Homeಮುಖಪುಟಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ಈಗಾಗಲೇ ಲಕ್ಷಾಂತರ ಜನರು ದೆಹಲಿ ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ- ದರ್ಶನ್ ಪಾಲ್

- Advertisement -
- Advertisement -

ರೈತರ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯ ಮುನ್ನಾ ದಿನ ದೆಹಲಿಯ ರೈತ ಮುಖಂಡರು ತಮ್ಮ ಹೋರಾಟದ ಮುಂದಿನ ನಡೆಯನ್ನು ಘೋಷಿಸಿದ್ದಾರೆ. ಫೆಬ್ರವರಿ 01 ರಂದು ಕೇಂದ್ರ ಬಜೆಟ್ ಮಂಡನೆಯ ದಿನ ಪಾರ್ಲಿಮೆಂಟ್‌ಗೆ ಪಾದಯಾತ್ರೆ ನಡೆಸುವ ಮೂಲಕ ಹೋರಾಟ ತೀವ್ರಗೊಳಿಸುವುದಾಗಿ ರೈತರು ಘೋಷಿಸಿದ್ದಾರೆ.

ಕ್ರಾಂತಿಕಾರಿ ಕಿಸಾನ್ ಯೂನಿಯನ್‌ನ ಅಧ್ಯಕ್ಷ ದರ್ಶನ್ ಪಾಲ್ ಮಾತನಾಡಿ ” ಫೆಬ್ರವರಿ 01 ರಂದು ದೆಹಲಿಯ ವಿವಿಧ ಭಾಗಗಳಿಂದ ರೈತರು ಪಾರ್ಲಿಮೆಂಟ್ ಕಡೆಗೆ ಪಾದಯಾತ್ರೆ ನಡೆಸುತ್ತೇವೆ. ಕರಾಳ ಕಾನೂನುಗಳು ರದ್ದಾಗುವವರೆಗೂ ಹೋರಾಟ ಮುಂದುವರೆಯಲಿದೆ’ ಎಂದು ತಿಳಿಸಿದ್ದಾರೆ.

“ನಾಳೆ ನಾವು ದೆಹಲಿಯಲ್ಲಿ ರೈತ-ಟ್ರಾಕ್ಟರ್‌ ಪರೇಡ್‌ ಹಮ್ಮಿಕೊಳ್ಳುತ್ತಿದ್ದೇವೆ. ಕಳೆದ ಎರಡು ತಿಂಗಳುಗಳಿಂದ, ಕೃಷಿ ಕಾಯ್ದೆಗಳ ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯ ಸುತ್ತಲೂ ಆರು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಲಕ್ಷಾಂತರ ಜನರು ದೆಹಲಿಯನ್ನು ತಲುಪಿದ್ದಾರೆ. ಒಂದೂವರೆ ಲಕ್ಷ ಟ್ರಾಕ್ಟರ್‌ಗಳು ದೆಹಲಿ ತಲುಪಿವೆ. ಇನ್ನೂ ಬರಲಿವೆ” ಎಂದು ಅವರು ಹೇಳಿದ್ದಾರೆ.

ದೆಹಲಿಯ ಗಡಿಗಳಲ್ಲಿ ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರು ಇದುವರೆಗೂ ಗಮನ ಸೆಳೆಯುವ ವಿಭಿನ್ನ ಹೋರಾಟವನ್ನು ನಡೆಸಿದ್ದಾರೆ. ಟೋಲ್‌ ಪ್ಲಾಜಾಗಳಿಗೆ ಮುತ್ತಿಗೆ ಹಾಕಿ ವಾಹನಗಳು ಉಚಿತವಾಗಿ ಸಂಚರಿಸುವಂತೆ ಮಾಡುವುದು, ಹೆದ್ದಾರಿ ತಡೆ ನಡೆಸುವುದು, ದೇಶವ್ಯಾಪಿ ಬಂದ್‌ಗೆ ಕರೆ ನೀಡುವುದು ಮಾಡಿದ್ದಾರೆ. ತಮ್ಮ ಹೋರಾಟದ 2 ತಿಂಗಳ ಅಂಗವಾಗಿ ಜನವರಿ 26 ರಂದು ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ. ಇದರ ಮುಂದಿನ ನಡೆಯಾಗಿ ಪಾರ್ಲಿಮೆಂಟ್ ಚಲೋ ನಡೆಯಲಿದೆ.

