ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾರವರು ರಾಜ್ಯದಲ್ಲಿನ ರಾಜಕೀಯ ಅಸ್ಥಿರತೆಯನ್ನು ಆಧರಿಸಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಬೇಕು ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.
ಸಚಿನ್ ಪೈಲಟ್ ಕಾಂಗ್ರೆಸ್‌ನಿಂದ ದೂರ ಸರಿದ ನಂತರ ಉಂಟಾಗಿರುವ ಬಿಕ್ಕಟ್ಟಿನಿಂದ ರಾಜ್ಯವನ್ನು ಪಾರು ಮಾಡಲು ರಾಷ್ಟ್ರಪತಿ ಆಡಳಿತವೇ ಸೂಕ್ತ ಮಾರ್ಗ ಎಂಬುದು ಮಾಯಾವತಿಯವರ ಅಭಿಪ್ರಾಯವಾಗಿದೆ.
ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪಕ್ಷಾಂತರ ವಿರೋಧಿ ಕಾನೂನನ್ನು ಬಹಿರಂಗವಾಗಿ ಉಲ್ಲಂಘಿಸಿ, ಬಿಎಸ್ಪಿಯ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವ ಮೂಲಕ ಎರಡನೇ ಬಾರಿಗೆ ಮೋಸ ಮಾಡಿದ್ದಾರೆ ಎಂದು ಅವರು ಹೇಳಿದರು.
ಈ ಹಿಂದೆ 6 ಜನ ಬಿಎಸ್‌ಪಿ ಶಾಸಕರು ಒಟ್ಟಾಗಿ ಪಕ್ಷ ತ್ಯಜಿಸಿ ಕಾಂಗ್ರೆಸ್ ಸೇರಿದ್ದರು.
“ಅವರು ಫೋನ್ ಟ್ಯಾಪಿಂಗ್ ಮೂಲಕ ಕಾನೂನುಬಾಹಿರ ಮತ್ತು ಅಸಂವಿಧಾನಿಕ ಕೆಲಸ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಿದೆ” ಎಂದು ಮಾಯಾವತಿ ತಮ್ಮ ಸರಣಿ ಟ್ವೀಟ್‌ನಲ್ಲಿ ಹೇಳಿದ್ದಾರೆ.
2. इस प्रकार, राजस्थान में लगातार जारी राजनीतिक गतिरोध, आपसी उठा-पठक व सरकारी अस्थिरता के हालात का वहाँ के राज्यपाल को प्रभावी संज्ञान लेकर वहाँ राज्य में राष्ट्रपति शासन लगाने की सिफारिश करनी चाहिए, ताकि राज्य में लोकतंत्र की और ज्यादा दुर्दशा न हो। 2/2
— Mayawati (@Mayawati) July 18, 2020
“ರಾಜ್ಯಪಾಲರು (ರಾಜಸ್ಥಾನ) ರಾಜಸ್ಥಾನದಲ್ಲಿ ಚಾಲ್ತಿಯಲ್ಲಿರುವ ರಾಜಕೀಯ ಅಸ್ಥಿರತೆಯನ್ನು ಗಣನೆಗೆ ತೆಗೆದುಕೊಂಡು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಶಿಫಾರಸು ಮಾಡಬೇಕು, ಹೀಗಾದರೆ ರಾಜ್ಯದಲ್ಲಿ ಪ್ರಜಾಪ್ರಭುತ್ವದ ಸ್ಥಿತಿ ಹದಗೆಡುವುದಿಲ್ಲ” ಎಂದು ಅವರು ಹೇಳಿದರು.
ಓದಿ:
ರಾಜಸ್ಥಾನ ಆಡಿಯೋ ಪ್ರಕರಣ: ಕಾಂಗ್ರೆಸ್ ವಕ್ತಾರ ಸುರ್ಜೇವಾಲ ವಿರುದ್ಧ ದೂರು ದಾಖಲು


