Homeಮುಖಪುಟಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು - ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು – ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

"ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು? - GDP ಕುಸಿತದ ಬಗ್ಗೆ ಸಿದ್ದರಾಮಯ್ಯ ವಾಗ್ದಾಳಿ"

- Advertisement -
- Advertisement -

ಕೇಂದ್ರ ಸರ್ಕಾರ 2021ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಇದರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. “ಇಲ್ಲಿ ವಿವರಗಳನ್ನು ಬಿಚ್ಚಿಟ್ಟಿದ್ದಕ್ಕಿಂತ ಮುಚ್ಚಿಟ್ಟಿದ್ದೇ ಹೆಚ್ಚು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಪರಿಹಾರಕ್ಕಾಗಿ ‘ಆತ್ಮನಿರ್ಭರ’ ಹೆಸರಲ್ಲಿ ಮೂರು ಪ್ಯಾಕೇಜ್‌ಗಳನ್ನು ನೀಡಿದ್ದರು. ಅದರ ಮುಂದುವರಿದ ಭಾಗವಾಗಿ ‘ಆತ್ಮಬರ್ಬರ’ ಬಜೆಟ್ ನೀಡಿದ್ದಾರೆ. ಇದೊಂದು ರೀತಿಯಲ್ಲಿ ‘ಆತ್ಮ ಬರ್ಬಾದ್’ (ವಿನಾಶ) ಬಜೆಟ್ ಕೂಡಾ ಹೌದು. ಕೊರೊನಾದಿಂದಾಗಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗಿದೆ, ರೈತರ ಬೆಳೆಗೆ ಬೆಲೆ ಇಲ್ಲದೆ ದಿವಾಳಿ ಸ್ಥಿತಿಯಲ್ಲಿದ್ದಾರೆ, ಉದ್ಯಮಿಗಳು ಮಾರುಕಟ್ಟೆ ಇಲ್ಲದೆ ಕಷ್ಟದಲ್ಲಿದ್ದಾರೆ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಯಾವ ನಿರ್ದಿಷ್ಠ ಕ್ರಮಗಳು 2021-22ರ ಸಾಲಿನ ಬಜೆಟ್ ನಲ್ಲಿ ಇಲ್ಲ” ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

ಕೊರೊನಾದಿಂದಾಗಿ ನೆಲಕಚ್ಚಿರುವ ಆರ್ಥಿಕತೆಯ ಚೇತರಿಕೆಗಾಗಿ ಜನರ ಕೈಗೆ ದುಡ್ಡು ಸೇರುವಂತೆ ಮಾಡಬೇಕೆಂಬುದು ನಮ್ಮ ದೇಶದ ಮತ್ತು ಅಂತರರಾಷ್ಟ್ರೀಯ ಆರ್ಥಿಕ ತಜ್ಞರೆಲ್ಲರೂ ಸೂಚಿಸಿದ್ದ ಸಾಮಾನ್ಯ ಪರಿಹಾರ. ನಿರ್ಮಲಾ ಸೀತಾರಾಮನ್ ಜನರಿಂದ ಇನ್ನಷ್ಟು ಹಣವನ್ನು ಕಿತ್ತುಕೊಳ್ಳಲು ಹೊರಟಿದ್ದಾರೆಯೇ ಹೊರತು ಅವರ ಜೇಬಿಗೆ ಏನನ್ನೂ ಹಾಕಿಲ್ಲ. ತೆರಿಗೆ ಎನ್ನುವುದು ಬಜೆಟ್‌ಗಳ ಸಾಮಾನ್ಯ ಭಾಗ. ಪ್ರಮುಖವಾಗಿ ತೆರಿಗೆಗಳ ಮೂಲಕವೇ ಸರ್ಕಾರ ತನ್ನ ವೆಚ್ಚಕ್ಕೆ ಬೇಕಾದ ಸಂಪನ್ಮೂಲವನ್ನು ಕ್ರೋಡೀಕರಿಸುತ್ತದೆ. ಆದರೆ ನಿರ್ಮಲಾ ಸೀತಾರಾಮನ್ ಅವರು ನೇರವಾಗಿ ಹೆಚ್ಚು ತೆರಿಗೆ ವಿಧಿಸದೆ, ಕೃಷಿ ಮೂಲಸೌಕರ್ಯ ಸೆಸ್ ಹೇರಿ ರೈತರ ಹೆಸರಲ್ಲಿ ಪರೋಕ್ಷವಾಗಿ ಸಂಪನ್ಮೂಲ ಕ್ರೋಡಿಕರಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ.

“ಪೆಟ್ರೋಲ್, ಡೀಸೆಲ್, ರಸಗೊಬ್ಬರ, ಕಲ್ಲಿದ್ದಲು, ಪಾಮ್ ಆಯಿಲ್, ಕಡಲೆ, ಬಟಾಣಿ, ಹತ್ತಿಯಿಂದ ಹಿಡಿದು ಸೇಬು, ಮದ್ಯದ ವರೆಗೆ ಎಲ್ಲದರ ಮೇಲೂ ಶೇಕಡಾ 2.5 ರಿಂದ ಹಿಡಿದು ಶೇಕಡಾ 100 ರವರೆಗೆ ಕೃಷಿ ಸೆಸ್ ಹೇರಲಾಗಿದೆ. ಇದರಿಂದಾಗುವ ಬೆಲೆ ಏರಿಕೆಗೆ ರೈತರೂ ಸೇರಿದಂತೆ ಎಲ್ಲರೂ ತಲೆಕೊಡಬೇಕಾಗುತ್ತದೆ. ಕೃಷಿ ಮೂಲಸೌಕರ್ಯ ಸೆಸ್ ನಿಂದಾಗಿ ಬೆಲೆ ಏರಿಕೆಯಾದಾಗ ಜನ ಸರ್ಕಾರವನ್ನಲ್ಲ; ರೈತರನ್ನು ದೂರತೊಡಗುತ್ತಾರೆ. ಈ ಮೂಲಕ ಬೆಲೆ ಏರಿಕೆಗೆ ಕೃಷಿ ಸೆಸ್ ಕಾರಣ ಎಂಬ ಜನಾಭಿಪ್ರಾಯವನ್ನು ಮೂಡಿಸಿ ಜನರನ್ನು ರೈತರ ವಿರುದ್ದ ಎತ್ತಿಕಟ್ಟುವ ಹೀನ ಕೃತ್ಯವನ್ನು ಬಿಜೆಪಿ ಸರ್ಕಾರ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರೈತ ಹೋರಾಟ ತಡೆಯಲು ದಾರಿಯಲ್ಲಿ ಮುಳ್ಳುಕಂಬ ನೆಡುತ್ತಿರುವ ಕೇಂದ್ರ ಸರ್ಕಾರ!

“ಕೃಷಿ ಮೂಲಸೌಕರ್ಯ ಸೆಸ್‌ನಿಂದಾಗಿ ಸಂಗ್ರಹವಾಗುವ ಹಣ ಎಷ್ಟು? ಇದನ್ನು ಬಳಸಿಕೊಂಡು ಕೃಷಿಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಲಿರುವ ಮೂಲಸೌಕರ್ಯಗಳ ಯೋಜನೆಗಳೇನು ಎಂಬ ಬಗ್ಗೆ 65 ಪುಟಗಳ ಬಜೆಟ್ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖ ಇಲ್ಲ. ನೀರಾವರಿ, ಶೈತ್ಯಾಗಾರ, ದಾಸ್ತಾನು ಮಳಿಗೆ ಹೀಗೆ ಯಾವುದೇ ನಿರ್ದಿಷ್ಠ ಯೋಜನೆಗಳನ್ನು ಘೋಷಿಸಿಲ್ಲ. ನೀರಾವರಿ ಯೋಜನೆಗಳು, ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆ ರಕ್ಷಣೆಗೆ ಕ್ರಮಗಳು, ಕಡಿಮೆ ಬಡ್ಡಿದರದಲ್ಲಿ ಸಾಲ, ಕಡಿಮೆ ಬೆಲೆಯಲ್ಲಿ ಬೀಜ-ಗೊಬ್ಬರ ಸೇರಿದಂತೆ ರೈತರ ಅವಶ್ಯಕತೆಗಳನ್ನು ಪೂರೈಸುವ ಯಾವ ಯೋಜನೆಗಳೂ ಬಜೆಟ್ ನಲ್ಲಿ ಇಲ್ಲ” ಎಂದು ಆರೋಪಿಸಿದ್ದಾರೆ.

ದೇಶಾದ್ಯಂತ ರೈತರು ಕಡಿಮೆ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುವ ಯೋಜನೆಯ ಬಗ್ಗೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿಯಾಗಬೇಕಾದರೆ ಕಡಿಮೆ ಬಡ್ಡಿ ದರದ ಸಾಲ ಸೌಲಭ್ಯ ಸಿಗಬೇಕು. ಇದರ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಇಲ್ಲ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕೃಷಿ ಸಾಲವನ್ನು ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಕಳೆದ 7 ವರ್ಷಗಳಿಂದ ರೈತರು ಮಾಡುತ್ತಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ಮಾಡಿದ್ದ ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೇ ಕೊನೆ. ಈ ಸಾಲಮನ್ನಾ ಮಾಡಿದ್ದರೆ ಸಂಕಷ್ಟದಲ್ಲಿರುವ ರೈತರು ಸ್ವಲ್ಪ ನಿರಾಳವಾಗುತ್ತಿದ್ದರು ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಶೃಂಗೇರಿಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗಳಲ್ಲಿ ಬಹುಪಾಲು ಸಂಘಪರಿವಾರದವರು

ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಚಾಲನೆ ನೀಡಿರುವುದು ರೈತರು ಸೇರಿದಂತೆ ಎಲ್ಲ ವರ್ಗದ ಜನಗಳ ಮೇಲೆ ಇನ್ನೊಂದು ಹೊಡೆತ. ಖಾಸಗೀಕರಣಗೊಂಡರೆ ರೈತರಿಗೆ ಈಗ ಲಭ್ಯ ಇರುವ ಉಚಿತ ವಿದ್ಯುತ್ ಖಂಡಿತ ಕಡಿತ ಆಗಲಿದೆ. ಇದರ ಜೊತೆಗೆ ಸಾಮಾನ್ಯ ಜನರ ಮನೆ ಬಳಕೆಯ ವಿದ್ಯುತ್ ಕೂಡಾ ದುಬಾರಿಯಾಗಲಿದೆ. ಉದ್ಯಮಿಗಳ ಮೇಲೆಯೂ ಹೆಚ್ಚಿನ ಹೊರೆ ಬೀಳಲಿದೆ. ವಿಮಾ ಕ್ಷೇತ್ರದಲ್ಲಿ 74% ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಅಪಾಯಕಾರಿಯಾದ ಬೆಳವಣಿಗೆ. ನಮ್ಮಲ್ಲಿ ಬಹಳ ದುರ್ಬಲವಾದ ಸಾಮಾಜಿಕ ಭದ್ರತಾ ವ್ಯವಸ್ಥೆಯಿದೆ. ವಯಸ್ಸಾದವರು ಮತ್ತು ನಿವೃತ್ತರು ತಮ್ಮ ಆರೋಗ್ಯ ಭದ್ರತೆಗಾಗಿ ವಿಮೆಯನ್ನು ನಂಬಿದ್ದಾರೆ. ಈ ಕ್ಷೇತ್ರದ ಖಾಸಗೀಕರಣದಿಂದಾಗಿ ವಿಮೆಯಿಂದಲೂ ಭದ್ರತೆ ಇಲ್ಲದಂತಾಗುವ ದಿನ ದೂರ ಇಲ್ಲ ಎಂದು ಕೇಂದ್ರ ಸರ್ಕಾರದ ಖಾಸಗೀಕರಣ ನೀತಿಯ ವಿರುದ್ಧ ಹರಿಹಾಯ್ದಿದ್ದಾರೆ.

ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ಸಂಸದರಾಗಿದ್ದರೂ ಬಜೆಟ್‌ನಲ್ಲಿ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಲಾಗಿದೆ. ಮೆಟ್ರೋ ಮತ್ತು ಬೆಂಗಳೂರು-ಚೆನ್ನೈ ಕಾರಿಡಾರ್‌ಗೆ ನೀಡಿರುವ ಅನುದಾನ ಹೊಸದೇನಲ್ಲ. ಉಳಿದಂತೆ ಹಣಕಾಸು ಸಚಿವರು ಒಮ್ಮೆಯೂ ಕರ್ನಾಟಕದ ಹೆಸರನ್ನೂ ಕೂಡಾ ಎತ್ತಿಲ್ಲ. ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದವರಿಗೆ ಯಾವುದೇ ಪರಿಹಾರ ಬಜೆಟ್‌ನಿಂದ ಸಿಕ್ಕಿಲ್ಲ. ಚುನಾವಣೆ ನಡೆಯುವ ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಅಸ್ಸಾಂ ರಾಜ್ಯಗಳಿಗೆ ಹೆಚ್ಚು ಹಣ ನೀಡಲಾಗಿದೆ. ಪ್ರತಿ ವರ್ಷ ಚುನಾವಣೆ ನಡೆಸಿದರೆ ನಮಗೂ ಹೆಚ್ಚಿನ ಅನುದಾನ ನೀಡಬಹುದು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಅಘೋಷಿತ ತುರ್ತುಪರಿಸ್ಥಿತಿ ಜಾರಿ: ಹೋರಾಟಗಾರರ ಟ್ವಿಟರ್ ಅಮಾನತ್ತಿಗೆ ವಿರೋಧ

