Homeಮುಖಪುಟಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

- Advertisement -
- Advertisement -

ಸಂಸತ್ತಿನ ಬಜೆಟ್ ಅಧಿವೇಶನ ಶುಕ್ರವಾರ (ಜ.31) ಆರಂಭಗೊಂಡಿತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದರು.

ಕಳೆದ ಡಿಸೆಂಬರ್ 24ರಂದು ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಪ್ರಯಾಗ್‌ರಾಜ್‌ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರಿಗೆ ಗೌರವ ಸಲ್ಲಿಸುವ ಮೂಲಕ ರಾಷ್ಟ್ರಪತಿ ತನ್ನ ಭಾಷಣ ಪ್ರಾರಂಭಿಸಿದರು.

“ಮೂರನೇ ಅವಧಿಯ ಕೇಂದ್ರದ ಎನ್‌ಡಿಎ ಸರ್ಕಾರ “ಹಿಂದಿಗಿಂತ ಮೂರು ಪಟ್ಟು ವೇಗದಲ್ಲಿ ಕೆಲಸ ಮಾಡುತ್ತಿದೆ” ಎಂದು ರಾಷ್ಟ್ರಪತಿ ಕೊಂಡಾಡಿದರು.

ರಾಷ್ಟ್ರಪತಿಗಳ ಭಾಷಣದ ನಂತರ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಲೋಕಸಭೆಯಲ್ಲಿ ಮಧ್ಯಾಹ್ನ 12 ಗಂಟೆಗೆ ಮತ್ತು ರಾಜ್ಯಸಭೆಯಲ್ಲಿ ಮಧ್ಯಾಹ್ನ 2 ಗಂಟೆಗೆ ಆರ್ಥಿಕ ಸಮೀಕ್ಷೆ ವರದಿ ಮಂಡನೆಯಾಗಲಿದೆ. ಶನಿವಾರ (ಫೆ.1) ವಿತ್ತ ಸಚಿವೆ 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದಾರೆ.

ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಆರ್ಥಿಕ ವಿಭಾಗವು ಸಿದ್ಧಪಡಿಸಿರುವ ಮತ್ತು ಮುಖ್ಯ ಆರ್ಥಿಕ ಸಲಹೆಗಾರರ ​​ಮೇಲ್ವಿಚಾರಣೆಯಲ್ಲಿ ರೂಪಿಸಲಾದ ಆರ್ಥಿಕ ಸಮೀಕ್ಷೆಯು, 2024–25ರ (ಏಪ್ರಿಲ್–ಮಾರ್ಚ್) ಆರ್ಥಿಕತೆಯ ಸ್ಥಿತಿ ಮತ್ತು ವಿವಿಧ ಸೂಚಕಗಳ ಒಳನೋಟಗಳನ್ನು ಮತ್ತು ಮುಂದಿನ ಹಣಕಾಸು ವರ್ಷದ ಮುನ್ನೋಟವನ್ನು ಒದಗಿಸಲಿದೆ.

ಬಜೆಟ್‌ ಅಧಿವೇಶನದಲ್ಲಿ, ಬ್ಯಾಂಕಿಂಗ್ ನಿಯಮಗಳು ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿರುವ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ-2024 ಮತ್ತು ಭಾರತೀಯ ರೈಲ್ವೆಯ ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸುವತ್ತ ಗಮನಹರಿಸಲಿದೆ ಎನ್ನಲಾದ ರೈಲ್ವೆ (ತಿದ್ದುಪಡಿ) ಮಸೂದೆ-2024 ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳು ಮಂಡನೆಯಾಗುವ ನಿರೀಕ್ಷೆಯಿದೆ.

ಗಮನಾರ್ಹವಗಿ, ದೇಶದಾದ್ಯಂತ ವಿಪತ್ತು ಪ್ರತಿಕ್ರಿಯೆ ಕಾರ್ಯವಿಧಾನಗಳನ್ನು ಸುಧಾರಿಸುತ್ತದೆ ಎನ್ನಲಾದ ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ 2024, ಧಾರ್ಮಿಕ ದತ್ತಿಗಳ ನಿರ್ವಹಣೆಯನ್ನು ಸುಧಾರಿಸುತ್ತೆ ಎನ್ನಲಾದ ವಕ್ಫ್ (ತಿದ್ದುಪಡಿ) ಮಸೂದೆ-2024 ಮತ್ತು ಮುಸಲ್ಮಾನ್ ವಕ್ಫ್ (ರದ್ದತಿ) ಮಸೂದೆ-2024 ಕೂಡ ಮಂಡಿಸುವ ಸಾಧ್ಯತೆಯಿದೆ.

ಸರ್ಕಾರದ ಶಾಸಕಾಂಗ ಕಾರ್ಯಸೂಚಿಯಲ್ಲಿ ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಮಸೂದೆ- 2024, ರೈಲ್ವೆ (ತಿದ್ದುಪಡಿ) ಮಸೂದೆ- 2024, ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ-2024, ತೈಲಕ್ಷೇತ್ರಗಳು (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ಮಸೂದೆ-2024, ಬಾಯ್ಲರ್ ಮಸೂದೆ-2024, ವಕ್ಫ್ (ತಿದ್ದುಪಡಿ) ಮಸೂದೆ- 2024, ಕರಾವಳಿ ಸಾಗಣೆ ಮಸೂದೆ-2024, ವ್ಯಾಪಾರಿ ಸಾಗಣೆ ಮಸೂದೆ-2024 ಮತ್ತು ಹಣಕಾಸು ಮಸೂದೆ- 2025 ಸೇರಿವೆ.

ಬಜೆಟ್ ಅಧಿವೇಶನದ ಮೊದಲ ಭಾಗವು ಫೆಬ್ರವರಿ 13 ರವರೆಗೆ ಮುಂದುವರಿಯಲಿದೆ. ವಿರಾಮದ ನಂತರ, ಎರಡೂ ಸದನಗಳು ಮಾರ್ಚ್ 10 ರಂದು ಮತ್ತೆ ಪ್ರಾರಂಭಗೊಳ್ಳಲಿವೆ. ಏಪ್ರಿಲ್ 4 ರಂದು ಬಜೆಟ್ ಅಧಿವೇಶನ ಮುಕ್ತಾಯಗೊಳ್ಳಲಿದೆ.

90ರ ದಶಕದ ನಂತರ ಕಾಂಗ್ರೆಸ್ ದಲಿತ-ಒಬಿಸಿ ವಿಶ್ವಾಸ ಕಳೆದುಕೊಂಡಿತು: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...