HomeಮುಖಪುಟBSNL, MTNL ವಿಲೀನಕ್ಕೆ ಅನುಮತಿ, ಪುನಶ್ಚೇತನಕ್ಕೆ ಕ್ರಮ: ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್

BSNL, MTNL ವಿಲೀನಕ್ಕೆ ಅನುಮತಿ, ಪುನಶ್ಚೇತನಕ್ಕೆ ಕ್ರಮ: ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್

- Advertisement -
- Advertisement -

ಸರ್ಕಾರಿ ಸ್ವಾಮ್ಯದ ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ ( ಬಿಎಸ್‌ಎನ್‌ಎಲ್‌)ನ್ನು ಯಾವುದೇ ಕಾರಣಕ್ಕೂ ಬಂದ್‌ ಮಾಡುವುದಿಲ್ಲ. ಮಹಾನಗರ ಟೆಲಿಫೋನ್‌ ನಿಗಮ್‌ ಲಿಮಿಟೆಡ್‌ ( ಎಂಟಿಎನ್‌ಎಲ್‌) ಹಾಗೂ ಬಿಎಸ್‌ಎನ್‌ಎಲ್‌ನ್ನು ವಿಲೀನಗೊಳಿಸುವ ಪ್ರಸ್ತಾವಣೆಗೆ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್‌ ಸಮಿತಿ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್, ಬಿಎಸ್‌ಎನ್‌ಎಲ್‌ ಹಾಗೂ ಎಂಟಿಎನ್‌ಎಲ್‌ಗಳನ್ನು ವಿಲೀನಗೊಳಿಸುವ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಯಿತು. ಎರಡೂ ಸಂಸ್ಥೆಗಳನ್ನು ಮುಚ್ಚುವುದಿಲ್ಲ. ಬದಲಿಗೆ ಎರಡರ ಪುನಶ್ಚೇತನಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಟೆಲಿಕಾಂ ಸೇವಾ ಕ್ಷೇತ್ರದಲ್ಲಿ ತೀವ್ರ ಸ್ಪರ್ಧೆಯಿದೆ. ಈ ಮಧ್ಯೆ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕ ವಲಯದ ಕಂಪನಿಗಳಾದ ಎಂಟಿಎನ್‌ಎಲ್‌ ಮತ್ತು ಬಿಎಸ್‌ಎನ್‌ಎಲ್‌ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಎರಡೂ ದೇಶದ ಮಹತ್ವದ ಸ್ವತ್ತು. ಭಾರತೀಯ ಸೇನೆಯ ಮೂರೂ ಪಡೆಗಳ ದೂರಸಂಪರ್ಕ ವ್ಯವಸ್ಥೆಯನ್ನು ಬಿಎಸ್‌ಎನ್‌ಎಲ್‌ ನಿರ್ವಹಿಸುತ್ತಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಸಂಸ್ಥೆಗಳನ್ನು ಮುಚ್ಚುವ ಪ್ರಶ್ನೆಯಿಲ್ಲ. ಇದರಲ್ಲಿ ಸರ್ಕಾರದ ನಿರ್ಧಾರ ಸ್ಪಷ್ಟವಾಗಿದೆ ಎಂದು ಹೇಳಿದರು.

ಇನ್ನು ಬಿಎಸ್‌ಎನ್‌ಎಲ್‌ ನೌಕರರ ಸ್ವಯಂ ನಿವೃತ್ತಿ ಯೋಜನೆಯನ್ನೂ ರೂಪಿಸಲಾಗಿದೆ. ಬಿಎಸ್‌ಎನ್‌ಎಲ್‌ನ ಆದಾಯದ ಶೇ. ೮೫ರಷ್ಟು ಮೊತ್ತವನ್ನು ನೌಕರರ ವೆಚ್ಚಕ್ಕೆ ವಿನಿಯೋಗಿಸಲಾಗುತ್ತಿದೆ. ಇದನ್ನು ಶೇ.೨೫ಕ್ಕೆ ಇಳಿಕೆ ಮಾಡಿದರೆ, ಶೇ.೫೦ರಷ್ಟು ನೌಕರರು ವಿಆರ್‌ಎಸ್‌ ಯೋಜನೆಯ ಲಾಭ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...