Homeಮುಖಪುಟಬಿಎಸ್ಪಿ ಪಕ್ಷಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

ಬಿಎಸ್ಪಿ ಪಕ್ಷಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ್ ಆನಂದ್ ಅವರನ್ನು ಪಕ್ಷದ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ ಎಂದು ಪಕ್ಷದ ಮುಖಂಡರು ಭಾನುವಾರ ತಿಳಿಸಿದ್ದಾರೆ.

ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಈ ಘೋಷಣೆ ಮಾಡಲಾಗಿದೆ. ಮುಂಬರುವ 2024ರ ಲೋಕಸಭೆ ಚುನಾವಣೆ ಹಿನ್ನೆಲೆ ನಡೆದ ಪಕ್ಷದ ಸಭೆಯಲ್ಲಿ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರು ಸೋದರಳಿಯ ಆನಂದ್ ಅವರನ್ನು ಉತ್ತರಾಧಿಕಾರಿಯನ್ನಾಗಿ ಘೋಷಿಸಿದ್ದಾರೆ ಮತ್ತು ಉತ್ತರಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಬಿಎಸ್ಪಿ ನಾಯಕರು ಮಾಹಿತಿ ನೀಡಿರುವ ಬಗ್ಗೆ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ನಮ್ಮ ನಾಯಕಿ ಮಾಯಾವತಿ ಅವರು ಭವಿಷ್ಯದಲ್ಲಿ ಆಕಾಶ್ ಆನಂದ್ ಜಿ ಅವರು ಪಕ್ಷದ ಉತ್ತರಾಧಿಕಾರಿಯಾಗುತ್ತಾರೆ ಎಂದು ಹೇಳಿದ್ದಾರೆ. ಪಕ್ಷ ದುರ್ಬಲವಾಗಿರುವ ರಾಜ್ಯಗಳಲ್ಲಿ ಪಕ್ಷವನ್ನು ಬಲಪಡಿಸುವ ಜವಾಬ್ದಾರಿಯನ್ನು ಅವರಿಗೆ ನೀಡಿದ್ದಾರೆ. ತಾನು ಯುಪಿ ಮತ್ತು ಉತ್ತರಾಖಂಡದಲ್ಲಿ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಆನಂದ್ ಅವರು ಹೇಳಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಉದಯ್‌ ವೀರ್‌ ಸಿಂಗ್‌ ಅವರು ಹೇಳಿದ್ದಾರೆ.

ಆಕಾಶ್ ಆನಂದ್ ಅವರು ಕಳೆದ ವರ್ಷದಿಂದ ಬಿಎಸ್ಪಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅವರು ಮಾಯಾವತಿಯವರ ಕಿರಿಯ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿದ್ದಾರೆ. ಅವರು ಬಿಎಸ್ಪಿಯಲ್ಲಿ ಬೆಹೆನ್ ಜಿ(ಮಾಯಾವತಿಯ) ನಂತರದ ಸ್ಥಾನದಲ್ಲಿದ್ದಾರೆ. ಮಾಯಾವತಿಯವರ ಸಹೋದರ ಆನಂದ್ ಕುಮಾರ್ ಅವರನ್ನು 2019ರಲ್ಲಿ ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು ಮತ್ತು ಆಕಾಶ್ ಆನಂದ್ ಅವರನ್ನು ರಾಷ್ಟ್ರೀಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿತ್ತು.

ಆಕಾಶ್ ಆನಂದ್ ರಾಜಸ್ಥಾನದಲ್ಲಿ 2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಪಕ್ಷದ ಸ್ಟಾರ್ ಪ್ರಚಾರಕರಲ್ಲಿ ಒಬ್ಬರಾಗಿದ್ದರು. ರಾಜಸ್ಥಾನದಲ್ಲಿ ಅವರು ಬಿಎಸ್ಪಿ ಪರ ಚುನಾವಣಾ ಪ್ರಚಾರವನ್ನು ಮಾಡಿದ್ದರು. ಆಕಾಶ್ ಆನಂದ್ ಅವರು ಇತ್ತೀಚೆಗೆ ನಡೆದ 4 ರಾಜ್ಯಗಳ ಚುನಾವಣೆಗಳಲ್ಲಿ ವಿಶೇಷವಾಗಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ರಾಜಸ್ಥಾನದಲ್ಲಿ ಬಿಎಸ್‌ಪಿ 2 ಸ್ಥಾನಗಳಲ್ಲಿ ಗೆಲುವನ್ನು ಕಂಡಿದೆ, ಆದರೆ ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಯಾವುದೇ ಖಾತೆಯನ್ನು ತೆರೆದಿಲ್ಲ.

ಆನಂದ್ ಅವರು 2022ರಲ್ಲಿ ರಾಜಸ್ಥಾನದ ಅಲ್ವಾರ್‌ನಲ್ಲಿ ಪಾದಯಾತ್ರೆ ನಡೆಸಿದ್ದರು. 28 ವರ್ಷದ ಆನಂದ್ ಅವರು ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮದಿನದಂದು ಆಲ್ವಾರ್‌ನಲ್ಲಿ 13 ಕಿಮೀ ಸ್ವಾಭಿಮಾನ್ ಸಂಕಲ್ಪ ಯಾತ್ರೆ ನಡೆಸಿ ಗಮನ ಸೆಳೆದಿದ್ದರು.

ಇದನ್ನು ಓದಿ: ಇವಿಎಂ ಜನರ ಮನಸ್ಸಿನಲ್ಲಿ ಅಪನಂಬಿಕೆ ಸೃಷ್ಟಿಸಿದೆ: ಅಖಿಲೇಶ್ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಪಹರಣ ಆರೋಪಕ್ಕೆ ಪುರಾವೆಯಿಲ್ಲ, ರಾಜಕೀಯದ ಷಡ್ಯಂತ್ರದಿಂದ ಬಂಧನ: ಹೆಚ್.ಡಿ ರೇವಣ್ಣ

0
ಲೈಂಗಿಕ ದೌರ್ಜನ್ಯದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್‌ಐಟಿಯಿಂದ ಬಂಧಿತರಾದ ಬಳಿಕ ಮೊದಲ ಬಾರಿಗೆ ಶಾಸಕ ಹೆಚ್‌.ಡಿ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ...