Homeಮುಖಪುಟಮತ ಚಲಾಯಿಸುವಾಗ ವೀಡಿಯೊ ಚಿತ್ರೀಕರಣ: ಬಿಎಸ್ಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

ಮತ ಚಲಾಯಿಸುವಾಗ ವೀಡಿಯೊ ಚಿತ್ರೀಕರಣ: ಬಿಎಸ್ಪಿ ಅಭ್ಯರ್ಥಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಪಂಜಾಬ್‌ನ ಫಿರೋಜ್‌ಪುರ ಲೋಕಸಭಾ ಕ್ಷೇತ್ರದ ಬಿಎಸ್‌ಪಿ ಅಭ್ಯರ್ಥಿ ಸುರೀಂದರ್‌ ಕಾಂಬೋಜ್‌ ಮತ ಚಲಾಯಿಸುವಾಗ ವೀಡಿಯೊ ರೆಕಾರ್ಡ್‌ ಮಾಡಿ ವೈರಲ್‌ ಮಾಡಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಂಜಾಬ್‌ನ ಫಿರೋಜ್‌ಪುರ ಲೋಕಸಭಾ ಕ್ಷೇತ್ರದ ಗುರುಹರ್ಸಹೈನ ಜೀವಾ ರಾಯ್ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡುವಾಗ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ.

ಫಿರೋಜ್‌ಪುರ ಡೆಪ್ಯುಟಿ ಕಮಿಷನರ್ ರಾಜೇಶ್ ಧಿಮಾನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸುರೀಂದರ್‌ ಕಾಂಬೋಜ್‌ ಮತದಾನದ ವೀಡಿಯೊವನ್ನು ವೈರಲ್‌ ಮಾಡಿದ್ದಾರೆ. ಈ ಕುರಿತು ಸುರೀಂದರ್‌ ಕಾಂಬೋಜ್‌ ಮತ್ತು ಅಪರಿಚಿತ ವ್ಯಕ್ತಿಯ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆ-1951 ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.

ಕಾಂಬೋಜ್ ಜಲಾಲಾಬಾದ್‌ನ ಎಎಪಿ ಶಾಸಕ ಜಗದೀಪ್ ಸಿಂಗ್ ಗೋಲ್ಡಿ ಕಾಂಬೋಜ್ ಅವರ ತಂದೆಯಾಗಿದ್ದಾರೆ. ಲೋಕಸಭೆ ಚುನಾವಣೆಯ ಕೊನೆಯ ಮತ್ತು 7ನೇ ಹಂತದ ಮತದಾನ ಇಂದು ಏಳು ರಾಜ್ಯಗಳು ಮತ್ತು ಒಂದು ಕೇಂದ್ರಡಾಳಿತ ಪ್ರದೇಶದ ಒಟ್ಟು 57 ಕ್ಷೇತ್ರಗಳಿಗೆ ನಡೆಯುತ್ತಿದೆ. ಉತ್ತರಪ್ರದೇಶ ಮತ್ತು ಪಂಜಾಬ್‌ನ 13 ಸ್ಥಾನಗಳು, ಪಶ್ಚಿಮ ಬಂಗಾಳದ 9, ಬಿಹಾರದ 8, ಒಡಿಶಾದ 6, ಹಿಮಾಚಲ ಪ್ರದೇಶದ 4, ಜಾರ್ಖಂಡ್‌ನ 3 ಮತ್ತು ಚಂಡೀಗಢದ ಏಕೈಕ ಲೋಕಸಭಾ ಸ್ಥಾನಕ್ಕೆ ಇಂದು ಮತದಾನ ನಡೆಯುತ್ತಿದೆ.

ವಿವಿಧ ಪಕ್ಷಗಳ ಅಭ್ಯರ್ಥಿಗಳು ಮತ್ತು ಪಕ್ಷೇತರರು ಸೇರಿ 904 ಮಂದಿ ಕಣದಲ್ಲಿದ್ದಾರೆ. ವಾರಣಾಸಿಯಿಂದ ಪ್ರಧಾನಿ ಮೋದಿ, ಹಿಮಾಚಲ ಪ್ರದೇಶದ ಹಮೀರ್‌ಪುರದಿಂದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಬಿಹಾರದ ಪಾಟ್ನಾ ಸಾಹಿಬ್‌ನಿಂದ ರವಿಶಂಕರ್ ಪ್ರಸಾದ್ ಮತ್ತು ಹಿಮಾಚಲ ಪ್ರದೇಶದ ಮಂಡಿಯಿಂದ ನಟಿ ಕಂಗನಾ ರನೌತ್ ಸೇರಿದಂತೆ ಇತರ ಪ್ರಮುಖ ಬಿಜೆಪಿ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಕಾಂಗ್ರೆಸ್‌ನ ಮನೀಶ್ ತಿವಾರಿ ಚಂಡೀಗಢದಿಂದ ಸ್ಪರ್ಧಿಸಿದ್ದರೆ, ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶದ ಮಂಡಿಯಿಂದ ಮತ್ತು ಅಜಯ್ ರಾಯ್ ವಾರಣಾಸಿಯಿಂದ ಕಣದಲ್ಲಿದ್ದಾರೆ. ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಕೊಲ್ಕತ್ತಾದ ಡೈಮಂಡ್ ಹಾರ್ಬರ್‌ನಿಂದ ಸ್ಪರ್ಧಿಸುತ್ತಿದ್ದಾರೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...