ಇದುವರೆಗೂ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವೆ 11 ಸುತ್ತಿನ ಮಾತುಕತೆಗಳು ನಡೆದಿವೆಯಾದರೂ ಒಮ್ಮತದ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಒಂದೂವರೆ ವರ್ಷ ತಡೆಹಿಡಿಯುವುದಾಗಿ ಹೇಳಿದರೆ ರೈತರು ಕಾಯ್ದೆಗಳ ಸಂಪೂರ್ಣ ರದ್ದತಿಗೆ ಒತ್ತಾಯಿಸಿದ್ದಾರೆ. ಜೊತೆಗೆ ಎಂಎಸ್‌ಪಿ ಖಾತ್ರಿಗೊಳಿಸುವ ಕಾಯ್ದೆ ಜಾರಿಗಾಗಿ ರೈತರು ಆಗ್ರಹಿಸಿದ್ದಾರೆ.

ಹೋರಾಟವನ್ನು ಹಂತ ಹಂತವಾಗಿ ತೀವ್ರಗೊಳಿಸಲು ರೈತರು ನಿರ್ಧರಿಸಿದ್ದಾರೆ. ನಾಳೆಯ ಟ್ರ್ಯಾಕ್ಟರ್ ರ್ಯಾಲಿಯಂತೂ ವಿಶ್ವದ ಗಮನ ಸೆಳೆದಿದೆ. ಈ ರ್ಯಾಲಿ ತಡೆಯಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಶತಾಯ-ಗತಾಯ ಪ್ರಯತ್ನಪಟ್ಟರೂ ಸಾಧ್ಯವಾಗಿಲ್ಲ. ನಾಳೆ ರೈತರು ಶಾಂತಿಯುತವಾಗಿ ಟ್ರ್ಯಾಕ್ಟರ್ ಪರೇಡ್ ನಡೆಸುವ ಮೂಲಕ ಹೋರಾಟವನ್ನು ವಿಶ್ವಕ್ಕೆ ಸಾರಲು ಮುಂದಾಗಿದ್ದಾರೆ.

ಗಣರಾಜ್ಯೋತ್ಸದ ದಿನ ದೆಹಲಿಯಲ್ಲಿ ಟ್ರಾಕ್ಟರ್ ಪರೇಡ್‌ ನಡೆಸುತ್ತಿರುವಾಗಲೇ ದೇಶದ ವಿವಿಧ ರಾಜ್ಯಗಳಲ್ಲಿ ಗಣತಂತ್ರ ಪರೇಡ್, ಟ್ರಾಕ್ಟರ್ ಪರೇಡ್‌ ಹೆಸರಿನಲ್ಲಿ ರೈತರ ಬೃಹತ್‌ ರ್‍ಯಾಲಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಸಂಘಟಿಸಲಾಗುತ್ತಿರುವ ಈ ಹೋರಾಟಕ್ಕೆ ಸಂಯುಕ್ತ ಕಿಸಾನ್‌ ಮೋರ್ಚಾ ಅಭಿನಂದಿಸಿದೆ.


ಇದನ್ನೂ ಓದಿ: ದಕ್ಷಿಣ ಭಾರತದ ರಾಜ್ಯಗಳಲ್ಲಿ ರೈತರ ಟ್ರಾಕ್ಟರ್‌ ಪರೇಡ್‌; ಸಂಯುಕ್ತ ಕಿಸಾನ್‌ ಮೋರ್ಚಾದಿಂದ ಅಭಿನಂದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...