Homeಕರ್ನಾಟಕಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; 'ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ' ಎಂದ ಪರಮೇಶ್ವರ್

ಬಿಟಿಎಂ ಲೇಔಟ್‌ ಲೈಂಗಿಕ ದೌರ್ಜನ್ಯ ಪ್ರಕರಣ; ‘ದೊಡ್ಡ ನಗರಗಳಲ್ಲಿ ಅಲ್ಲೊಂದು ಇಲ್ಲೊಂದು ನಡೆಯುತ್ತವೆ’ ಎಂದ ಪರಮೇಶ್ವರ್

- Advertisement -
- Advertisement -

ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ ಪರಮೇಶ್ವರ, ಈ ಅಪರಾಧವನ್ನು ತಳ್ಳಿಹಾಕಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.”ಇಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಕಿರುಕುಳ ನಡೆಯುತ್ತವೆ” ಎಂದು  ಹೇಳಿದ್ದಾರೆ.

“ಇಂತಹ ದೊಡ್ಡ ನಗರದಲ್ಲಿ ಅಲ್ಲೊಂದು-ಇಲ್ಲೊಂದು ಘಟನೆಗಳು ನಡೆಯುತ್ತವೆ. ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ಕಾನೂನಿನ ಪ್ರಕಾರ ಮಾಡಲಾಗುತ್ತದೆ. ಬೀಟ್ ಪೆಟ್ರೋಲಿಂಗ್ ಅನ್ನು ಹೆಚ್ಚಿಸಲು ನಾನು ನಮ್ಮ ಆಯುಕ್ತರಿಗೆ ಸೂಚಿಸಿದ್ದೇನೆ” ಎಂದು ಗೃಹ ಸಚಿವರು ಹೇಳಿದರು.

ಈ ಘಟನೆ ಏಪ್ರಿಲ್ 3, 2025 ರಂದು ಬಿಟಿಎಂ ಲೇಔಟ್‌ನಲ್ಲಿ ನಡೆದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಯಲ್ಲಿ ಒಬ್ಬ ವ್ಯಕ್ತಿ ಮಹಿಳೆಯನ್ನು ಹಿಂಬಾಲಿಸುತ್ತಿರುವುದನ್ನು ತೋರಿಸಲಾಗಿದೆ, ಆಕೆಯ ಜೊತೆ ಮತ್ತೊಬ್ಬ ಮಹಿಳೆ ಇದ್ದಳು, ವಿಕೃತ ವ್ಯಕ್ತ ಮಹಿಳೆಯನ್ನು ಅಪ್ಪಿಕೊಂಡು ಪರಾರಿಯಾಗಿದ್ದಾನೆ.

ಘಟನೆಯ ಬಗ್ಗೆ ಆಕ್ರೋಶ ವ್ಯಕ್ತವಾದ ನಂತರ ಬೆಂಗಳೂರು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ, ಸಂತ್ರಸ್ತೆ ಇನ್ನೂ ದೂರು ದಾಖಲಿಸಿಲ್ಲ.

ಸೆಕ್ಷನ್ 354ಬಿ (ಮಹಿಳೆಯ ಮೇಲೆ ವಿವಸ್ತ್ರಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ವರ್ಷ, ಆಗಸ್ಟ್‌ನಲ್ಲಿ ಇದೇ ರೀತಿಯ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬೆಂಗಳೂರಿನ ಕೋಣನಕುಂಟೆ ಪ್ರದೇಶದಲ್ಲಿ ಬೆಳಗಿನ ನಡಿಗೆಯಲ್ಲಿ ಮಹಿಳೆಯೊಬ್ಬಳ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದ. ಕ್ಯಾಬ್ ಚಾಲಕನಾಗಿದ್ದ ಆರೋಪಿಯನ್ನು ಘಟನೆ ನಡೆದ ಎರಡು ದಿನಗಳ ನಂತರ ಬಂಧಿಸಲಾಯಿತು.

ಕಳೆದ ವರ್ಷ ಹಂಚಿಕೊಂಡ ಸರ್ಕಾರಿ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ 2023 ರಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಪೊಲೀಸರು 3,260 ಪ್ರಕರಣಗಳನ್ನು ದಾಖಲಿಸಿದ್ದಾರೆ, ಇದರಲ್ಲಿ 1,135 ಕಿರುಕುಳಕ್ಕೆ ಸಂಬಂಧಿಸಿದವು ಸೇರಿವೆ.

ಮುನಂಬಂ ವಕ್ಫ್ ಭೂ ವಿವಾದ; ಕೇರಳ ಸರ್ಕಾರದ ಸಮಿತಿ ರದ್ದತಿ ಆದೇಶಕ್ಕೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...