Homeಕರ್ನಾಟಕಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

ಬೌದ್ಧರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು: ಸಾಮಾಜಿಕ ಹೋರಾಟಗಾರ ಚೇತನ್

- Advertisement -
- Advertisement -

“ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು” ಎಂದು ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ವೇದಕಾಲದ ಸಾವಿರ ವರ್ಷಗಳ ಕಾಲ (1500-500 BCE), ಯಾವುದೇ ದೇವಾಲಯಗಳು ಇರಲಿಲ್ಲ. ಬುದ್ಧ ಮತ್ತು ಬೌದ್ಧ ಸ್ತೂಪಗಳು/ಪಗೋಡಗಳನ್ನು ಸಹಸ್ರಮಾನದವರೆಗೆ ಶಾಶ್ವತಗೊಳಿಸಿದ ನಂತರ, ಹಿಂದೂ ದೇವಾಲಯಗಳು ಅಸ್ತಿತ್ವಕ್ಕೆ ಬಂದವು” ಎಂದಿದ್ದಾರೆ.

ಮುಂದುವರಿದು, “ಹಿಂದುತ್ವವು ಇಸ್ಲಾಮಿಕ್ ಮಸೀದಿಗಳ ಮೇಲೆ ಹಸ್ತಕ್ಷೇಪ ಮಾಡಿದರೆ, ಬೌದ್ಧರು ಅನೇಕ ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು’’ ಎಂದು ಅವರು ಪ್ರತಿಪಾದಿಸಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ, “ಬುಧವಾರ ದಕ್ಷಿಣ ಕನ್ನಡದಲ್ಲಿ ‘ಕಾಂತಾರ’ ಚಿತ್ರವನ್ನು ವೀಕ್ಷಿಸುತ್ತಿದ್ದ ಮುಸ್ಲಿಂ ದಂಪತಿಗಳನ್ನು, ಧರ್ಮಾಂಧ ಮುಸ್ಲಿಂ ಯುವಕರು ಬೆದರಿಸಿ ಅವರ ಮೇಲೆ ಹಲ್ಲೆ ನಡೆಸಿದರು. ಈ ಚಲನಚಿತ್ರವು ‘ಹಿಂದೂ ಸಂಸ್ಕೃತಿ’ಯನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

“ಸಾಂಸ್ಕೃತಿಕ/ಸೈದ್ಧಾಂತಿಕ ಬಹುತ್ವವೇ ನಮ್ಮ ರಾಷ್ಟ್ರದ ತಳಹದಿ. ಇಂತಹ ಅಸಹಿಷ್ಣುತೆ ಮತ್ತು ಮೂಲಭೂತ ಹಕ್ಕುಗಳ ನಿರಾಕರಣೆಗಳನ್ನು ನಾವು ಖಂಡಿಸುತ್ತೇವೆ” ಎಂದು ಚೇತನ್ ಹೇಳಿದ್ದಾರೆ.

ಇತ್ತೀಚೆಗೆ ಕಾಂತಾರ ಸಿನಿಮಾ ಕುರಿತು ಮಾತನಾಡಿ ಚೇತನ್‌ ಚರ್ಚೆಯಲ್ಲಿದ್ದರು. “ನಮ್ಮ ಕನ್ನಡ ಚಿತ್ರ ‘ಕಾಂತಾರ’ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿ ತಂದಿದೆ. ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಇದು ನಿಜವಲ್ಲ” ಎಂದು ಪೋಸ್ಟ್‌ ಮಾಡಿದ್ದರು.

“ನಮ್ಮ ಪಂಬದ/ನಲಿಕೆ/ಪರವ ಬಹುಜನ ಸಂಪ್ರದಾಯಗಳಾಗಿವೆ. ವೈದಿಕ-ಬ್ರಾಹ್ಮಣೀಯ ಹಿಂದೂ ಧರ್ಮಕ್ಕಿಂತ ಇವು ಹಿಂದಿನವುಗಳಾಗಿವೆ. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲಾಗಲೀ, ಅದರಾಚೆಯಾಗಲೀ ಸತ್ಯಸಂಗತಿಗಳೊಂದಿಗೆ ತೋರಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದರು.

ಹಿಂದೂ ದೇವಾಲಯವಲ್ಲ: ಮದ್ರಾಸ್ ಕೋರ್ಟ್ ತೀರ್ಪು

ಹಿಂದೂ ದೇವಾಲಯಗಳ ಇತಿಹಾಸ ಕೆದಕಿದರೆ ಬೌದ್ಧಸ್ತೂಪಗಳು ದೊರಕುತ್ತವೆ ಎಂಬ ಚರ್ಚೆ ಮೊದಲಿನಿಂದಲೂ ಇದ್ದು, “ತಮಿಳುನಾಡಿನ ಸೇಲಂ ಜಿಲ್ಲೆಯ ಪೆರಿಯೇರಿ ಗ್ರಾಮದ ಕೊಟ್ಟೈ ರಸ್ತೆಯಲ್ಲಿರುವ ದೇವಾಲಯದೊಳಗಿನ ವಿಗ್ರಹ ಬುದ್ಧನದ್ದಾಗಿದೆ” ಎಂದು ಮದ್ರಾಸ್ ಹೈಕೋರ್ಟ್ ಕೆಲವು ತಿಂಗಳ ಹಿಂದೆ ಹೇಳಿತ್ತು.

