ಲಾಕ್‌ಡೌನ್ ಕಾರಣಕ್ಕೆ ವಲಸೆ ಬಂದಿರುವ ಕೂಲಿ ಕಾರ್ಮಿಕರು ಸಂಕಷ್ಟದಲ್ಲಿರುವುದರಿಂದ ಬಿಲ್ಡರ್‌ಗಳೇ ಅವರವರ ಕಾರ್ಮಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಬೇಕೆಂದು ಕಂದಾಯ ಸಚಿವ ಆರ್ ಅಶೋಕ್ ತಾಕೀತು ಮಾಡಿದ್ದಾರೆ.
ಬೆಂಗಳೂರಿನ ನೂರಾರು ಬಿಲ್ಡರ್ಸ್‌ಗಲ ಅಡಿಯಲ್ಲಿ 1,68,000 ನೊಂದಾಯಿತ ಕೂಲಿ ಕಾರ್ಮಿಕರಿದ್ದಾರೆ. ಆ ಕಾರ್ಮಿಕರು ಎಲ್ಲಿ ಕೆಲಸ ಮಾಡುತ್ತಿದ್ದಾರೋ ಅಲ್ಲಿಯೇ ಅವರಿಗೆ ಅವರ ಮಾಲೀಕರು ಊಟ, ವಸತಿ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.
ಇಂದು ಬಿಲ್ಡರ್ಸ್‌ಗಳ ಸಭೆ ಕರೆದು ಅವರಿಗೆ ಈ ಸೂಚನೆಗಳನ್ನು ನೀಡುತ್ತೇವೆ ಎಂದ ಸಚಿವರು, ಒಂದು ವೇಳೆ ಊಟದ ವಸತಿಯ ವ್ಯವಸ್ಥೇ ಮಾಡದವರ ಬಿಲ್ಡರ್ ಲೈಸೆನ್ಸ್ ರದ್ದು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾರ್ಮಿಕರ ಊಟ ವಸತಿಗೆ ತಗುಲುವು ಪೂರ್ತಿ ವೆಚ್ಚವನ್ನು ಬಿಲ್ಡರ್‌ಗಳೇ ಭರಿಸಬೇಕು, ಈ ಕುರಿತು ಇಂದಿನ ಸಭೆಯಲ್ಲಿ ಅವರಿಗೆ ನಿರ್ದೇಶನ ಕೊಡ್ತೇನೆ ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಇನ್ನೊಂದೆಡೆ ಸರಕು ಸಾಗಣೆ ವಾಹನಗಳನ್ನು ತಡೆಯದಂತೆ ಸೂಚಿಸಿದ್ದೇವೆ, ಒಂದು ವೇಳೆ ತಡದರೆ ಅಂಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಇದೆ, ಅಗತ್ಯ ವಸ್ತುಗಳು, ತರಕಾರಿ, ಹಣ್ಣಿನ ಸಾಗಾಟಕ್ಕೆ ಮತ್ತು ಮಾರಾಟಕ್ಕೆ ಭಂಗ ಇಲ್ಲ ರೈತರು ಮತ್ತು ಗ್ರಾಹಕರ ಹಿತ ಕಾಪಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಅಗತ್ಯ ವಸ್ತುಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವವರ ಮೇಲೂ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.


