಪ ಅವರು ನರೇಂದ್ರ ಮೋದಿಯವರ ಮುಂದೆ ಇಲಿಯಂತೆ ವರ್ತಿಸುವುದು ಅವರ ವ್ಯಕ್ತಿತ್ವಕ್ಕೆ ಭೂಷಣ ಅಲ್ಲ” ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

”ಮೊನ್ನೆಮೊನ್ನೆಯ ವರೆಗೆ ಆರ್.ಎಸ್.ಎಸ್, ರಾಜ್ಯ ಬಿಜೆಪಿ ಮತ್ತು ನರೇಂದ್ರಮೋದಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರು ಆಗಿರುವ ಹೆಚ್. ಡಿ ಕುಮಾರಸ್ವಾಮಿ ಅವರು ಹಿಗ್ಗಾಮುಗ್ಗಾ ಬೈದಾಡುತ್ತಿದ್ದರು. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಕುಮಾರಸ್ವಾಮಿಯವರನ್ನು ಕರೆಸಿ ಮಾತನಾಡಿ ಬೆನ್ನು ತಟ್ಟಿ ಕಳುಹಿಸುತ್ತಾರೆ. ಕುಮಾರಸ್ವಾಮಿ ಬೈದಾಡಿದ್ದು ಮೋದಿಯವರಿಗೆ ತಿಳಿದಿರಲಿಲ್ಲವೇ? ಇದ್ಯಾವ ಸೀಮೆಯ ಸ್ವಾಭಿಮಾನಿ ನಡವಳಿಕೆ” ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

”ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷದ ನಾಯಕರನ್ನು ನಡೆಸಿಕೊಳ್ಳುವ ರೀತಿ ಬಗ್ಗೆ ನನಗೆ ತೀವ್ರ ಅಸಮಾಧಾನ ಇದೆ. ಇದಕ್ಕಿಂತಲೂ ಅಸಮಾಧಾನ ಎಲ್.ಕೆ.ಅಡ್ವಾಣಿ, ಬಿ.ಎಸ್. ಯಡಿಯೂರಪ್ಪನವರಂತಹ ತಮ್ಮದೇ ಪಕ್ಷದ ಹಿರಿಯ ನಾಯಕರನ್ನು ನಡೆಸಿಕೊಳ್ಳುವ ಬಗ್ಗೆಯೂ ಇದೆ” ಎಂದಿದ್ದಾರೆ.

”ಯಡಿಯೂರಪ್ಪ ಅವರೇ, ನೀವು ನಿಮ್ಮ ನಾಯಕರ ಮೇಲೆ ಬರಪೂರ ಹೊಗಳಿಕೆಯ ಮಳೆ ಸುರಿಸಿ, ಮನಸ್ಸಿಗೆ ತೃಪ್ತಿ ಆಗುವಷ್ಟು ಓಲೈಸಿ, ಬೇಕಿದ್ದರೆ ಕಾಲುಗಳನ್ನು ಬೇಕಾದರೂ ಹಿಡಿಯಿರಿ, ನಮಗೇನು ಅಭ್ಯಂತರ ಇಲ್ಲ. ಅದರಿಂದಾದರೂ ರಾಜ್ಯದ ಜನತೆಗೆ ನ್ಯಾಯ ಸಿಗಲಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: BJP ಲೀಡರ್ ಲೆಸ್, JDS ಪೀಪಲ್ ಲೆಸ್ ಪಾರ್ಟಿ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...