Homeಮುಖಪುಟಬಜೆಟ್‌ ಪ್ರತಿಯಲ್ಲಿ '₹' ಬದಲಿಗೆ 'ரூ' ಬಳಕೆ | ಸ್ಟಾಲಿನ್ ನಿರ್ಧಾರ ಶ್ಲಾಘಿಸಿ ಪತ್ರ ಬರೆದ...

ಬಜೆಟ್‌ ಪ್ರತಿಯಲ್ಲಿ ‘₹’ ಬದಲಿಗೆ ‘ரூ’ ಬಳಕೆ | ಸ್ಟಾಲಿನ್ ನಿರ್ಧಾರ ಶ್ಲಾಘಿಸಿ ಪತ್ರ ಬರೆದ ಕರವೇ!

- Advertisement -
- Advertisement -

ಕಳೆದ 16 ವರ್ಷಗಳಿಂದ ಕೇಂದ್ರ ಸರ್ಕಾರ ಅಧಿಕೃತವಾಗಿ ಬಳಸುತ್ತಿರುವ ದೇವನಾಗರಿ ಲಿಪಿಯ ರೂಪಾಯಿ ಚಿಹ್ನೆಯನ್ನು ಬಜೆಟ್‌ ಪ್ರತಿಯಲ್ಲಿ ತಮಿಳು ಲಿಪಿ ರೂಪಾಯಿ ಚಿಹ್ನೆಯೊಂದಿಗೆ ಬದಲಾಯಿಸಿದ ತಮಿಳುನಾಡು ಸರ್ಕಾರದ ನಿರ್ಧಾರವನ್ನು ಕನ್ನಡ ರಕ್ಷಣಾ ವೇದಿಕೆ (ಕರವೇ) ಶ್ಲಾಘಿಸಿದ್ದು, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದಿದೆ.  

ತಮಿಳುನಾಡಿನ ದ್ರಾವಿಡ ಚಳುವಳಿಯನ್ನು ‘ಇಡೀ ದಕ್ಷಿಣ ಭಾರತದ ದ್ರಾವಿಡ ಭಾಷಿಕರ ಹೆಮ್ಮೆ’ ಎಂದು ಪತ್ರದಲ್ಲಿ ಕರವೇ ಕರೆದಿದ್ದು, ಎಲ್ಲಾ ದಕ್ಷಿಣ ರಾಜ್ಯಗಳು ದ್ರಾವಿಡ ಭಾಷೆಗಳ ಉಳಿವಿಗಾಗಿ ಒಗ್ಗಟ್ಟಿನಿಂದ ಹೋರಾಡುವುದು ಮತ್ತು ತಮಿಳುನಾಡಿನ ಮಾದರಿಯನ್ನು ಅನುಸರಿಸುವುದು ಕಡ್ಡಾಯವಾಗಿದೆ ಎಂದು ಅದು ಪತ್ರದಲ್ಲಿ ತಿಳಿಸಿದೆ. ಬಜೆಟ್‌ ಪ್ರತಿಯಲ್ಲಿ

ಮಾರ್ಚ್ 14 ರಂದು ವಿಧಾನಸಭೆಯಲ್ಲಿ ಮಂಡಿಸಲಾದ 2025-26 ರ ಬಜೆಟ್‌ನ ಪ್ರತಿಯಲ್ಲಿ ತಮಿಳುನಾಡಿನ ಡಿಎಂಕೆ ಸರ್ಕಾರವು ರೂಪಾಯಿ ಲೋಗೋವನ್ನು ದೇವನಾಗರಿ ರೂಪಾಯಿ ಚಿಹ್ನೆಯಿಂದ ತಮಿಳು ಅಕ್ಷರದೊಂದಿಗೆ ಬದಲಾಯಿಸಿತ್ತು.

