Homeಕರ್ನಾಟಕಬಿಟಿವಿ ಸುದ್ದಿವಾಹಿನಿಯ ಎಂ.ಡಿ ಕುಮಾರ್ ಬಂಧನ

ಬಿಟಿವಿ ಸುದ್ದಿವಾಹಿನಿಯ ಎಂ.ಡಿ ಕುಮಾರ್ ಬಂಧನ

- Advertisement -
- Advertisement -

ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಿಟಿವಿ ಸುದ್ದಿವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಜಿ.ಎಂ.ಕುಮಾರ್ ಅವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ.

ಅಶ್ವಿನ್‌ ಮಹೇಂದ್ರ ಹಾಗೂ ಜಿ.ಎಂ ಕುಮಾರ್ ಇಬ್ಬರೂ ಈಗಲ್‌ಸೈಟ್ ಮಿಡಿಯಾ ಕಂಪನಿ ಆರಂಭಿಸಿದ್ದರು. ಇಬ್ಬರೂ ಕಂಪನಿಯ ನಿರ್ದೇಶಕರಾಗಿದ್ದರು. ಕುಮಾರ್ ಕಾನೂನು ಬಾಹಿರವಾಗಿ ಆಡಳಿತ ಮಂಡಳಿ ಸಭೆ ನಡೆಸಿ ಅಶ್ವಿನ್ ಅವರ ದಾಖಲಾತಿಗಳನ್ನು ದುರ್ಬಳಕೆ ಮಾಡಿಕೊಂಡು ಬ್ಯಾಂಕ್‌ಗಳಲ್ಲಿ ಖಾತೆ ತೆರೆದು ಕೋಟಿಗೂ ಹೆಚ್ಚು ವಹಿವಾಟು ನಡೆಸಿದ್ದಾರೆಂದು ಕುಮಾರ್‌ ವಿರುದ್ಧ ಅಶ್ವಿನ್ ಮಹೇಂದ್ರ ಪ್ರಕರಣ ದಾಖಲಿಸಿದ್ದರು.

ಜಿ.ಎಂ. ಕುಮಾರ್ ವಿರುದ್ಧ ಐಪಿಸಿ 402 (ನಂಬಿಕೆ ದ್ರೋಹ) ಹಾಗೂ ಐಪಿಸಿ 420 (ವಂಚನೆ) ಆರೋಪದಡಿ  2022ರಲ್ಲಿ ವಿಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದ ಕುಮಾರ್ ಒಂದು ವರ್ಷದಿಂದ  ತಲೆಮರೆಸಿಕೊಂಡಿದ್ದರು. ನೋಟಿಸ್ ಜಾರಿ ಮಾಡಿದರೂ ವಿಚಾರಣೆಗೆ ಹೋಗಿರಲಿಲ್ಲ. ಈ ಹಿನ್ನೆಲೆ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಶನಿವಾರ ಮನೆಯ ಬಳಿ ವಾಕಿಂಗ್‌ ಹೋಗುತ್ತಿದ್ದಾಗ ಕುಮಾರ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ಈ ಕುರಿತು ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದರಿಂದ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಮುಂದಿನ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಇಸ್ರೇಲ್- ಹಮಾಸ್‌: ಒಪ್ಪಂದದ ಉಲ್ಲಂಘನೆ ಆರೋಪ, ಪ್ರತ್ಯಾರೋಪ; ಮತ್ತೆ ಯುದ್ಧದ ಭೀತಿ

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಆರೋಪಿ ಬ್ರಿಜ್ ಭೂಷಣ್ ಸಿಂಗ್ ಬದಲಿಗೆ ಮಗನಿಗೆ ಟಿಕೆಟ್ ಕೊಟ್ಟ ಬಿಜೆಪಿ

0
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಉತ್ತರ ಪ್ರದೇಶದ ಕೈಸರ್‌ಗಂಜ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಕೈಬಿಟ್ಟು, ಪುತ್ರ ಕರಣ್ ಭೂಷಣ್ ಸಿಂಗ್‌ಗೆ...