Homeಮುಖಪುಟಮೋದಿ ವಿರುದ್ಧ ಮಾಜಿ ಬಿಎಸ್ಎಫ್ ಯೋಧ ಕಣಕ್ಕೆ

ಮೋದಿ ವಿರುದ್ಧ ಮಾಜಿ ಬಿಎಸ್ಎಫ್ ಯೋಧ ಕಣಕ್ಕೆ

- Advertisement -
- Advertisement -

ಸೈನ್ಯದಲ್ಲಿ ಕಳಪೆ ಆಹಾರ ನೀಡುವುದರಿಂದ ಬೇಸೆತ್ತು ಸೋಷಿಯಲ್ ಮಿಡೀಯಾದಲ್ಲಿ ದೊಡ್ಡ ಪ್ರಚಾರಾಂದೋಲನ ನಡೆಸಿದ್ದ ತೇಜ್ ಬಹದ್ದೂರ್ ಯಾದವ್ ಎಂಬ ಯೋಧನು ನರೇಂದ್ರ ಮೋದಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಕಳೆದ ವರ್ಷ ಇವರು ಬಿಎಸ್ಎಫ್ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದಾಗ ಸರಿಯಾದ ಸೌಲಭ್ಯಗಳಿಲ್ಲದಿರುವುದು ಮತ್ತು ಅತ್ಯಂತ ಕಳಪೆ ಆಹಾರದ ವಿರುದ್ಧ ದನಿಯೆತ್ತಿ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಬೆಂಬಲಿಸಿ ಸಾವಿರಾರು ಜನ  ವಿಡಿಯೋವನ್ನು ಷೇರ್ ಮಾಡಿದ್ದರು. ಸಿಕ್ಕಾಪಟ್ಟೆ ವೈರಲ್ ಆದ ವಿಡಿಯೋ ಮೋದಿ ಸರ್ಕಾರಕ್ಕೆ ಮುಜುಗರ ತಂದಿತ್ತು. ಆ ಸಮಸ್ಯೆಯನ್ನು ಬಗೆಹರಿಸುವ ಬದಲು ಆತನನ್ನು ಸೇನೆಯಿಂದ ವಜಾಗೊಳಿಸಲಾಗಿತ್ತು.

ಹರಿಯಾಣದ ರಿವಾರಿ ನಿವಾಸಿಯಾದ ತೇಜ್ ಬಹದ್ದೂರ್ ಯಾದವ್ ರವರನ್ನು ತಮ್ಮ ಪಕ್ಷಕ್ಕೆ ಸೇರುವಂತೆ ಹಲವು ಪಕ್ಷಗಳು ಆಹ್ವಾನ ನೀಡಿದ್ದವು. ಆದರೆ ಅದನ್ನು ತಿರಸ್ಕರಿಸಿರುವ ಅವರು ಸದ್ಯ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಿಂದ ಮೋದಿ ವಿರುದ್ಧವೆ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಚುನಾವಣೆಯಲ್ಲಿ ಗೆಲ್ಲುವುದು, ಸೋಲುವುದು ನನಗೆ ಮುಖ್ಯವಲ್ಲ, ನನ್ನ ಸ್ಫರ್ಧೆಯ ಮೂಲಕ ಸೇನೆಯ ಬಗ್ಗೆ ಈ ಸರ್ಕಾರ ಹೊಂದಿರವು ತಿರಸ್ಕಾರದ ಭಾವನೆಯನ್ನು, ಸೈನ್ಯದಲ್ಲಿನ ಭ್ರಷ್ಟಾಚಾರವನ್ನು ಮುಖ್ಯವಾಹಿನಿ ಚರ್ಚೆಗೆ ತರಬೇಕು, ಅದರಲ್ಲಿಯೂ ಪ್ಯಾರಮಿಲಿಟರಿ ಸೇನೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಸಿಗಬೇಕು ಎಂದು ತೇಜ್ ಬಹದ್ದೂರ್ ಹೇಳುತ್ತಾರೆ.

ಇತ್ತೀಚೆಗೆ ಪುಲ್ವಾಮ ಘಟನೆಯಲ್ಲಿ 40ಕ್ಕೂ ಹೆಚ್ಚು ಸಿ.ಆರ್.ಪಿ.ಎಫ್ ಯೋಧರು ಮೃತಪಟ್ಟಿದ್ದರೂ ಈವರೆಗೆ ಅವರಿಗೆ ಹುತಾತ್ಮ ಪಟ್ಟ ನೀಡಲು ಮೋದಿ ಸರ್ಕಾರ ಸಿದ್ಧವಿಲ್ಲ, ಬದಲಿಗೆ ಸೈನಿಕರ ಹೆಸರಿನಲ್ಲಿ ವೋಟು ಪಡೆಯಲು ಮಾತ್ರ ಈ ಸರ್ಕಾರ ಹವಣಿಸುತ್ತಿದ್ದು ಸೈನಿಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ನೇರ ಆರೋಪ ಮಾಡಿದ್ದಾರೆ. ನಾನು ಸೈನ್ಯದಲ್ಲಿನ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದೆ. ಅದನ್ನು ಸರಿಪಡಿಸುವ ಬದಲು ನನ್ನ ಮೇಲೆಯೇ ಸುಳ್ಳು ಕೇಸುಗಳನ್ನು ಹಾಕಿ ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿಯೇ ವಾರಣಾಸಿಗೆ ತೆರಳಿ ಮಾಜಿ ಯೋಧರು ಮತ್ತು ರೈತರ ನೆರವಿನಿಂದ ಚುನಾವಣಾ ಪ್ರಚಾರ ಕೈಗೊಳ್ಳುವುದಾಗಿ ಅವರು ಘೋಷಿಸಿದ್ದಾರೆ.

ನಾವೆಲ್ಲರೂ ಸೈನ್ಯಕ್ಕೆ ಬಹಳ ಗೌರವ ಕೊಡುತ್ತೇವೆ, ಆದರೆ ಅಲ್ಲಿಯೇ ಭ್ರಷ್ಟಾಚಾರವಿದೆ ಎಂಬ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕಿದೆ. ಭಾರತದ ಬಹುತೇಕ ಮಾಧ್ಯಮಗಳು ಮೋದಿ ಪರವಾಗಿಯೂ, ಸೈನ್ಯವನ್ನು ವಿಜೃಂಭಿಸಿ ವರದಿ ಪ್ರಸಾರ ಮಾಡುತ್ತಿರುವಾಗ ತೇಜ್ ಬಹದ್ದೂರ್ ರವರ  ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...