“ವಿತ್ತೀಯ ಕೊರತೆ ಶೇ. 3.5ಕ್ಕೆ ತರುವುದಾಗಿ ಹೇಳಿದ್ದರು. ಈಗ ಶೇ. 9.7ಕ್ಕೆ ಏರಿದೆ. ಇದರಿಂದ ಹೆಚ್ಚು ಸಾಲ ಮಾಡಬೇಕಾಗುತ್ತದೆ. ನನ್ನ ಪ್ರಕಾರ ವಿತ್ತೀಯ ಕೊರತೆ ಶೇ.14-15 ಇದೆ. ನರೇಂದ್ರ ಮೋದಿಯವರು ಅವರು ಪ್ರಧಾನಿಯಾದ ಬಳಿಕ ಜಿಡಿಪಿ ಬೆಳವಣಿಗೆ ಕುಸಿಯುತ್ತಲೇ ಇದೆ. ಡಾ. ಮನಮೋಹನಸಿಂಗ್ ಅವರ ಅವಧಿಯಲ್ಲಿ ಇದ್ದಿದ್ದಕ್ಕಿಂತ ಕಡಿಮೆಯಾಗುತ್ತಿದೆ. ಈ ವರ್ಷ ಕೊರೊನಾ ಸಂಕಷ್ಟ ಎದುರಾಗಿತ್ತು. ಆದರೆ, ಕಳೆದ ವರ್ಷ ಏನಾಗಿತ್ತು? ನಿರುದ್ಯೋಗ ಪ್ರಮಾಣ ನಗರದಲ್ಲಿ ಶೇ.9.2 ಇತ್ತು. ಇದರಿಂದ ಯುವಕರಿಗೆ ಉದ್ಯೋಗ ಎಲ್ಲಿ ಸಿಗುತ್ತದೆ. ಅವರು ಪಕೋಡಾ ಮಾರಲು ಹೋಗಬೇಕಾಗುತ್ತದೆ. ಈ ವರ್ಷ ಜಿಡಿಪಿ ಬೆಳವಣಿಗೆ -7.7% ಆಗಿದೆ” ಎಂದು ಹೇಳಿದ್ದಾರೆ.

“2020-2021ನೇ ಸಾಲಿಗೆ ಜಿಡಿಪಿ ಬೆಳವಣಿಗೆಯನ್ನು ಶೇ.11ಕ್ಕೆ ಏರಿಸುವುದಾಗಿ ಕೇಂದ್ರ ಘೋಷಣೆ ಮಾಡಿದೆ. ಇದು ನಂಬಲು ಸಾಧ್ಯವೇ? ಇದು ಸುಳ್ಳಿನ ಕಂತೆ. ಅಂಕಿ-ಅಂಶಗಳನ್ನು ನೀಡದೆ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಇದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ವಿವರಗಳನ್ನು ಬಿಚ್ಚಿಟ್ಟದ್ದಕ್ಕಿಂತ ಮುಚ್ಚಿಟ್ಟದ್ದೇ ಹೆಚ್ಚು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಅಬಕಾರಿ ಸುಂಕ ಹೆಚ್ಚಿಸಲಾಗಿದೆ. 80 ಕೋಟಿ ಮಂದಿಗೆ ಅಂದರೆ ಶೇ. 80ರಷ್ಟು ಮಂದಿಗೆ ಪಡಿತರ ಚೀಟಿ ಮೂಲಕ ಆಹಾರ ಧಾನ್ಯ ನೀಡಲಾಗುತ್ತಿದೆ. ಶಾಂತಕುಮಾರ್ ಅವರ ಸಮಿತಿ ವರದಿ ಜಾರಿಗೆ ತಂದರೆ ಶೇ.20ರಷ್ಟು ಮಂದಿ ಮಾತ್ರ ಪಡಿತರ ಮೂಲಕ ಆಹಾರ ಧಾನ್ಯ ಪಡೆಯಲು ಅರ್ಹರಾಗುತ್ತಾರೆ. ರೈಲ್ವೆ ನಿಲ್ದಾಣ, ಬಂದರು, ವಿಮಾನ ನಿಲ್ದಾಣಗಳನ್ನು ಅಂಬಾನಿ, ಅಂದಾನಿ ಮೊದಲಾದ ಉದ್ಯಮಿಗಳಿಗೆ ಮಾರಲು ಪ್ರಧಾನಿ ಮೋದಿ ಹೊರಟಿದ್ದಾರೆ. ಇದರಿಂದ ದೇಶ ತನ್ನ ಆಸ್ತಿ ಕಳೆದುಕೊಳ್ಳುವುದಲ್ಲದೆ, ತಳಸಮುದಾಯಗಳು ಮೀಸಲಾತಿ ಸೌಲಭ್ಯವನ್ನೂ ಕಳೆದುಕೊಳ್ಳಲಿವೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? ‘ಹರ್ ಹರ್ ಮಹಾದೇವ್, ಅಲ್ಲಾಹು ಅಕ್ಬರ್’…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...