“ಒಬ್ಬ ಹೆಮ್ಮೆಯ ಭಾರತೀಯ ಮತ್ತು ಕನ್ನಡಿಗನಾಗಿ, ನಾನು ಈ ಹೆಜ್ಜೆಯನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಈ ದಿಟ್ಟ ಕ್ರಮಕ್ಕಾಗಿ ನಿಮ್ಮನ್ನು ಅಭಿನಂದಿಸುತ್ತೇನೆ. ನಿಮ್ಮ ಕಡೆಗೆ ಯಾವುದೇ ಟೀಕೆಗಳು ಮತ್ತು ಪ್ರತಿರೋಧಗಳು ಬಂದರೂ, ಉತ್ತರ ಭಾರತೀಯರು ಹಿಂದಿ ಹೇರುತ್ತಿರುವ ನಿರಂತರ ಪ್ರಯತ್ನಗಳಿಗೆ ನೀವು ನೀಡಿರುವ ಈ ಸಾಂಕೇತಿಕ ಪ್ರತಿರೋಧ ನಿಜಕ್ಕೂ ಶ್ಲಾಘನೀಯ” ಎಂದು ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು ಮಾರ್ಚ್ 15 ರಂದು ಹೇಳಿದ್ದಾರೆ.

“ಕೇಂದ್ರ ಸರ್ಕಾರ ಮತ್ತು ಉತ್ತರ ಭಾರತದ ಹಿಂದಿ ಲಾಭಕೋರರು ‘ರಾಷ್ಟ್ರೀಯ ಭಾಷೆ’ಯನ್ನಾಗಿ ಮಾಡುವ ನೆಪದಲ್ಲಿ ಇಡೀ ದೇಶದ ಕೋಟ್ಯಂತರ ಹಿಂದಿಯೇತರ ಭಾಷಿಕರ ಮೇಲೆ ನಿರಂತರವಾಗಿ ಹಿಂದಿ ಹೇರುತ್ತಿದ್ದಾರೆ ಅಥವಾ ಬಲವಂತಪಡಿಸುತ್ತಿದ್ದಾರೆ. ಅವರು ತ್ರಿಭಾಷಾ ಸೂತ್ರವನ್ನು ಹೇರುತ್ತಿದ್ದು, ಇತರ ಭಾರತೀಯ ಭಾಷೆಗಳನ್ನು ಕತ್ತು ಹಿಸುಕುತ್ತಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಮೂಲಕವೂ ಹಿಂದಿ ಹೇರಿಕೆ ಮಾಡಲಾಗುತ್ತಿದೆ.” ಎಂದು ನಾರಾಯಣ ಗೌಡ ಅವರು ಪತ್ರದಲ್ಲಿ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ

ಇದೇ ವೇಳೆ ಸಿದ್ದರಾಮಯ್ಯ ಅವರಿಗೂ ಪತ್ರ ಬರೆದಿರುವ ಅವರು, ತಮಿಳುನಾಡು ಸರ್ಕಾರದ ಮಾದರಿಯನ್ನು ಅನುಸರಿಸಿ, ದೇವನಾಗರಿ ಲಿಪಿಯ ರೂಪಾಯಿ ಚಿಹ್ನೆಯ ಬದಲಿಗೆ ಕನ್ನಡ ಲಿಪಿಯ ರೂಪಾಯಿ ಚಿಹ್ನೆಯನ್ನು ಸಿದ್ಧಪಡಿಸಿ ಬಳಸಬೇಕೆಂದು ಒತ್ತಾಯಿಸಿದ್ದಾರೆ. ಜೊತೆಗೆ, ಹಿಂದಿ ಹೇರಿಕೆ ವಿಷಯದ ಬಗ್ಗೆ ಕನ್ನಡಿಗರ ಪರವಾಗಿ ನಿಂತಿರುವ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ಗದಗ: ಹೋಳಿಯಲ್ಲಿ ರಾಸಾಯನಿಕ ಮಿಶ್ರಿತ ಬಣ್ಣ; ಉಸಿರಾಟದ ತೊಂದರೆಯಿಂದ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...