ದೇವಾಲಯದಲ್ಲಿರುವ ವಿಗ್ರಹವನ್ನು ಈಗ ‘ತಲೈವೆಟ್ಟಿ ಮುನಿಯಪ್ಪನ್’ ಎಂದು ಪೂಜಿಸಲಾಗುತ್ತಿದೆ. ಸೇಲಂ ಮೂಲದ ಬುದ್ಧ ಟ್ರಸ್ಟ್‌ನ ಮನವಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದ್ದು, ಈ ವಿಗ್ರಹವು ಬುದ್ಧನ ವಿಗ್ರಹವಾಗಿದೆ ಎಂದು 2017ರಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಜುಲೈ 28, 2021ರಂದು ಪುರಾತತ್ತ್ವ ಶಾಸ್ತ್ರದ ತಂಡವು ವಿಗ್ರಹವನ್ನು ಪರಿಶೀಲಿಸಿತು. ವಿಗ್ರಹವನ್ನು ಶುಚಿಗೊಳಿಸಿದ ನಂತರ ವಿಗ್ರಹದ ಮೇಲಿನ ಹಲವು ಚಿಹ್ನೆಗಳು ಕಂಡುಬಂದಿದ್ದವು.

“ಅಂತಹ ವರದಿಯನ್ನು ಸ್ವೀಕರಿಸಿದ ನಂತರ, ಈ ಶಿಲ್ಪವನ್ನು ತಲೈವೆಟ್ಟಿ ಮುನಿಯಪ್ಪನ್ ಎಂದು ಪರಿಗಣಿಸಲು ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಅನುಮತಿ ನೀಡುವುದು ಸೂಕ್ತವಲ್ಲ” ಎಂದು ನ್ಯಾಯಮೂರ್ತಿ ವೆಂಕಟೇಶ್ ಆದೇಶದಲ್ಲಿ ಬರೆದಿದ್ದರು. “ಶಿಲ್ಪವು ಬುದ್ಧನದು ಎಂಬ ತೀರ್ಮಾನಕ್ಕೆ ಬಂದ ನಂತರವೂ ಇದು ಹಿಂದೂ ದೇವರೆಂದು ಮುಂದುವರಿಯಲು ಅನುಮತಿಸಲಾಗುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

“ವಿಗ್ರಹವನ್ನು ಅದರ ಮೂಲ ಸ್ವರೂಪಕ್ಕೆ ಮರುಸ್ಥಾಪಿಸಬೇಕು” ಎಂದು ಧಾರ್ಮಿಕ ದತ್ತಿ ಇಲಾಖೆಗೆ ಹೈಕೋರ್ಟ್ ಆದೇಶಿಸಿದ್ದು, ಈ ದೇವಾಲಯದ ಒಳಗೆ ಬುದ್ಧನ ವಿಗ್ರಹ ಎಂದು ಬೋರ್ಡ್ ಹಾಕಬೇಕು ಎಂದು ಸೂಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಬೌದ್ದರು ಹಿಂದೂ ದೇವಾಲಯಗಳ ಮೇಲೆ ಹಕ್ಕು ಸಾಧಿಸಬಹುದು ಎನ್ನುವ ಪ್ರತಿಪಾದನೆ ಸರಿ ಇದೆ. ಆ ದಿಕ್ಕಿನಲ್ಲಿ ಯೋಚಿಸಬೇಕು.👍💐

  2. ಹಿಂದೂ ದೇವಾಲಯಗಳ ಮೇಲೆ ದಾಳಿ ಮಾಡಿ ವಿಙ್ನಾನದಿಂದ ಅವರ ಕಸ್ಸೇಸ್ ಪರೀಕ್ಷೆಗೆ ಅವರ ದುಡ್ಡು ತೇಗೆದುಕೊಂಡು ಸರ್ಟೀಪಿಕೇಟ್ ಹೊಂದಿದವರು ಪೂಜೆ ಮಾಡಲು ಅರ್ಹತೆ ಹೊದಿರುವರು ಎಂದು ಗುರುತಿಸಬಹುದು ಮಾಂತ್ರಿಕ ರಿಂದ ಆಗುವ ಶೋಷಣೆ ತಡೆಯಬಹುದು ಜೀವವುಳ್ಳ ದೇವರನ್ನು ಆರಾಧಿಸುವ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...