Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...